ಕಮಲನಗರ ಆರೋಗ್ಯ ಕೇಂದ್ರಕ್ಕೆ ಸಚಿವ ಚವ್ಹಾಣ ಭೇಟಿ
Team Udayavani, Apr 23, 2020, 12:33 PM IST
ಕಮಲನಗರ: ಸಮುದಾಯ ಆರೋಗ್ಯ ಕೇಂದ್ರದ ಐಸೋಲೇಷನ್ ವಾರ್ಡ್‌ಗೆ ಸಚಿವ ಪ್ರಭು ಚವ್ಹಾಣ ಭೇಟಿ ನೀಡಿದರು.
ಕಮಲನಗರ: ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರಕ್ಕೆ ಬುಧವಾರ ಪಶು ಸಂಗೋಪನಾ ಖಾತೆ ಸಚಿವ ಪ್ರಭು ಚವ್ಹಾಣ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು. ಆಸ್ಪತ್ರೆಯಲ್ಲಿನ ಐಸೋಲೇಷನ್ ವಾರ್ಡ್‌ಗೆ ಭೇಟಿ ನೀಡಿ ಪರಿಶೀಲಿಸಿದರು. ಅಲ್ಲದೇ ಆಸ್ಪತ್ರೆಯಲ್ಲಿನ ವ್ಯವಸ್ಥೆ ಸಮರ್ಪಕವಾಗಿದೆ. ಆಸ್ಪತ್ರೆಯಲ್ಲಿ ಸುಚಿತ್ವ ಕಾಪಾಡಬೇಕು. ವೈದ್ಯರು, ಸಿಬ್ಬಂದಿ ರೋಗಿಗಳನ್ನು ತಪಾಸಣೆ ಮಾಡುವಾಗ ಕಡ್ಡಾಯವಾಗಿ ಹ್ಯಾಂಡ್‌ಗ್ಲೌಸ್, ಮಾಸ್ಕ್ ಬಳಸಬೇಕು ಎಂದು ಸೂಚಿಸಿದರು.
ಪಟ್ಟಣದಲ್ಲಿ ನೀರಿನ ಸಮಸ್ಯೆ ದಿನೇ-ದಿನೇ ಹೆಚ್ಚಾಗುತ್ತಿದೆ. ಕೆಲವು ವಾರ್ಡ್ ಗಳಲ್ಲಿನ ಮನೆಯಲ್ಲಿರುವ ನಳಗಳಿಗೆ 5 ದಿನಕ್ಕೊಮ್ಮೆ, ಕೆಲವೆಡೆ 10-15 ದಿನಕ್ಕೊಮ್ಮೆ ನೀರು ಸರಬರಾಜು ಮಾಡುತ್ತಿದ್ದಾರೆ. ಪಂಚಾಯತ ಅಧಿಕಾರಿ ಸಂಪೂರ್ಣ ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ಜನರು ಸಚಿವರ ಎದುರು ಗೋಳು ತೋಡಿಕೊಂಡರು. ನಂತರ ಸಚಿವರು ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಪಿಡಿಒ ವಿನೋದ ಕುಲಕರ್ಣಿ ಅವರನ್ನು ಕರೆಯಿಸಿ ನೀರಿನ ಸಮಸ್ಯೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ತಾಕೀತು ಮಾಡಿದರು. ತಾಲೂಕಿನಲ್ಲಿರುವ ಕಬ್ಬು ಬೆಳೆಗಾರರು ಕಬ್ಬನ್ನು ಕಟಾವು ಮಾಡಿಸಿ ಸಹಕಾರ ಸಕ್ಕರೆ ಕಾರ್ಖಾನೆಗಳಿಗೆ ಪೂರೈಸಿ ಸುಮಾರು 3 ತಿಂಗಳು ಕಳೆದರೂ ಅವರ ಖಾತೆಗೆ ಹಣ ಜಮೆಯಾಗಿಲ್ಲ. ಅಲ್ಲದೇ ಕೆಲವು ತೊಗರಿ ಬೆಳೆಗಾರರಿಗೆ ಖಾತೆಗೆ ಹಣ
ಜಮೆ ಮಾಡಿಲ್ಲ ಎಂದು ರೈತ ಸಂಘದ ಅಧ್ಯಕ್ಷ ಪ್ರವೀಣ ಕುಲಕರ್ಣಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದರು.
ದಾಬಕಾ(ಸಿ), ಡೋಣಗಾಂವ(ಎಂ), ಹೋಳಸಮುದ್ರ, ತೋರಣಾ, ಮುಧೋಳ ಹಾಗೂ ತಾಲೂಕಿನ ವಿವಿಧ ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದರು. ತಾಲೂಕು ವೈದ್ಯಾಧಿಕಾರಿ ಶರಣಯ್ಯಸ್ವಾಮಿ, ಔರಾದ ತಹಶೀಲ್ದಾರ್ ಎಂ. ಚಂದ್ರಶೇಖರ, ಕಮಲನಗರ ತಹಶೀಲ್ದಾರ್ ರಮೇಶ ಪೇದ್ದೆ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮಾಣಿಕರಾವ ಪಾಟೀಲ, ಪಿಡಿಒ ವಿನೋದ ಕುಲಕರ್ಣಿ, ಡಾ| ಮಮತಾ ಶಿಂಧೆ, ಡಾ| ರಮೇಶ ಕಾಂಬಳೆ, ಡಾ| ಅನೀಲಕುಮಾರ ರಾಯಪಳ್ಳೆ, ಡಾ| ಮಹೇಶ ಬಿರಾದಾರ, ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manvi; ರಾಜಲಬಂಡ ಅಣೆಕಟ್ಟೆಯಲ್ಲಿ ಕಂಡು ಬಂದ ಭಾರಿ ಗಾತ್ರದ ಮೀನುಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.