ಪರ್ಯಾಯ ಜಲಮೂಲಗಳ ಪತ್ತೆಗೆ ಸೂಚನೆ

ಶುದ್ಧ ಕುಡಿಯುವ ನೀರು ಪೂರೈಕೆಗೆ ತಾಕೀತುಸರಬರಾಜಿಗೆ ತೊಂದರೆಯಾಗದಂತೆ ಕ್ರಮ ಕೈಗೊಳ್ಳಿ: ಸಂಸದ ಜಾಧವ್‌

Team Udayavani, Apr 26, 2020, 1:38 PM IST

26-April-13

‌ಕಲಬುರಗಿ: ನಗರಕ್ಕೆ ಕುಡಿಯುವ ನೀರು ಪೂರೈಸುವ ಸರಡಗಿ ಬ್ಯಾರೇಜ್‌ಗೆ ಸಂಸದ ಡಾ.ಉಮೇಶ ಜಾಧವ, ಶಾಸಕ ದತ್ತಾತ್ರೇಯ ಪಾಟೀಲ ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಲಬುರಗಿ: ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಭೀಮಾ ನದಿ ಮತ್ತು ಬೆಣ್ಣೆತೋರಾ ಹೊರತುಪಡಿಸಿ ಭವಿಷ್ಯದ ಮುಂದಾಲೋಚನೆ ಕ್ರಮವಾಗಿ ರಾಜಕಾಲುವೆ ಅಥವಾ ಕೆರೆಗಳಿದ್ದಲ್ಲಿ ಅದನ್ನು ಪತ್ತೆ ಹಚ್ಚುವಂತೆ ಸಂಸದ ಡಾ.ಉಮೇಶ ಜಾಧವ್‌ ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಅಧಿಕಾರಿಗಳಿಗೆ ಸೂಚಿಸಿದರು.

ಶನಿವಾರ ಮಹಾನಗರ ಪಾಲಿಕೆ ಮತ್ತು ಕರ್ನಾಟಕ ಜಲ ಮಂಡಳಿ ಅಧಿಕಾರಿಗಳೊಂದಿಗೆ ಕಲಬುರಗಿ ನಗರಕ್ಕೆ ಬೇಸಿಗೆ ಕಾಲದಲ್ಲಿ ಕುಡಿಯುವ ನೀರು ಸರಬರಾಜು ಕುರಿತಂತೆ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದ ಅವರು, ಕುಡಿಯುವ ನೀರು ಸರಬರಾಜಿನ ಮೂಲ, ಪ್ರಮಾಣ, ಲಭ್ಯತೆ ಮತ್ತು ದೈನಂದಿನ ಬಳಕೆ ಕುರಿತಂತೆ ಅಧಿಕಾರಿಗಳಿಂದ ಮಾಹಿತಿ ಪಡೆದ ಸಂಸದರು, ಬೇಸಿಗೆ ಕಾಲ ಆರಂಭವಾಗಿದ್ದರಿಂದ ನಗರಕ್ಕೆ ಕುಡಿಯುವ ನೀರು ಸರಬರಾಜಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಶುದ್ಧ ಕುಡಿಯುವ ನೀರು ಪೂರೈಕೆ ಮೊದಲ ಆದ್ಯತೆಯಾಗಿದೆ. ಕಲುಷಿತ ನೀರಿನಿಂದಲೇ ಹೆಚ್ಚಿನ ರೋಗಗಳ ಉತ್ಪತ್ತಿಗೆ ಕಾರಣವಾಗುವುದರಿಂದ ಕುಡಿಯಲು ಯೋಗ್ಯ ಮತ್ತು ಶುದ್ಧ ನೀರು ಮಾತ್ರ ಪೂರೈಕೆ ಮಾಡಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಶಾಸಕ ದತ್ತಾತ್ರೇಯ ಪಾಟೀಲ ರೇವೂರ ಮಾತನಾಡಿ, ಒಂದೆಡೆ ಬೇಸಿಗೆ ಇನ್ನೊಂದೆಡೆ ರಂಜಾನ್‌ ಪವಿತ್ರ ಮಾಸ ಆರಂಭವಾಗಿದೆ. ಲಾಕ್‌ಡೌನ್‌ ಪರಿಣಾಮ ಮನೆ ಬಿಟ್ಟು ಹೊರಗಡೆ ಎಲ್ಲೂ ಜನರಿಗೆ ನೀರು ಸಿಗುವುದಿಲ್ಲ. ಅಧಿಕಾರಿಗಳು ಇದನ್ನು ಅರಿತುಕೊಂಡು ಪ್ರತಿ ಪ್ರದೇಶಕ್ಕೆ ಸಮರ್ಪಕ ಕುಡಿಯುವ ನೀರು ಪೂರೈಕೆಯಾಗುವಂತೆ ಎಚ್ಚರ ವಹಿಸಬೇಕು ಎಂದರು. ಸಭೆಯ ಚರ್ಚೆಯಲ್ಲಿ ಜಲಮಂಡಳಿ ಕಚೇರಿಯಲ್ಲಿ 8 ಕಿರಿಯ ಅಭಿಯಂತರ ಹುದ್ದೆಗಳ ಪೈಕಿ 6 ಹುದ್ದೆಗಳ ಖಾಲಿ ಇವೆ ಎಂಬ ಮಾಹಿತಿಗೆ ಶಾಸಕರು ಅಸಮಾಧಾನ ವ್ಯಕ್ತಪಡಿಸಿದರು.

ಖಾಲಿ ಹುದ್ದೆಗಳ ಬಗ್ಗೆ ಇದೂವರೆಗೂ ತಮ್ಮ ಗಮನಕ್ಕೆ ಏಕೆ ತಂದಿಲ್ಲ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು. ಹುದ್ದೆಗಳ ತುಂಬಲು ಸರ್ಕಾರದ ಮಟ್ಟದಲ್ಲಿ ಪ್ರಯತ್ನಿಸುವುದಾಗಿ ಹೇಳಿದರು. ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾರ್ಯನಿರ್ವಾಹಕ ಅಭಿಯಂತರ ಯೂನಿಸ್‌ ಬಾಷಾ ಮಾತನಾಡಿ, ಕಲಬುರಗಿ ನಗರಕ್ಕೆ ಭೀಮಾ ನದಿಯಿಂದ ಶೇ.70 ಮತ್ತು ಬೆಣ್ಣೆತೋರಾದಿಂದ ಶೇ.30ರಷ್ಟು ಕುಡಿಯುವ ನೀರು ಪೂರೈಕೆಯಾಗುತ್ತಿದೆ. 300 ಮಿಲಿಯನ್‌ ಕ್ಯೂಬಿಕ್‌ ಫೀಟ್‌ ಸಾಮರ್ಥ್ಯದ ಸರಡಗಿ ಬ್ಯಾರೇಜ್‌ ನಲ್ಲಿ ಪ್ರಸ್ತುತ 128 ಮಿಲಿಯನ್‌ ಕ್ಯೂಬಿಕ್‌ ಫೀಟ್‌ ನೀರು ಲಭ್ಯವಿದೆ ಎಂದು ಮಾಹಿತಿ ನೀಡಿದರು.

ಮಹಾನಗರ ಪಾಲಿಕೆ ಆಯುಕ್ತ ರಾಹುಲ್‌ ಪಾಂಡ್ವೆ, ಪಾಲಿಕೆಯ ಪರಿಸರ ಅಭಿಯಂತ ಮುನಾಫ್‌ ಪಟೇಲ್‌, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರಾದ ಸುನೀಲ ವಂಟೆ, ಚೇತನ, ಅರುಣ ಹಾಗೂ ಜಲಮಂಡಳಿ ಸಹಾಯಕ ಕಾರ್ಯನಿರ್ವಾಹಕ ಅಭಿಯಂತ ದಿಲೀಪ್‌ ಸಿಂಗ್‌ ಹಾಜರಿದ್ದರು.

ಟಾಪ್ ನ್ಯೂಸ್

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Naxal-encounter-Vikram-1

Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ

Arrest

Ullala: ತ್ರಿವಳಿ ತಲಾಖ್‌ ಪ್ರಕರಣ: ಆರೋಪಿಯ ಸೆರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ

BYV-yathnal

BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?

Vikram-Naxal-Mud

Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!

peethabailu-1

Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ

Egg-Students

Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.