ಜನಾಂದೋಲನ ಮಹಾಮೈತ್ರಿ ಆಭ್ಯರ್ಥಿಗಳಿಗೆ ಆಶೀರ್ವದಿಸಿ
Team Udayavani, Mar 27, 2018, 5:31 PM IST
ಮುದಗಲ್ಲ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಜನಾಂದೋಲನಗಳ ಮಹಾಮೈತ್ರಿ ಅಭ್ಯರ್ಥಿಗಳನ್ನು ಬೆಂಬಲಿಸಿ ಆಯ್ಕೆ ಮಾಡುವ ಮೂಲಕ ಎಲ್ಲ ರಾಜಕೀಯ ಪಕ್ಷಗಳಿಗೆ ಮತದಾರರು ತಕ್ಕ ಉತ್ತರ ನೀಡಬೇಕು ಎಂದು ಲಿಂಗಸುಗೂರು ಕ್ಷೇತ್ರದ ನಿಯೋಜಿತ ಅಭ್ಯರ್ಥಿ ಆರ್. ಮಾನಸಯ್ಯ ಹೇಳಿದರು.
ಸ್ಥಳೀಯ ಪುರಸಭೆ ಆವರಣದಲ್ಲಿ ಜನಾಂದೋಲನ ಮಹಾಮೈತ್ರಿಯಿಂದ ಹಮ್ಮಿಕೊಂಡಿದ್ದ ಜನಾಧಿಕಾರಕ್ಕಾಗಿ ಜನರ ಬಹಿರಂಗ ಸಭೆಯಲ್ಲಿ ಅವರು ಮಾತನಾಡಿದರು. ರಾಜ್ಯ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಇದಕ್ಕೆ ಬಿಜೆಪಿ ಕೂಡ ಹೊರತಾಗಿಲ್ಲ. ಬಿಜೆಪಿ ಕೋಮು ಸೌಹಾರ್ದ ಕೆಡಿಸುವ ಹುನ್ನಾರ ನಡೆಸಿದೆ. ಅಲ್ಪಸಂಖ್ಯಾತರ, ದಲಿತರ ಮತ್ತು ಹಿಂದುಳಿದ ವರ್ಗಗಳ ಆಹಾರ ಪದ್ಧತಿ ಟೀಕಿಸುತ್ತಾ ಗೋರಕ್ಷಣೆ ಹೆಸರಿನಲ್ಲಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸುತ್ತಿದ್ದಾರೆ ಎಂದು ದೂರಿದರು.
ಪ್ರಧಾನಿ ನರೇಂದ್ರ ಮೋದಿ 2014ರ ಚುನಾವಣೆಯಲ್ಲಿ ನೀಡಿದ ಭರವಸೆ ಈಡೇರಿಸುವಲ್ಲಿ ವಿಫಲರಾಗಿದ್ದಾರೆ. ದೇಶದಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ, ವಿದೇಶದಲ್ಲಿ ಭಾರತೀಯರು ಇಟ್ಟಿರುವ ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ 15 ಲಕ್ಷ ರೂ. ಜಮೆ ಮಾಡುವುದಾಗಿ ಹೇಳಿದ್ದರು ಆದರೆ ಯಾವೊಂದು ಭರವಸೆ ಈಡೇರಿಸದೇ ದೇಶದ ಜನರನ್ನು ವಂಚಿಸಿದ್ದಾರೆ. ನೋಟ್ ಬ್ಯಾನ್ ಮಾಡಿ ಜನರ ಜೀವನದ ಮೇಲೆ ಪ್ರಹಾರ ನಡೆಸಿದರು. ಒಂದು ರೀತಿ ತುರ್ತು ಪರಿಸ್ಥಿತಿ ಹೇರಿದರು. ಬಡವರು ಬ್ಯಾಂಕ್ ಮುಂದೆ ಸರದಿಯಲ್ಲಿ ನಿಲ್ಲುವಂತಾಯಿತು. ಆದರೆ ಕಪ್ಪು ಹಣದ ಕುಳಗಳು ಯಾರೊಬ್ಬರೂ ಬ್ಯಾಂಕ್ ಮುಂದೆ ನಿಂತುಕೊಳ್ಳಲಿಲ್ಲ. ದೊಡ್ಡ
ಕಪ್ಪು ಧನಿಕರು ಬ್ಯಾಂಕ್ ಹಿಂಬಾಗಿಲಿನಿಂದ ಕಪ್ಪು ಹಣವನ್ನು ಬಿಳಿಯಾಗಿಸಿಕೊಂಡರು. ಪ್ರತಿಯೊಂದು ಬಾಷಣದಲ್ಲಿ ನನಗೆ 60 ತಿಂಗಳನ್ನ ಕೊಡಿ ಸಾಕು, ನಾನು ದೇಶದ ಚೌಕಿದಾರನಾಗಿ ಸೇವೆ ಮಾಡುತ್ತೇನೆ ಅಂತ ಹೇಳುತ್ತಾರೆ. ಆದರೆ ನೀರವ್ ಮೋದಿ, ವಿಜಯ ಮಲ್ಯರಂತಹ ಉದ್ಯಮಿಗಳು ದೇಶದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ವಿದೇಶಕ್ಕೆ ಪರಾರಿಯಾಗಿದ್ದರೂ, ನಮ್ಮ ದೇಶದ ಚೌಕಿದಾರ ಪ್ರಧಾನಿ ನೋಡಿಕೊಂಡು ಸುಮ್ಮನೆ ಕೂಡುತ್ತಾರೆ ಎಂದು ಟೀಕಾಪ್ರಹಾರ ನಡೆಸಿದರು. ಮತದಾರರು ಈ ಬಾರಿ ಜನಾಂದೋಲನ ಮಹಾಮೈತ್ರಿ ಅಭ್ಯರ್ಥಿಗಳಿಗೆ ಆಶೀರ್ವದಿಸುವ ಮೂಲಕ ಪರ್ಯಾಯ ಶಕ್ತಿ ಸೃಷ್ಟಿಗೆ ಮುಂದಾಗಬೇಕು ಎಂದು
ಕರೆ ನೀಡಿದರು. ಮುಖಂಡರಾದ ಎಂ.ಆರ್. ಬೇರಿ, ಅಮರಣ್ಣ ಗುಡಿಹಾಳ, ರಾಘವೇಂದ್ರ ಕುಷ್ಟಗಿ, ತಾಜುದ್ದೀನ್ ಹುಮನಾಬಾದ, ಎಂ.ಡಿ. ಅಮೀರ ಅಲಿ, ಜಿ. ಶೇಖರಯ್ಯ, ಕೆ.ನಾಗಲಿಂಗಸ್ವಾಮಿ, ಜಿ.ತಿಪ್ಪರಾಜ, ಅಬ್ದುಲ್ ಹಮೀದ್, ಡಿ.ಜಿ. ಶಿವು, ವೆಲ್ಫೆಧೀರ್ ಪಾರ್ಟಿ ಮುಖಂಡರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ
Bantwal: ತುಂಬೆ ಜಂಕ್ಷನ್; ಸರಣಿ ಅಪಘಾತ
Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು
Brahmavar: ಆರೂರು; ಬೆಂಕಿ ತಗಲಿ ಗಾಯಗೊಂಡಿದ್ದ ಮಹಿಳೆ ಸಾವು
Kalaburagi: ಟಿಟಿ ಟಯರ್ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.