ಜಾತಿ ಸಂಘರ್ಷದಿಂದ ದೇಶ ಕಟ್ಟಲು ಅಸಾಧ್ಯ
Team Udayavani, Aug 9, 2022, 4:47 PM IST
ರಾಯಚೂರು: ಜಾತಿ, ಧರ್ಮಗಳ ಹೆಸರಿನಲ್ಲಿ ಸಂಘರ್ಷ ಮಾಡುವ ಮೂಲಕ ಯಾವ ದೇಶವನ್ನೂ ಕಟ್ಟಿದ ನಿದರ್ಶನಗಳಿಲ್ಲ. ನಾವೆಲ್ಲ ಒಂದೇ ಎಂಬ ಭಾವನೆಯಿಂದ ದೇಶಕ್ಕಾಗಿ ಶ್ರಮಿಸಿದಾಗ ಮಾತ್ರ ಸುಂದರ ರಾಷ್ಟ್ರ ನಿರ್ಮಾಣ ಸಾಧ್ಯವಾಗಲಿದೆ ಎಂದು ರಾಯಚೂರು ವಿಶ್ವವಿದ್ಯಾಲಯದ ಕುಲಪತಿ ಪ್ರೊ| ಹರೀಶ್ ರಾಮಸ್ವಾಮಿ ಅಭಿಪ್ರಾಯಪಟ್ಟರು.
ನಗರದ ಪಂಡಿತ್ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಸೋಮವಾರ 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ನಿಮಿತ್ತ ಹಮ್ಮಿಕೊಂಡಿದ್ದ “ಸ್ವಾತಂತ್ರ್ಯ ಹೋರಾಟದ ನೆನಪುಗಳು’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಾತಿ, ಕೋಮು ಗಲಭೆಗಳಿಂದ ಯುವ ಸಮೂಹ ವಿಚಲಿತಗೊಳ್ಳದೇ ಸರಿ-ತಪ್ಪು ಕೂಲಂಕಷವಾಗಿ ಅರಿತು ಮುನ್ನಡೆಯಬೇಕು. ಎಲ್ಲರೂ ಜಾತಿ, ಧರ್ಮ ಬದಿಗಿರಿಸಿ, ನಾವೆಲ್ಲ ಭಾರತೀಯರು ಒಂದೇ ಎಂಬ ಭಾವನೆ ಮೂಡಿದಾಗ ಮಾತ್ರ ಅಭಿವೃದ್ಧಿ ಸಾಧ್ಯವಾಗಲಿದೆ ಎಂದರು. ನಾವು ಓದಿದ್ದಷ್ಟೇ ಇತಿಹಾಸ ಎಂದುಕೊಳ್ಳುವುದಲ್ಲ. ನಾವು ಓದದೇ ಇರುವ ಸಾಕಷ್ಟು ವಿಷಯಗಳೂ ಇತಿಹಾಸ ಪಠ್ಯಗಳಲ್ಲಿ ದಾಖಲಾಗದಿರಬಹುದು. ಅಂಥ ಸಂಗತಿಗಳನ್ನು ಹೆಕ್ಕಿ ತೆಗೆದು ಜನರಿಗೆ ತಿಳಿಸುವ ಕೆಲಸವಾಗಬೇಕಿದೆ. ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಗತಿಸಿದ್ದು, ಇದನ್ನು ದೊಡ್ಡ ಹಬ್ಬದ ರೀತಿ ಇಡೀ ದೇಶವೇ ಆಚರಿಸಲು ಸಿದ್ಧತೆ ನಡೆಸಲಾಗುತ್ತಿದೆ ಎಂದರು.
ಇತಿಹಾಸದ ಮರು ಅಧ್ಯಯನ ನಡೆಯಬೇಕಿದೆ. ಸ್ವಾತಂತ್ರ್ಯ ಹೋರಾಟದ ಕಿಚ್ಚು ದೇಶದ ಪ್ರತಿ ಹಳ್ಳಿ-ಹಳ್ಳಿಗೂ ವ್ಯಾಪಿಸಿತ್ತು. ಪ್ರತಿ ಹಳ್ಳಿಯಿಂದಲೂ ಹೋರಾಟಗಾರರು ಸಂಗ್ರಾಮದಲ್ಲಿ ಧುಮುಕಿದ್ದರು. ಧಾರವಾಡದಲ್ಲಿಯೇ ನೂರಕ್ಕಿಂತ ಹೆಚ್ಚು ಹೋರಾಟಗಾರರಿದ್ದಾರೆ. ಇನ್ನೂ ಎಷ್ಟೋ ಜನ ಎಲೆಮರೆ ಕಾಯಿಯಂತೆ ಉಳಿದಿರಬಹುದು. ಅಂಥವರನ್ನು ಗುರುತಿಸಿ- ಗೌರವಿಸುವ ಕೆಲಸವಾಗಬೇಕಿದೆ ಎಂದರು.
ಘಟನೆ ಸತ್ಯಾಸತ್ಯತೆ ಅರಿಯದೆ ಪರ-ವಿರೋಧ ಮಾಡುವುದು ಸರಿಯಲ್ಲ. ಯಾವುದೇ ವಿಷಯವಾಗಲಿ ಮೊದಲು ಪರೀಕ್ಷಿಸಿ ಗೊಂದಲ ನಿವಾರಿಸಿಕೊಂಡ ಬಳಿಕವೇ ಅದರ ಬಗ್ಗೆ ಮಾತನಾಡುವುದು ಸೂಕ್ತ. ಏನಾದರೂ ಪ್ರಶ್ನೆಗಳಿದ್ದಲ್ಲಿ ಉತ್ತರ ತಿಳಿಯುವ ಪ್ರಯತ್ನ ಮಾಡಬೇಕು. ನೇರವಾಗಿ ಮಾತನಾಡುವ ಶಕ್ತಿ ನಮಗಿಲ್ಲ. ಆದರೆ, ದೇಶಕ್ಕೆ ಅಗೌರವಾದರೆ, ಅನ್ಯಾಯವಾಗುತ್ತಿರುವುದು ನಿಜವಾದಲ್ಲಿ ಪ್ರತಿಯೊಬ್ಬರಿಗೂ ಪ್ರಶ್ನಿಸುವ ಹಕ್ಕಿದೆ ಎಂದರು.
ಕಲಬುರಗಿಯ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ರೋಹಿಣಾಕ್ಷ ಶಿರ್ಲಾಲು ಉಪನ್ಯಾಸ ಮಾಡಿ, ಇತಿಹಾಸದಲ್ಲಿ ಸ್ವಾತಂತ್ರÂದ ಹೋರಾಟದ ಬಗ್ಗೆ ತಪ್ಪು ವ್ಯಾಖ್ಯಾನ ಮಾಡಿದ್ದು, ಇಂದಿಗೂ ಅದನ್ನೇ ಮುಂದುವರಿಸಿಕೊಂಡು ಹೋಗಲಾಗುತ್ತಿದೆ. ಕೇವಲ ಕಾಂಗ್ರೆಸ್ ಪಕ್ಷ ಹಾಗೂ ಮಹಾತ್ಮ ಗಾಂಧಿ ಮಾತ್ರ ಸ್ವಾತಂತ್ರ್ಯ ಹೋರಾಟಗಾರರು ಎಂಬರ್ಥದಲ್ಲಿ ಇತಿಹಾಸ ಸೃಷ್ಟಿಸಿರುವುದು ವಿಪರ್ಯಾಸ. ಲಕ್ಷಾಂತರ ಜನರ ತ್ಯಾಗ-ಬಲಿದಾನದಿಂದಲೇ ಈ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತ್ತು ಎನ್ನುವುದು ಎಲ್ಲರ ಮನಗಾಣಬೇಕಿದೆ ಎಂದರು.
ಕೇವಲ ಬ್ರಿಟಿಷರ ವಿರುದ್ಧದ ಹೋರಾಟಕ್ಕೆ ಸ್ವಾತಂತ್ರ್ಯ ಹೋರಾಟ ಎನ್ನುವುದು ಸರಿಯಲ್ಲ. ಡಚ್ಚರು, ಫ್ರೆಂಚರು, ಮೊಘಲರು, ಗ್ರೀಕರು ಹಾಗೂ ಹೈದ್ರಾಬಾದ್ ನಿಜಾಮರ ವಿರುದ್ಧವೂ ನಾನಾ ಹೋರಾಟಗಳು ನಡೆದಿದ್ದು, ಅವುಗಳನ್ನು ಸ್ವಾತಂತ್ರ್ಯ ಹೋರಾಟ ಎಂದೇ ಪರಿಗಣಿಸಬೇಕು ಎಂದರು.
ವಿವಿಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ವಿದ್ಯಾರ್ಥಿಗಳು ಆರಂಭಿಸಿದ ಕೃಷ್ಣ-ತುಂಗಾ ಪ್ರಾಯೋಗಿಕ ಪತ್ರಿಕೆ ಬಿಡುಗಡೆ ಮಾಡಲಾಯಿತು. ರಾಯಚೂರು ವಿವಿ ಸಿಂಡಿಕೇಟ್ ಸದಸ್ಯ ಶಿವಬಸಪ್ಪ ಮಾಲಿಪಾಟೀಲ್ ಪ್ರಾಸ್ತಾವಿಕ ಮಾತನಾಡಿದರು.
ಸಿಂಡಿಕೇಟ್ ಸದಸ್ಯ ಸಂಜಯಕುಮಾರ ಮೂಥಾ, ಕುಲಸಚಿವ ಪ್ರೊ| ವಿಶ್ವನಾಥ ಎಂ., ಹಣಕಾಸು ಅಧಿಕಾರಿ ಪ್ರೊ| ಪಾರ್ವತಿ ಸಿ.ಎಸ್, ವಿದ್ಯಾರ್ಥಿ ಕಲ್ಯಾಣಾಧಿಕಾರಿ ಜಿ.ಎಸ್. ಬಿರಾದಾರ್, ಜಗದೀಶ ವಕೀಲ, ಡಾ|ನಾಗರಾಜ ಬಾಲ್ಕಿ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
PM Modi;ಇಂದು 71000ಕ್ಕೂ ಅಧಿಕ ಮಂದಿಗೆ ಉದ್ಯೋಗ ಪತ್ರ ವಿತರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.