ಗ್ರಾಮಾಭಿವೃದ್ಧಿಗೆ ಸರ್ಕಾರ ಆದ್ಯತೆ: ಸಂಗಣ
ಮಲ್ಲದಗುಡ್ಡದಲ್ಲಿ ಪಂಚಾಯಿತಿ ಸೌಧ ಉದ್ಘಾಟನೆ ಮಸ್ಕಿ ಉಪ ಚುನಾವಣೆಯಲ್ಲಿ ಪ್ರತಾಪಗೌಡರನ್ನು ಗೆಲ್ಲಿಸಲು ಮನವಿ
Team Udayavani, Mar 9, 2020, 4:03 PM IST
ಕವಿತಾಳ: ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಅವರು ಗ್ರಾಮೀಣಾಭಿವೃದ್ಧಿ ನಿಟ್ಟಿನಲ್ಲಿ ಶ್ರಮಿಸುತ್ತಿದ್ದಾರೆ. ಉಜ್ವಲ ಯೋಜನೆ, ಸೌಭಾಗ್ಯ ಯೋಜನೆ, ಕೃಷಿ ಸಮ್ಮಾನ, ಫಸಲು ಬಿಮಾ ಯೋಜನೆ ಸೇರಿದಂತೆ ವಿವಿಧ ಯೋಜನೆಗಳನ್ನು ಜಾರಿ ಮಾಡುವ ಮೂಲಕ ಕೇಂದ್ರ ಸರಕಾರ ರೈತರ ಅಭ್ಯುದಯಕ್ಕಾಗಿ ಶ್ರಮಿಸುತ್ತಿದೆ ಎಂದು ಕೊಪ್ಪಳ ಸಂಸದ ಸಂಗಣ್ಣ ಕರಡಿ ಹೇಳಿದರು.
ಮಸ್ಕಿ ತಾಲೂಕಿನ ಮಲ್ಲದಗುಡ್ಡ ಗ್ರಾಮದಲ್ಲಿ ಕೆಕೆಆರ್‌ಡಿಬಿ ಮ್ಯಾಕ್ರೋ ಯೋಜನೆಯಡಿ 56 ಲಕ್ಷ ವೆಚ್ಚದಲ್ಲಿ ನಿರ್ಮಿಸಿದ ನೂತನ ಗ್ರಾಮ ಪಂಚಾಯ್ತಿ ಸೌಧವನ್ನು ಇತ್ತೀಚೆಗೆ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ನವಲಿ ಹತ್ತಿರ ಸಮಾನಾಂತರ ಜಲಾಶಯ ನಿರ್ಮಾಣಕ್ಕೆ 20 ಕೋಟಿ ಅನುದಾನ ನೀಡುವ ಮೂಲಕ ತುಂಗಭದ್ರಾ ಎಡದಂಡೆ ಕಾಲುವೆ ನೀರು ಬಳಸುವ ರೈತರ ಸಮಸ್ಯೆಗೆ ಸ್ಪಂದಿಸಿದ್ದಾರೆ. ಜಲಾಶಯ ನಿರ್ಮಾಣವಾದರೆ ಈ ಭಾಗದ ರೈತರು ಎರಡು ಬೆಳೆ ಸುಲಭವಾಗಿ ತೆಗೆಯಬಹುದು ಎಂದರು.
ಗ್ರಾಮದಲ್ಲಿ ಅತ್ಯಾಧುನಿಕ ಸೌಲಭ್ಯ ಹೊಂದಿದ್ದ ಗ್ರಾಮ ಪಂಚಾಯಿತಿ ಸೌಧವನ್ನು ನಿರ್ಮಿಸುವ ಮೂಲಕ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಗ್ರಾಮೀಣ ಭಾಗದ ಅಭಿವೃದ್ಧಿಗೆ ಆದ್ಯತೆ ನೀಡಿದ್ದಾರೆ. ಮುಂಬರುವ ಉಪ ಚುನಾವಣೆಯಲ್ಲಿ ಅವರನ್ನು ಗೆಲ್ಲಿಸಬೇಕು ಎಂದರು.
ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಮಾತನಾಡಿ, ಹೊಸದಾಗಿ ಆಯ್ಕೆಯಾದ ಪಂಚಾಯ್ತಿಗೆ ನೂತನ ಭವ್ಯ ಕಟ್ಟಡ ನಿರ್ಮಾಣ, ಪ್ರೌಢಶಾಲೆ, ರಸ್ತೆ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳನ್ನು ಮಲ್ಲದಗುಡ್ಡ ಗ್ರಾಮದಲ್ಲಿ ಕೈಗೊಳ್ಳಲಾಗಿದೆ. ವೆಂಕಟೇಶ್ವರ ದೇವಸ್ಥಾನಕ್ಕೆ ಹೋಗುವ ರಸ್ತೆಯನ್ನು 75 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯನ್ನಾಗಿ ನಿರ್ಮಿಸಲಾಗುತ್ತಿದೆ. ಮರಕಂದಿನ್ನಿ ಹತ್ತಿರ ಕೆರೆ ನಿರ್ಮಾಣ, ನೀರಾವರಿ ಪ್ರದೇಶಗಳಲ್ಲಿನ ರಸ್ತೆಗಳನ್ನು ಮೇಲ್ದರ್ಜೆಗೆ ಏರಿಸುವ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸಲಾಗಿದೆ. ಈ ಭಾಗದ ಅಭಿವೃದ್ಧಿಗೆ ಮುಖ್ಯಮಂತ್ರಿ ಸ್ಪಂದಿಸಿದ್ದಾರೆ ಎಂದರು.
ತುಂಗಭದ್ರ ಕಾಡಾ ಅಧ್ಯಕ್ಷ ಆರ್.ಬಸನಗೌಡ ತುರ್ವಿಹಾಳ, ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್ ಮಾತನಾಡಿದರು. ಅಯ್ಯಪ್ಪ ತಾತ ಸಾನಿಧ್ಯ ವಹಿಸಿದ್ದರು. ಮುಖಂಡರಾದ ಶರಣಪ್ಪಗೌಡ ಜಾಡಲದಿನ್ನಿ, ಬಸವಂತರಾಯ ಕುರಿ, ಸಂತೋಷ ರಾಜಗುರು, ಗ್ರಾಮ ಪಂಚಾಯ್ತಿ ಅಧ್ಯಕ್ಷ ಕುರುಮಪ್ಪ, ಚಂದ್ರಕಾಂತ ಪಾಟೀಲ, ಸೂಗಪ್ಪ, ಶಿವುಕುಮಾರ ವಟಗಲ್, ಕೊಟ್ರಯ್ಯ ಸ್ವಾಮಿ, ಅಮರೇಶಪ್ಪ, ರುದ್ರಯ್ಯ ಸ್ವಾಮಿ, ಪಂಪನಗೌಡ, ಭಾಸ್ಕರರಾವ್, ಕರಿಬಸಯ್ಯ ಸ್ವಾಮಿ, ಶರಣಪ್ಪ ಪಟ್ಟೇದ, ವೆಂಕಟಸಿಂಗ್ ಹಜಾರಿ, ಪಿಡಿಒ ಸಂದೇಶ ಬೆಳವಾಟ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
IPL: ಗೊಂದಲದಲ್ಲಿ ಮರಿ ಸೆಹ್ವಾಗ್ ನನ್ನು ಖರೀದಿಸಿದ ಆರ್ ಸಿಬಿ; ಯಾರು ಈ ಸ್ವಸ್ತಿಕ್ ಚಿಕಾರ
Kundapura: ರಾಷ್ಟ್ರೀಯ ಹೆದ್ದಾರಿಯ ಅರಾಟೆ ಹಳೆ ಸೇತುವೆಯಲ್ಲಿ ಸಂಚಾರ ಸ್ಥಗಿತ
Essar Group: ಎಸ್ಸಾರ್ ಗ್ರೂಪ್ ನ ಸಹ ಸಂಸ್ಥಾಪಕ ಶಶಿ ರುಯಿಯಾ ನಿಧನ
Kundapura: ಬಸ್ ತಂಗುದಾಣಗಳೇ ಮಾಯ; ಜನರು ಅಯೋಮಯ!
ಬಜಪೆ: ಚರಂಡಿಯಲ್ಲಿ ಹರಿಯುತ್ತಿರುವ ಕೊಳಚೆ ನೀರು; ಸ್ವತ್ಛಗೊಳಿಸಿದ ಬಜಪೆ ಪಟ್ಟಣ ಪಂಚಾಯತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.