Karnataka Election: ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಶೇ.75 ಮೀಸಲಾತಿ: ಸಿದ್ದರಾಮಯ್ಯ
Team Udayavani, Apr 28, 2023, 3:03 PM IST
ರಾಯಚೂರು: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಶೇ.75 ರಲ್ಲಿ ಮೀಸಲಾತಿ ಹೆಚ್ಚಳ ಮಾಡುವುದು ಶತಸಿದ್ದ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು ಈಗಿರುವ ಶೇ.50ರಷ್ಟು ಮೀಸಲಾತಿಯನ್ನು ಶೇ. 75ಕ್ಕೆ ಹೆಚ್ಚಿಸಲಾಗುವುದು. ಶೆಡ್ಯುಲ್ 9 ಅನ್ವಯ ಮೀಸಲಾತಿ ಜಾರಿ ಮಾಡುತ್ತೇವೆ. ತಮಿಳುನಾಡಿನಲ್ಲಿ ಶೇ.69ರಷ್ಟಿದೆ.
ಇಂದ್ರಸಹನಿ ಪ್ರಕರಣದಲ್ಲಿ ಶೇ.50ರಷ್ಟು ಮೀರಬಾರದು. ಆದರೆ, ಮೀಸಲಾತಿಯನ್ನು ಹೆಚ್ಚಿಸಲೇಬಾರದು ಎಂದಿಲ್ಲ. ಮುಸ್ಲಿಮರಿಗೆ, ಲಿಂಗಾಯತರಿಗೆ, ಒಕ್ಕಲಿಗರಿಗೆ ಸೇರಿದಂತೆ ಎಲ್ಲ ಸಮುದಾಯಗಳಿಗೂ ನ್ಯಾಯ ಕಲ್ಪಿಸಲಾಗುವುದು. ಈ ವಿಚಾರವನ್ನು ಪ್ರಣಾಳಿಕೆಯಲ್ಲಿ ಸೇರಿಸುವ ಕುರಿತು ಚರ್ಚಿಸಲಾಗುವುದು ಎಂದರು.
ರಾಜ್ಯದ ನಾಯಕರಿಗೆ ವೋಟ್ ತರುವ ಶಕ್ತಿಯಿಲ್ಲ. ಅದಕ್ಕೆ ಮೋದಿ, ಯೋಗಿ, ನಡ್ಡಾ, ಶಾ ಬಂದು ಪ್ರಚಾರ ಮಾಡುತ್ತಿದ್ದಾರೆ.
ಪೊಳ್ಳು ಭರವಸೆಗಳನ್ನು ನೀಡುತ್ತಾ ಜನರನ್ನು ದಿಕ್ಕತಪ್ಪಿಸುತ್ತಿದ್ದಾರೆ. ಈ ಬಾರಿ ಚುನಾವಣೆಯಲ್ಲಿ ಮತದಾರರು ಅವರಿಗೆ ತಕ್ಕಪಾಠ ಕಲಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.