ಜಾಲಹಳ್ಳಿ ಜಿಪಂ: ನಾಳೆ ಮತದಾನ


Team Udayavani, Oct 27, 2018, 2:19 PM IST

ray-1.jpg

ದೇವದುರ್ಗ: ಜಾಲಹಳ್ಳಿ ಜಿಪಂ ಕ್ಷೇತ್ರದ ಸದಸ್ಯ ಗುರುರಾಜ ದೇಸಾಯಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಅ. 28ರಂದು ಬೆಳಗೆ 7:00ರಿಂದ 5:00ರ ವರೆಗೆ ಮತದಾನ ನಡೆಯಲಿದೆ ಎಂದು ಸಹಾಯಕ ಚುನಾಣಾಧಿಕಾರಿ, ತಹಶೀಲ್ದಾರ್‌ ಶಿವಶರಣಪ್ಪ ಕಟ್ಟೋಳಿ ತಿಳಿಸಿದರು.

ಪಟ್ಟಣದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಂತಿಯುತ ಮತದಾನಕ್ಕೆ ತಾಲೂಕು ಆಡಳಿತ ಈಗಾಗಲೇ ಸಕಲ ಸಿದ್ಧತೆ ಮಾಡಿಕೊಂಡಿದೆ. ಒಟ್ಟು 27054 ಮತದಾರರು ಇದ್ದಾರೆ. ಇದರಲ್ಲಿ 13192 ಪುರುಷರು, 13857 ಮಹಿಳೆಯರು ಮತ್ತು ಐವರು ಇತರೆ ಮತದಾರರು ಇದ್ದಾರೆ ಎಂದು ತಿಳಿಸಿದರು. 

ಒಟ್ಟು 31 ಮತಗಟ್ಟೆ ಸ್ಥಾಪಿಸಲಾಗಿದೆ. ಅದರಲ್ಲಿ ಅತಿಸೂಕ್ಷ್ಮ 10, ಸೂಕ್ಷ್ಮ 7, ಸಾಮಾನ್ಯ 14. ಚುನಾವಣೆ ಕರ್ತವ್ಯಕ್ಕೆ 175 ಸಿಬ್ಬಂದಿ ನಿಯೋಜಿಸಲಾಗಿದೆ. ಚುನಾವಣೆ ನಡೆಯುವ ಪ್ರತಿಯೊಂದು ಮತಗಟ್ಟೆ ಕೇಂದ್ರಗಳಿಗೆ ಈಗಾಗಲೇ ಅಗತ್ಯ ಸೌಲಭ್ಯ ಒದಗಿಸಲಾಗಿದೆ. ಅಂಗವಿಕ ಮತದಾರರಿಗೆ ಮತಗಟ್ಟೆಗೆ ಹೋಗಲು ರ್‍ಯಾಂಪ್‌ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಬಂದೋಬಸ್ತ್ಗಾಗಿ ನಾಲ್ವರು ಪಿಎಸ್‌ಐ, ಐವರು ಎಎಸ್‌ಐ,
17 ಜನ ಹೆಡ್‌ ಕಾನಸ್ಟೇಬಲ್‌, 31 ಜನ ಪೊಲೀಸರು, 24 ಜನ ಹೋಮ್‌ ಗಾರ್ಡ್‌ ನಿಯೋಜಿಸಲಾಗಿದೆ. ಅತಿ ಸೂಕ್ಷ್ಮ ಕೇಂದ್ರಗಳಲ್ಲಿ ದೃಶ್ಯ ಸೆರೆ ಹಿಡಿಯಲು ಪ್ರತಿ ಕೇಂದ್ರದಲ್ಲಿ ಚಿತ್ರಿಕರಣ ಮಾಡಲಾಗುತ್ತದೆ. ಮಿನಿವಿಧಾನಸೌಧ ಸಭಾಂಗಣದಲ್ಲಿ ಅ. 31ರಂದು ಬೆಳಗ್ಗೆ 8:00ಕ್ಕೆ ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದರು. 

ಜಾಲಹಳ್ಳಿ: ಜಾಲಹಳ್ಳಿ ಜಿಪಂ ಕ್ಷೇತ್ರಕ್ಕೆ ಅ. 28ರಂದು ನಡೆಯಲಿರುವ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಪಾಣಿ ಗೆಲುವು ಖಚಿತವಾಗಿದೆ ಎಂದು ಶಾಸಕ ಕೆ. ಶಿವನಗೌಡ ನಾಯಕ ಹೇಳಿದರು.

ಪಟ್ಟಣದ ಪ್ರಮುಖ ಬೀದಿಗಳಲ್ಲಿ ಶುಕ್ರವಾರ ರೋಡ್‌ ಶೋ ಮೂಲಕ ಬಿಜೆಪಿ ಅಭ್ಯರ್ಥಿ ಪರ ಪ್ರಚಾರ ನಡೆಸಿ ನಂತರ ಅವರು ಮಾತನಾಡಿದರು. ತಾವು ಮಂತ್ರಿಗಳಾಗಿ ಹಾಗೂ ಶಾಸಕರಾಗಿ ಜಾಲಹಳ್ಳಿ ಜಿಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಜಾಲಹಳ್ಳಿ ರಂಗನಾಥ ದೇವಸ್ಥಾನದ ಎರಡು ಗೋಪುರಗಳ ನಿರ್ಮಾಣ, ಅಂಬಿಗೇರ ಚೌಡಯ್ಯ ಭವನ, ವಾಲ್ಮೀಕಿ ಭವನ, ಹೈಟೆಕ್‌ ಗ್ರಂಥಾಲಯ ಕಟ್ಟಡ, ಸೂಮಾರು 30 ಕೋಟಿ ರೂ. ವೆಚ್ಚದಲ್ಲಿ ಸಿಸಿ ರಸ್ತೆ ಹಾಗೂ ಚರಂಡಿ ನಿರ್ಮಾಣ, ಶಾಲಾ ಕಟ್ಟಡಗಳು, ಬಸ್‌ ನಿಲ್ದಾಣ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕಗಳು, ವರಟಿ ಮಾರುತಿ ದೇವಸ್ಥಾನ, ಯಲ್ಲಮ್ಮ ದೇವರ ಮನೆ ನಿರ್ಮಾಣ ಸೇರಿದಂತೆ ಹಲವಾರು ದೇಗುಲಗಳ ಜೀರ್ಣೋದ್ದಾರ ಮಾಡಲಾಗಿದೆ. ಕ್ಷೇತ್ರ ವ್ಯಾಪ್ತಿಯ ಮುದುಗೋಟ, ಲಿಂಗದಳ್ಳಿ, ಹೇರುಂಡಿ, ಬಾಗೂರು, ಮೇದಿನಾಪುರು, ಪರಾಪುರು, ಮುಕ್ಕನಾಳ ಗ್ರಾಮಗಳ ರಸ್ತೆ ಡಾಂಬರೀಕರಣ ಸೇರಿದಂತೆ ನೂರಾರು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ನಮ್ಮ ಅಭಿವೃದ್ಧಿ ಕೆಲಸಗಳೇ ಬಿಜೆಪಿ ಅಭ್ಯರ್ಥಿ ಗೆಲವಿಗೆ ಶ್ರೀರಕ್ಷೆ ಆಗಿದೆ ಎಂದು ಹೇಳಿದರು.

ತಾಪಂ ಅಧ್ಯಕ್ಷ ಹನುಮಂತ ಕಟ್ಟಿಮನಿ, ಗೋವಿಂದರಾಜ ತಿಮ್ಮಾಪುರು, ಬಿಜೆಪಿ ಮಂಡಲದ ಅಧ್ಯಕ್ಷ ಪ್ರಕಾಶ ಪಾಟೀಲ, ಚಂದಪ್ಪ ಬುದ್ದಿನ್ನಿ, ಮುಖಂಡರಾದ ಅಮರೇಶ ಪಾಟೀಲ, ನಸೀರಸಾಬ್‌ ಮುಲ್ಲಾ, ವೆಂಕನಗೌಡ ಪಾಟೀಲ, ಭೀಮಣ್ಣ ನಾಡಗೌಡ ಚಿಂಚೋಡಿ, ವಿ.ಎಂ. ಮೇಟಿ, ಜಂಬಣ್ಣ ನಿಲೋಗಲ್‌, ಬಸವರಾಜ ಪಾಟೀಲ ಗಾಣದಾಳ ಭಾಗವಹಿಸಿದ್ದರು. 

 ಕಾಂಗ್ರೆಸ್‌ ಅಭ್ಯರ್ಥಿ ಪ್ರಚಾರ: ಕಾಂಗ್ರಸ್‌ ಪಕ್ಷದ ಅಭ್ಯರ್ಥಿ ವಿಠೊಬ ನಾಯಕ ಕಾರ್ಯಕರ್ತರೊಂದಿಗೆ ಗ್ರಾಮದಲ್ಲಿ ಮನೆ, ಮನೆಗೆ ತೆರಳಿ ಮತ ಯಾಚಿಸಿದರು. ಕಾಂಗ್ರೆಸ್‌ ಪಕ್ಷದ ಜಿಲ್ಲಾಧ್ಯಕ್ಷ ರಾಮಣ್ಣ ಇರಬಗೇರ, ಜಾಲಹಳ್ಳಿ ಬ್ಲಾಕ್‌ ಅಧ್ಯಕ್ಷ ಆದನಗೌಡ ಪಾಟೀಲ, ವೇಣುಗೋಪಾಲಗೌಡ ವಕೀಲರು, ಬಸವರಾಜ ಹೇರುಂಡಿ, ಶರಣಗೌಡ ಗಣೇಕಲ್‌ ಇದ್ದರು.

ಟಾಪ್ ನ್ಯೂಸ್

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.