ರಾಯಚೂರು ಜಿಲ್ಲೆಯಲ್ಲಿ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Team Udayavani, Sep 28, 2020, 12:58 PM IST
ರಾಯಚೂರು: ಕರ್ನಾಟಕ ಬಂದ್ ಗೆ ಜಿಲ್ಲೆಯಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಸಂಘಟನೆಗಳು ಪ್ರತಿಭಟನೆ ರ್ಯಾಲಿಗೆ ಬಂದ್ ಸೀಮಿತಗೊಳಿಸಿದ್ದಾರೆ. ಜನಜೀವನ ಎಂದಿನಂತಿದ್ದು ಕೆಲವೆಡೆ ಮಾತ್ರ ವರ್ತಕರು ಸ್ವಪ್ರೇರಣೆಯಿಂದ ಅಂಗಡಿ ಮುಂಗಟ್ಟುಗಳನ್ನು ಮುಚ್ಚಿದ್ದು ಬಿಟ್ಟರೆ ಬಹುತೇಕ ವ್ಯಾಪಾರ ವಹಿವಾಟು ಎಂದಿನಂತೆ ಸಾಗಿದೆ.
ನಗರದ ಡಾ.ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ ವಿವಿಧ ಪಕ್ಷಗಳು ಹಾಗೂ ಸಂಘಟನೆಗಳ ಮುಖಂಡರು ಪ್ರತಿಭಟನೆ ನಡೆಸುತ್ತಿದ್ದಾರೆ. ವಿವಿಧ ಕಾರ್ಮಿಕ ಸಂಘಟನೆಗಳು ಕೂಡ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದವು.
ಕಾಂಗ್ರೆಸ್ ಕಾರ್ಯಕರ್ತರು ಎತ್ತಿನ ಬಂಡಿಗಳಲ್ಲಿ ಮೆರವಣಿಗೆ ನಡೆಸುವ ಮೂಲಕ ಪ್ರತಿಭಟಿಸಿದರು. ಜೆಡಿಎಸ್ ಕಾರ್ಯಕರ್ತರು ಹೋರಾಟ ಬೆಂಬಲಿಸಿ ಪಾಲ್ಗೊಂಡಿದ್ದರು.
ಇದನ್ನೂ ಓದಿ:ಕರ್ನಾಟಕ ಬಂದ್: ರಾಮನಗರದಲ್ಲಿ ಬಂದ್ ಬಹುತೇಕ ಯಶಸ್ವಿ
ನಗರದ ಬಸವೇಶ್ವರ ವೃತ್ತ ಹಾಗೂ ಅಂಬೇಡ್ಕರ್ ವೃತ್ತದಲ್ಲಿ ಬ್ಯಾರಿಕೇಡ್ ಅಳವಡಿಸಿದ ಪೊಲೀಸರು ಕೆಲಕಾಲ ಸಂಚಾರ ಸ್ಥಗಿತಗೊಳಿಸಿದ್ದರು. ಅಂಬೇಡ್ಕರ್ ವೃತ್ತದಲ್ಲಿ ಹೋರಾಟ ನಡೆಯುತ್ತಿರುವ ಕಾರಣ ಸಾರಿಗೆ ಬಸ್ ಸಂಚಾರಕ್ಕೆ ಅವಕಾಶ ಇರಲಿಲ್ಲ. ಆದರೆ, ಉಳಿದ ವಾಹನಗಳ ಸಂಚಾರ ಎಂದಿನಂತಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.