ಸಮಗ್ರ ನೀರಾವರಿಗೆ ಕ್ರಮ
Team Udayavani, Aug 3, 2017, 9:29 AM IST
ಹಟ್ಟಿ ಚಿನ್ನದ ಗಣಿ: ಲಿಂಗಸುಗೂರು ಮತಕ್ಷೇತ್ರವನ್ನು ಸಮಗ್ರ ನೀರಾವರಿಗೊಳಪಡಿಸಿ ರೈತರ ಬದುಕು ಬಂಗಾರವಾಗಲು ನೀರಾವರಿ ಯೋಜನೆ ಜಾರಿಗೆ ಕ್ರಮ ವಹಿಸಲಾಗುವುದು ಎಂದು ಶಾಸಕ ಮಾನಪ್ಪ ವಜ್ಜಲ್ ಹೇಳಿದರು.
ಜಿಲ್ಲಾ ಪಂಚಾಯ್ತಿ ರಾಯಚೂರು, ಕೃಷ್ಣಾ ಭಾಗ್ಯ ಜಲ ನಿಗಮ, ಕ್ಯಾಸುಟೆಕ್ ಏಜೆನ್ಸಿ ವತಿಯಿಂದ ಬುಧವಾರ ಸಮೀಪದ ಗೆಜ್ಜಲಗಟ್ಟ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು. ಗೆಜ್ಜಲಗಟ್ಟಾ-ನಿಲೋಗಲ್ ಗ್ರಾಮಗಳು ಸೇರಿದಂತೆ ಸುತ್ತಮುತ್ತಲ ಹಳ್ಳಿಯ ಮಕ್ಕಳಿಗೆ ಅನುಕೂಲಕ್ಕಾಗಿ ಕಾಲೇಜು ಹಾಗೂ ವಸತಿ ನಿಲಯಗಳ ನಿರ್ಮಾಣಕ್ಕೆ ಸರ್ಕಾರಕ್ಕೆ ಮನವಿ ಮಾಡಲಾಗಿದೆ. ಶೀಘ್ರದಲ್ಲೇ ಮಂಜೂರಿಯಾಗುವ ಭರವಸೆ ಇದೆ ಎಂದರು.
ಗೆಜ್ಜಲಗಟ್ಟಾ, ಹಿರೇಹೆಸರೂರು, ನಿಲೋಗಲ್, ಕರಡಕಲ್, ಗೊರೇಬಾಳ ತಾಂಡಾ, ಚಿತ್ತಾಪುರ, ಗೌಡೂರು, ಗುರುಗುಂಟಾ, ಕೋಠಾ, ಕಡ್ಡೋಣಿ, ಬಂಡೇಬಾವಿ ಸೇರಿ 36 ಹಳ್ಳಿಗಳಲ್ಲಿ ಎಚ್‌ಕೆಆರ್‌ಡಿಬಿ ಯೋಜನೆಯಡಿ 60 ಲಕ್ಷ ರೂ. ವೆಚ್ಚದಲ್ಲಿ ಚರಂಡಿ ನಿರ್ಮಾಣ, ಆರ್‌ಐಡಿಎಫ್-19
ಯೋಜನೆಯಡಿ ಗೆಜ್ಜಲಗಟ್ಟಾದಲ್ಲಿ 26 ಲಕ್ಷ ವೆಚ್ಚದಲ್ಲಿ ಪಶು ಆಸ್ಪತ್ರೆ ನಿರ್ಮಾಣ, 2016-17ನೇ ಸಾಲಿನ ಕೃಷ್ಣಾ ಭಾಗ್ಯ ಜಲ ನಿಗಮದಿಂದ ಎಸ್‌ಇಪಿ ಯೋಜನೆಯಡಿ 1.87 ಕೋಟಿ ವೆಚ್ಚದಲ್ಲಿ ನೀರಾವರಿ ಸೌಕರ್ಯ, ಟಿಎಸ್‌ಪಿ ಯೋಜನೆಯಡಿ 4.81 ಕೋಟಿ ವೆಚ್ಚದಲ್ಲಿ ಪರಿಶಿಷ್ಟ ಜಾತಿ, ಪಂಗಡದವರಿಗೆ ನೀರಾವರಿ ಸೌಕರ್ಯದ ಕಾಮಗಾರಿಗಳಿಗೆ ಶಾಸಕ ಮಾನಪ್ಪ ವಜ್ಜಲ್ ಚಾಲನೆ ನೀಡಿದರು.
ತಾಪಂ ಅಧ್ಯಕ್ಷೆ ಶ್ವೇತಾ ಯಂಕನಗೌಡ ಪಾಟೀಲ, ಗ್ರಾಪಂ ಅಧ್ಯಕ್ಷೆ ಪುಷ್ಪಾ ಶಿವಯ್ಯ, ಮುಖಂಡರಾದ ಲಿಂಗರಾಜ ಭೂಪಾಲ, ಗಿರಿಮಲ್ಲನಗೌಡ, ಗುಂಡಪ್ಪ ಗೌಡ ಪೊಲೀಸ್ ಪಾಟೀಲ, ಎಪಿಎಂಸಿ ನಿರ್ದೇಶಕ ಅಮರೇಶ ದೊಡ್ಡಪ್ಪ, ಯಂಕನಗೌಡ ಐದನಾಳ, ಶರಣಬಸವ ಗುಡದನಾಳ,
ಅಮರಪ್ಪ ಗೆಜ್ಜಲಗಟ್ಟಾ, ಅಧಿಕಾರಿಗಳಾದ ಕೆಬಿಜೆಎಲ್‌ನ ಹರ್ಷ, ಜಿಪಂ ಎಇಇ ಅಭಿದಲಿ, ಪಶು ವೈದ್ಯಾಧಿ]ಕಾರಿ ಡಾ| ರಾಚಪ್ಪ, ಚಿದಾನಂದ ಕ್ಯಾಸುಟೆಕ್ ಅಧಿಕಾರಿಗಳು ಇದ್ದರು.
ಮೆರವಣಿಗೆ: ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಲು ಆಗಮಿಸಿದ ಶಾಸಕ ಮಾನಪ್ಪ ವಜ್ಜಲ್ ಅವರನ್ನು ಗೆಜ್ಜಲಗಟ್ಟಾ ಗ್ರಾಮಸ್ಥರು ಭಾಜಾ, ಭಜಂಂತ್ರಿಯೊಂದಿಗೆ ಸ್ವಾಗತಿಸಿ ಮೆರವಣಿಗೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagavalli Bangale Movie: ಸೆನ್ಸಾರ್ ಪಾಸಾದ ನಾಗವಲ್ಲಿ
Sky Force: ಭಾರತದ ಮೊದಲ ವೈಮಾನಿಕ ದಾಳಿಯ ʼಸ್ಕೈ ಫೋರ್ಸ್ʼ ಟ್ರೇಲರ್ ಔಟ್- ಮಿಂಚಿದ ಅಕ್ಷಯ್
Doddaballapura: ಘಾಟಿ ಕ್ಷೇತ್ರದಲ್ಲಿ ಶ್ರೀ ಸುಬ್ರಹ್ಮಣ್ಯಸ್ವಾಮಿ ಬ್ರಹ್ಮ ರಥೋತ್ಸವ
Naxalite: ಮುಂಡಗಾರು ಲತಾ ಸೇರಿ ಆರು ನಕ್ಸಲರು ಶೀಘ್ರ ಮುಖ್ಯವಾಹಿನಿಗೆ: ಪ್ರಕ್ರಿಯೆ ಚುರುಕು
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.