ದೇವದುರ್ಗಕ್ಕೆ ಒಲಿಯಲಿದೆಯೇ ಕಸಾಪ ಪಟ್ಟ ?


Team Udayavani, Mar 20, 2021, 7:43 PM IST

ವನಹಚಗಬಜಗ

ದೇವದುರ್ಗ: ಮಸ್ಕಿ ತಾಲೂಕು ಉಪಚುನಾವಣೆ ಮಧ್ಯಯೇ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದೆ. ಜಿಲ್ಲಾದ್ಯಂತ ನೀತಿ ಸ0ಹಿತೆ ಜಾರಿ, ಎರಡನೇ ಹಂತದ ಕೊರೊನಾ ಅಲೆ ಭೀತಿ ಮಧ್ಯೆಯೂ ಸಾಹಿತ್ಯ ಪರಿಷತ್‌ ಚುನಾವಣೆ ಪ್ರಚಾರ ಜೋರಾಗಿದೆ.

ಮಾ.29ರಂದು ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಮೇ 9ಕ್ಕೆ ಚುನಾವಣೆ, ಮೇ 12ಕ್ಕೆ ಫಲಿತಾಂಶ ಹೊರ ಬೀಳಲಿದೆ. ಈಗಾಗಲೇ ಮೂರು ಜನ ಜಿಲ್ಲಾ ಸ್ಥಾನಕ್ಕೆ ಸೇವಾಕಾಂಕ್ಷಿಗಳು ಸ್ಪರ್ಧೆಯ ಕಣದಲ್ಲಿದ್ದಾರೆ. ರಂಗಣ್ಣ ಪಾಟೀಲ್‌ ಅಳ್ಳುಂಡಿ, ಭೀಮನಗೌಡ ಇಟಗಿ ಮಧ್ಯೆ ನೇರ ಸ್ಪರ್ಧೆ ನಡೆಯಲಿದೆ. ಮಲ್ಲಿಕಾರ್ಜುನ ಸ್ವಾಮಿ ಶಿಖರಮಠ ಸೇವಾಕಾಂಕ್ಷಿ ಇದ್ದು, ತಾಲೂಕಿಗೆ ಒಂದು ಬಾರಿಯೂ ಪ್ರಚಾರಕ್ಕೆ ಬಾರದೇ ಇರುವುದು ಅಚ್ಚರಿ ಮೂಡಿಸಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ 106 ವರ್ಷ ಇತಿಹಾಸ ಹೊಂದಿದೆ.

ಆದರೆ ಇಲ್ಲಿವರೆಗೆ ದೇವದುರ್ಗ ತಾಲೂಕಿನ ಒಬ್ಬರಿಗೂ ಜಿಲ್ಲಾಧ್ಯಕ್ಷ ಸ್ಥಾನ ದೊರೆಯದೇ ಇರುವುದು ವಿಷಾದನೀಯ. ಈ ಬಾರಿ ತಾಲೂಕಿನವರೇ ರಂಗಣ್ಣ ಪಾಟೀಲ್‌ ಅಳ್ಳುಂಡಿ ಮತ್ತು ಭೀಮನಗೌಡ ಇಟಗಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆಯ ಸೇವಾಕಾಂಕ್ಷಿಗಳು. ಜಿಲ್ಲಾದ್ಯಂತ 6 ಸಾವಿರಕ್ಕೂ ಹೆಚ್ಚು ಅಜೀವ ಸದಸ್ಯರು ಇದ್ದಾರೆ. ಕಳೆದ ತಿಂಗಳಿಂದ ರಂಗಣ್ಣ ಪಾಟೀಲ್‌ ಅಳ್ಳುಂಡಿ ಜಿಲ್ಲಾದ್ಯಂತ ಪ್ರಚಾರ ಕೈಗೊಂಡಿದ್ದು, ನಮಗೆ ಅವಕಾಶ ನೀಡುವಂತೆ ಅಜೀವ ಸದಸ್ಯರಲ್ಲಿ ಮನವಿ ಮಾಡಿದ್ದಾರೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎನ್ನಲಾಗುತ್ತಿದೆ. ಜಿಲ್ಲೆಯ ಸಾಹಿತ್ಯಾಸಕ್ತರು ಈ ಬಾರಿ ದೇವದುರ್ಗ ತಾಲೂಕಿಗೆ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಸ್ಥಾನ ನೀಡಬೇಕು ಎನ್ನುವ ಮಾತುಗಳು ಕೇಳಿಬರುತ್ತಿವೆ.

ಮಸ್ಕಿ ತಾಲೂಕು ಉಪಚುನಾವಣೆ ಘೋಷಣೆ ಮಧ್ಯಯೇ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ ಒಳ-ಒಳಗೆ ಬಿರುಸುಗೊಂಡಿದೆ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ ಮತದಾನ ಹತ್ತಿರವಾಗುತ್ತಿದ್ದಂತೆ ಚುನಾವಣೆ ಕಾವು ರಂಗೇರಲಿದೆ. ಜಿಲ್ಲಾ ಮತ್ತು ತಾಲೂಕು ಸಮ್ಮೇಳನದಲ್ಲಿ ಕೈಗೊಳ್ಳುವ ನಿರ್ಣಯಗಳು ಜಾರಿಗೆ ಬಾರದೇ ಇರುವುದು ಬಹುತೇಕ ಅಜೀವ ಸದಸ್ಯರಲ್ಲಿ ಬೇಸರಕ್ಕೆ ಕಾರಣವಾಗಿದೆ. ಚುನಾವಣೆ ಬಂದಾಗ ಭಾಷಣ ಬೀಗಿದು ಅ ಧಿಕಾರ ಅನುಭವಿಸಿದ ಜಿಲ್ಲಾಧ್ಯಕ್ಷ ಮತ್ತು ತಾಲೂಕು ಅಧ್ಯಕ್ಷರು ಆಳುವ ಸರಕಾರದ ವಿರುದ್ಧ ಧ್ವನಿ ಎತ್ತುವಲ್ಲಿ ವಿಫಲವಾಗಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

ಕನ್ನಡ ಸಾಹಿತ್ಯ ಪರಿಷತ್‌ ಚುನಾವಣೆ ಮತದಾನಕ್ಕೆ ಒಂದೂವರೆ ತಿಂಗಳು ಬಾಕಿ ಇರುವಾಗಲೇ ಪ್ರಚಾರದ ಭರಾಟೆ ಜೋರಾಗಿದೆ. ಮತದಾರರ ಪಟ್ಟಿಯಲ್ಲಿರುವ ಅಜೀವ ಸದಸ್ಯರು ಬೇರೆ-ಬೇರೆ ಜಿಲ್ಲೆಯಲ್ಲಿದ್ದಾರೆ. ಅಂಥವರ ಮತಗಳು ಸೆಳೆಯಲು ತಂತ್ರ ಹಣೆಯುತ್ತಿದ್ದಾರೆ. ದೂರವಾಣಿ ಮೂಲಕ ಸಂರ್ಪಕ ನಡೆಸಿದ್ದಾರೆ. ಸಾಹಿತ್ಯ ಪರಿಷತ್ತಿನಲ್ಲಿ ಅಸಮಾಧಾನ ಹೊಗೆ ಶುರುವಾಗಿದ್ದು, ಮತದಾನ ವೇಳೆ ಯಾರು? ಯಾರ ಪರ ಬೆಂಬಲಕ್ಕೆ ನಿಲ್ಲುತ್ತಾರೆ ಎನ್ನುವುದು ಗುಟ್ಟಾಗಿದೆ. ಕನ್ನಡ ಸಾಹಿತ್ಯ ಪರಿಷತ್ತಿಗೆ ಅಜೀವ ಸದಸ್ಯರಾಗಲು ಎರಡೂ¾ರು ಬಾರಿ ಅರ್ಜಿ ಸಲ್ಲಿಸಿದ್ದು, ಇಲ್ಲಿವರೆಗೆ ಬಾರದೇ ಇರುವುದು ಜಿಲ್ಲಾದ್ಯಂತ ಬಹುತೇಕರಲ್ಲಿ ಬೇಸರ ಮೂಡಿಸಿದೆ.

ಟಾಪ್ ನ್ಯೂಸ್

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

kangana-2

Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

IPL 2025 Auction:‌ ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..

kl-rahul

IPL Auction: ‌ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್‌ ರಾಹುಲ್;‌ ಖರೀದಿ ಆರಂಭಿಸಿದ ಆರ್‌ ಸಿಬಿ

sanjay-raut

Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

5-raichur

Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

IPL Mega Auction: Here is the auction information for the third set of players

IPL Mega Auction: ಮೂರನೇ ಸೆಟ್‌ ನ ಆಟಗಾರರ ಹರಾಜು ಮಾಹಿತಿ ಇಲ್ಲಿದೆ

Supreme Court

Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Siddakatte Kodange Kambala: ಈ ಸೀಸನ್‌ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ‌ ಒಂದು ವರ್ಷದ ಮರಿ ಚಿರತೆ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.