ಮಾನವೀಯತೆ ಮೆರೆದ ಕೋವಿಡ್ ಸೈನಿಕರು

Team Udayavani, Apr 13, 2020, 5:49 PM IST

13-April-35

ಕಲಬುರಗಿ: ಮೂತ್ರಪಿಂಡ ಕಾಯಿಲೆಯಿಂದ ನರಳುತ್ತಿದ್ದ ವ್ಯಕ್ತಿಗೆ ತುರ್ತಾಗಿ ಬೇಕಾಗಿದ್ದ ಮಾತ್ರೆಯನ್ನು ಕೊರೊನಾ ವಾರಿಯರ್ಸ್‌ಗಳು ತಲುಪಿಸಿದರು

ಕಲಬುರಗಿ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಕೋವಿಡ್‌-19 ಹಿನ್ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕೋವಿಡ್ ವಾರಿಯರ್ಸ್‌ (ಸೈನಿಕರು) ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದ ರೋಗಿಯೊಬ್ಬರಿಗೆ ತುರ್ತಾಗಿ ಬೇಕಾಗಿದ್ದ ಮಾತ್ರೆ ತಲುಪಿಸಿ, ಸಹಾಯ ಹಸ್ತ ನೀಡಿದ್ದಾರೆ.

ಬೀದರ ಜಿಲ್ಲೆಯ ಹುಮನಾಬಾದ ತಾಲೂಕಿನ ದುಬಲಗುಂಡಿ ಗ್ರಾಮದ ಶಿವಶರಣ ಎನ್ನುವ ರೋಗಿಗೆ ಪ್ರತಿ ತಿಂಗಳು ಸೇವಿಸಬೇಕಾದ ಮಾತ್ರೆಗಳನ್ನು ತಮ್ಮ ಸ್ವಂತ ವಾಹನದಲ್ಲಿ ಕಲಬುರಗಿಯಿಂದ ಹುಮನಾಬಾದ ತಾಲೂಕಿನ ದುಬಲಗುಂಡಿ ಗ್ರಾಮಕ್ಕೆ ಕೊರೊನಾ ಸೈನಿಕರಾದ ಹರ್ಷಲ್‌, ಸಂದೀಪ ಹೋಗಿ ತಲುಪಿಸಿದ್ದಾರೆ.

ಶಿವಶರಣಪ್ಪ ಅವರಿಗೆ 2014ರಲ್ಲಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಒಂದು ಮೂತ್ರಪಿಂಡ ಬದಲಾವಣೆ ಮಾಡಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ನಂತರ ಈ ಇವರು ಪ್ರತಿ ತಿಂಗಳು ಬೆಂಗಳೂರಿಗೆ ತೆರಳಿ ಆರೋಗ್ಯ ತಪಾಸಣೆ ಮಾಡಿಸಿಕೊಂಡು, ವೈದ್ಯರ ಸಲಹೆಯಂತೆ ಮಾತ್ರೆ ತೆಗೆದುಕೊಂಡು ಬರುತ್ತಿದ್ದರು.

ಸದ್ಯ ರಾಜ್ಯಾದ್ಯಂತ 21 ದಿನಗಳ ಕಾಲ ಲಾಕ್‌ಡೌನ್‌ ಇರುವ ಕಾರಣ, ರೈಲು, ಬಸ್‌ ಸೇರಿದಂತೆ ಯಾವುದೇ ಸಾರಿಗೆ ವ್ಯವಸ್ಥೆ ಇರದ ಕಾರಣ ಬೆಂಗಳೂರಿಗೆ ಹೋಗದಂತಾಗಿದೆ. ನಂತರ ವಿಕ್ಟೋರಿಯಾ ಆಸ್ಪತ್ರೆಗೆ ಕರೆ ಮಾಡಿ ಈ ಬಾರಿ ತಪಾಸಣೆಗೆ ಬರಲು ಆಗದಿರುವ ಬಗ್ಗೆ ತಿಳಿಸಿ, ಮಾತ್ರೆ ಕಳುಹಿಸುವಂತೆ ಶಿವಶರಣಪ್ಪ ಕೋರಿದ್ದರು.ಆದರೆ, ಅಲ್ಲಿನ ಸಿಬ್ಬಂದಿ ಬೆಂಗಳೂರಿನಲ್ಲಿ ಸದ್ಯದಲ್ಲಿ ಟ್ರಾನ್ಸ್‌ಫೋರ್ಟ್ ವ್ಯವಸ್ಥೆ ಇಲ್ಲ. ತಾವೇ ಸ್ವತಃ ಬಂದು ತೆಗೆದುಕೊಂಡು ಹೋಗಿ ಎಂದು ತಿಳಿಸಿದ್ದರು. ಆಗ ಶಿವಶರಣಪ್ಪ ಪದೇಪದೆ ಆಸ್ಪತ್ರೆಯವರಲ್ಲಿ ಮನವಿ
ಮಾಡಿದಾಗ ಅಲ್ಲಿನ ಸಿಬ್ಬಂದಿ ಜೈ ಲಕ್ಷ್ಮೀ ಟ್ರಾನ್ಸ್‌ಫೋರ್ಟ್ ಮೂಲಕ ಶಿವಶರಣಪ್ಪ ಅವರ ಮಾತ್ರೆ ಕಳುಹಿಸಿ ಕೊಟ್ಟರು.

ಎರಡು ಮೂರು ದಿನ ಕಾಯ್ದರೂ ಮಾತ್ರೆ ಹುಮನಾಬಾದ್‌ಗೆ ತಲುಪಲಿಲ್ಲ. ಜೈ ಲಕ್ಷ್ಮೀ ಟ್ರಾನ್ಸ್‌ಫೋರ್ಟ್ ನವರಿಗೆ ಕರೆ ಮಾಡಿ ಕೇಳಿದಾಗ, ಕಲಬುರಗಿ ವರೆಗೆ ಮಾತ್ರ ವಾಹನಗಳು ಬರಲು ಸಾಧ್ಯ. ಬೀದರ ವರೆಗೆ ಬರಲು ಸಾಧ್ಯವಿಲ್ಲ. ವಾಹನಗಳನ್ನು ಬಿಡುತ್ತಿಲ್ಲ ಎಂದು ತಿಳಿಸಿದರು. ಆಗ ಕಲಬುರಗಿಯ ಕೊರೊನಾ ಸೈನಿಕರಾದ ಹರ್ಷಲ್‌ ಮತ್ತು ಸಂದೀಪ ಟ್ರಾನ್ಸ್‌ಫೋರ್ಟ್ ಕಚೇರಿಗೆ ಭೇಟಿ ನೀಡಿ, ಮಾತ್ರೆಗಳನ್ನು ತೆಗೆದುಕೊಂಡು ತಮ್ಮ ವಾಹನದಲ್ಲಿ ತೆರಳಿ, ಶಿವಶರಣಪ್ಪ ಅವರ ಮನೆಗೆ ತಲುಪಿಸಿದರು.

ಆಗ ಶಿವಶರಣಪ್ಪ ಈ ಮಾತ್ರೆ ಇಲ್ಲಿ ತುಂಬಾ ತುಟ್ಟಿ, ಹತ್ತು ಮಾತ್ರೆಗಳಿಗೆ 1500ರೂ. ಇತ್ತು. ಖರೀದಿಸುವುದು ತುಂಬಾ ಕಷ್ಟವಾಗಿತ್ತು.
ಮಾತ್ರೆ ತಂದುಕೊಟ್ಟು, ನೆರವಾಗಿದ್ದೀರಿ. ಇದರಿಂದ ಅನುಕೂಲವಾಗಿದೆ ಎಂದು ಕೃತಜ್ಞತಾ ಭಾವ ಮೆರೆದಿದ್ದಾರೆ.

ಟಾಪ್ ನ್ಯೂಸ್

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Frud

Mangaluru: ಆನ್‌ಲೈನ್‌ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Jammu – Kashmir: ಬೆಳ್ಳಂಬೆಳಗ್ಗೆ ಕುಲ್ಗಾಮ್ ನಲ್ಲಿ ಎನ್‌ಕೌಂಟರ್‌… 5 ಭಯೋತ್ಪಾದಕರು ಹತ

Encounter: ಬೆಳ್ಳಂಬೆಳಗ್ಗೆ ಜಮ್ಮು ಕಾಶ್ಮೀರದಲ್ಲಿ ಗುಂಡಿನ ದಾಳಿ; 5 ಭಯೋತ್ಪಾದಕರು ಹತ

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

22 Villages: ಡೋಕ್ಲಾಂನಲ್ಲಿ ಚೀನದಿಂದ 22 ಗ್ರಾಮಗಳ ನಿರ್ಮಾಣ?

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್‌

Mangalore_Airport-NewTerminal

Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

H-1B visa: ಎಚ್‌1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.