ಗುಡಿಸಲು ಮುಕ್ತಿಗಾಗಿ ಶ್ರಮಿಸುವವರಿಗೆ ಮತ ನೀಡಿ
Team Udayavani, Nov 24, 2021, 3:27 PM IST
ಗುರುಮಠಕಲ್: ಮತಕ್ಷೇತ್ರದ ಗ್ರಾಪಂನಲ್ಲಿ ಯಾರು ಗುಡಿಸಲು ಮುಕ್ತಿಗಾಗಿ ಶ್ರಮಿಸುತ್ತಾರೋ ಅಂಥ ನಾಯಕನಿಗೆ ನಮ್ಮ ಮತ ನೀಡೋಣ ಎಂದು ಮತದಾರರಿಗೆ ಜೆಡಿಎಸ್ ಯುವ ನಾಯಕ ಶರಣುಗೌಡ ಕಂದಕೂರು ಕರೆ ನೀಡಿದರು.
ಯಾದಗಿರಿ-ಕಲಬುರ್ಗಿ ಜಿಲ್ಲೆಯ ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಪಟ್ಟಣದ ಹೀರಾ ಗಾರ್ಡನ್‌ನಲ್ಲಿ ಜೆಡಿಎಸ್ ಪಕ್ಷದಿಂದ ಆಯೋಜಿಸಿದ್ದ ಗ್ರಾಪಂ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ಪುರಸಭೆ ಅಧ್ಯಕ್ಷ ಮತ್ತು ಸದಸ್ಯರ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಜೆಡಿಎಸ್ ಪಕ್ಷದ ಅಭ್ಯರ್ಥಿ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿಲ್ಲ. ಆದರೂ ಮತದಾನದ ಹಕ್ಕು ಚಲಾಯಿಸಬೇಕು. ನಮ್ಮ ಮತದಾನ ಮತಕ್ಷೇತ್ರದ ಅಭಿವೃದ್ಧಿಗಾಗಿ ಇರಬೇಕು. ಪಕ್ಷದ ಹೈಕಮಾಂಡ್ ಆದೇಶದಂತೆ ಮತವನ್ನು ಯಾರಿಗೆ ಚಲಾಯಿಸಬೇಕು ಎಂಬುದನ್ನು ಪಕ್ಷ ನಿರ್ಧರಿಸುತ್ತದೆ. ಅದಕ್ಕೆ ಮತದಾರರು ಬದ್ಧರಾಗಿರಬೇಕು ಎಂದು ತಿಳಿಸಿದರು.
ಪುರಸಭೆ ಅಧ್ಯಕ್ಷ ಪಾಪಣ್ಣ ಮನ್ನೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಪಕ್ಷದ ಮುಖಂಡರಾದ ಬಸಣ್ಣ ದೇವರಹಳ್ಳಿ, ಆನಂತಪ್ಪ ಬೋಯಿನ್, ಅಮರೇಶ ರಾಠೊಡ್, ಸುರೇಶ ಚಿನ್ನರಾಠೊಡ, ತಾಲೂಕು ಘಟಕ ಯುವ ಅಧ್ಯಕ್ಷ ಜ್ಞಾನೇಶ್ವರರೆಡ್ಡಿ, ನರಸಪ್ಪ ಕೌಡಿ ಮಾತನಾಡಿದರು. ಪುರಸಭೆ ಅಧ್ಯಕ್ಷ, ಉಪಾಧ್ಯಕ್ಷ ಮತ್ತು ಸದಸ್ಯರು ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
Cricket: ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ
Arrested: ನಟ ಸುನಿಲ್ ಪಾಲ್, ಮುಸ್ತಾಕ್ ಅಪಹರಣ; ಎನ್‌ಕೌಂಟರ್ ಮೂಲಕ ಪ್ರಮುಖ ಆರೋಪಿ ಬಂಧನ
Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ
Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.