ಪೊಲೀಸ್ ಅಧೀಕ್ಷಕರ ಕಚೇರಿಯಲ್ಲೂ ಜ್ಞಾನಾರ್ಜನೆ
Team Udayavani, Mar 22, 2022, 2:23 PM IST
ಸಿಂಧನೂರು: ಪೊಲೀಸ್ ಅಧಿಕಾರಿಗಳು ಮನಸ್ಸು ಮಾಡಿದರೆ ಸಾಕಷ್ಟು ಸಮಾಜಮುಖೀ ಕೆಲಸ ನಿರ್ವಹಿಸಬಲ್ಲರು ಎಂಬುದಕ್ಕೆ ಇಲ್ಲಿನ ಪೊಲೀಸ್ ಅಧೀಕ್ಷಕರ ಕಚೇರಿ ಸಾಕ್ಷಿಯಾಗಿದೆ.
ನಿತ್ಯವೂ ವಿದ್ಯಾರ್ಥಿಗಳ ಜ್ಞಾನಾರ್ಜನೆಗೆ ಪೂರಕ ರೀಡಿಂಗ್ ಹೌಸ್ ತೆರೆಯುವ ಮೂಲಕ ಮಾದರಿ ಹೆಜ್ಜೆ ಇಡಲಾಗಿದೆ. ನಗರದ ಸುಕಾಲಪೇಟೆ ರಸ್ತೆಯಲ್ಲಿನ ಡಿವೈಎಸ್ಪಿ ಕಚೇರಿಯಲ್ಲಿ ಹಲವು ದಿನಗಳ ಹಿಂದೆಯೇ ಆರಂಭಿಸಿರುವ ಗ್ರಂಥಾಲಯ ಆರಂಭಿಕ ಉತ್ಸಾಹಕ್ಕೆ ಸೀಮಿತಗೊಳ್ಳದೇ ತನ್ನ ಸೇವಾ ಕಾರ್ಯ ವಿಸ್ತರಿಸಿದೆ.
ಪ್ರತಿ ನಿತ್ಯ ತಂಡೋಪಾದಿಯಾಗಿ ಇಲ್ಲಿಗೆ ವಿದ್ಯಾರ್ಥಿಗಳು ಭೇಟಿ ನೀಡುತ್ತಿದ್ದು, ಬ್ಯಾಚ್ ರೂಪದಲ್ಲಿ ಗ್ರಂಥಾಲಯದಲ್ಲಿ ಕುಳಿತು ಓದಲಾರಂಭಿಸಿದ್ದಾರೆ. ಜೊತೆಗೆ ಪೊಲೀಸ್ ಠಾಣೆ ಇರುವ ಕಚೇರಿ ಆವರಣದಲ್ಲೇ ವಿದ್ಯಾದೇಗುಲ ತೆರೆದು, ಜನಸ್ನೇಹಿ ಹೆಜ್ಜೆ ಇಡಲಾಗಿದೆ.
ಏನಿದು ಗ್ರಂಥಾಲಯ?
ಐಎಎಸ್, ಕೆಎಎಸ್, ಎಫ್‌ಡಿಎ, ಎಸ್‌ಡಿಎ ಸೇರಿದಂತೆ ರಾಜ್ಯ ಸರ್ಕಾರ ಅರ್ಜಿ ಆಹ್ವಾನಿಸುವ ಹುದ್ದೆಗಳಿಗೆ ಅನುಗುಣವಾಗಿ ವಿದ್ಯಾರ್ಥಿಗಳು ಪೂರಕ ತಯಾರಿ ಮಾಡಿಕೊಳ್ಳಲು ಇಲ್ಲಿ ಪುಸ್ತಕಗಳನ್ನು ಇಡಲಾಗಿದೆ. ಪಿಎಸೈ ಸೇರಿದಂತೆ ಇತರೆ ಹುದ್ದೆಗಳಿಗೂ ಸಂಪನ್ಮೂಲ ವ್ಯಕ್ತಿಗಳು ತಯಾರಿಸಿದ ಪುಸ್ತಕಗಳು ಇಲ್ಲಿ ದೊರೆಯುತ್ತಿವೆ. ದೈನಂದಿನ ಪತ್ರಿಕೆ ಕೂಡ ಓದುಗರಿಗೆ ಒದಗಿಸಲಾಗುತ್ತಿದೆ. ಡಿವೈಎಸ್ಪಿ ಕಚೇರಿಗೆ ಹೊಂದಿಕೊಂಡ ಕೊಠಡಿಯಲ್ಲಿ ಆರಂಭಿಸಿರುವ ಈ ಗ್ರಂಥಾಲಯ ವಿದ್ಯಾರ್ಥಿಗಳನ್ನು ಸೆಳೆಯಲಾರಂಭಿಸಿದೆ.
ಡಿವೈಎಸ್ಪಿ ಕಾರ್ಯಕ್ಕೆ ಮೆಚ್ಚುಗೆ
ಆರಂಭದಲ್ಲಿ ಪೊಲೀಸ್ ಇಲಾಖೆಯ ಮಕ್ಕಳಿಗೆ ಮಾತ್ರವೆಂದು ಈ ಗ್ರಂಥಾಲಯ ಸೀಮಿತಗೊಳಿಸಲಾಗಿತ್ತು. ನಂತರದಲ್ಲಿ ಹೊರಗಿನ ವಿದ್ಯಾರ್ಥಿಗಳಿಗೂ ಅವಕಾಶ ಕಲ್ಪಿಸಲಾಗಿದೆ. ನಗರದಲ್ಲಿ ಎರಡು ರೀಡಿಂಗ್ ಹೌಸ್ ತೆರೆಯಲಾಗಿದ್ದು, ಅಲ್ಲಿಗೆ ಹೋಗಬೇಕಾದರೆ ಶುಲ್ಕ ಭರಿಸಬೇಕಾಗುತ್ತದೆ. ಆದರೆ, ಇಲ್ಲಿ ಯಾವುದೇ ಶುಲ್ಕ ವಿಧಿಸುತ್ತಿಲ್ಲ. ಯುವ ಸಮುದಾಯ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಣಿಯಾಗಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲೆಂಬ ಹಿನ್ನೆಲೆಯಲ್ಲಿ ಗ್ರಂಥಾಲಯ ಆರಂಭಿಸಿದೆ. ಡಿವೈಎಸ್ಪಿ ವೆಂಕಟಪ್ಪ ನಾಯಕ ಅವರ ಈ ಕಾರ್ಯ ಜನ ಮೆಚ್ಚುಗೆಗೆ ಪಾತ್ರವಾಗಿದೆ. ಶಾಲಾ-ಕಾಲೇಜು ಮುಗಿದ ಬಳಿಕ ವಿದ್ಯಾರ್ಥಿನಿಯರು-ವಿದ್ಯಾರ್ಥಿಗಳು ಬುತ್ತಿ ಕಟ್ಟಿಕೊಂಡು ಹೋಗಿ, ಅಲ್ಲಿಯೇ ಊಟ ಮಾಡಿ ಪೊಲೀಸ್ ಠಾಣೆಯಲ್ಲಿ ಲಭ್ಯ ನೀರು ಕುಡಿದು ಸಂಜೆಯ ತನಕ ಓದಲಾರಂಭಿಸಿದ್ದಾರೆ.
ಪೊಲೀಸ್ ಠಾಣೆ ಎಂದರೆ ಅಲ್ಲಿ ಆರೋಪಿಗಳು, ಪೊಲೀಸರು, ಶಿಫಾರಸು ವಹಿಸುವವರ ಅಡ್ಡೆ ಎಂಬುದನ್ನು ಅಲ್ಲಗಳೆಯುವ ರೀತಿಯಲ್ಲಿ ಇಲ್ಲಿನ ಕೇಂದ್ರ ಸೇವೆ ಒದಗಿಸುತ್ತಿದೆ. ಪೊಲೀಸ್ ಅಧಿಕಾರಿಗಳ ವಿನೂತನ ಹೆಜ್ಜೆಗೆ ಸಿಬ್ಬಂದಿ ವರ್ಗದವರು ಕೂಡ ಸಂತಸ ವ್ಯಕ್ತಪಡಿಸುತ್ತಿದ್ದಾರೆ.
ಆಧುನಿಕ ದಿನಗಳಲ್ಲೂ ವಿದ್ಯಾರ್ಥಿಗಳು ಹೆಚ್ಚಿನ ರೀತಿಯಲ್ಲಿ ಓದಿಗೆ ಒತ್ತು ನೀಡಬೇಕು. ಶಿಕ್ಷಣದಿಂದ ಮಾತ್ರ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ. ಸ್ಪರ್ಧಾತ್ಮಕ ಪರೀಕ್ಷೆಗೆ ಸಜ್ಜಾಗಲು ತೆರೆದ ಗ್ರಂಥಾಲಯ ಜನ ಸ್ನೇಹಿಯಾಗಿದ್ದು, ಹೆಚ್ಚಿನ ವಿದ್ಯಾರ್ಥಿಗಳಿಗೆ ಇದರಿಂದ ಅನುಕೂಲವಾಗಬೇಕಿದೆ. -ವೆಂಕಟಪ್ಪ ನಾಯಕ, ಡಿವೈಎಸ್ಪಿ, ಸಿಂಧನೂರು
ಕಳೆದ ಎರಡ್ಮೂರು ತಿಂಗಳಿಂದ ನಮಗೆ ತುಂಬ ಅನುಕೂಲವಾಗಿದೆ. ದಿನದ ಎರಡ್ಮೂರು ತಾಸು ಸ್ಪರ್ಧಾತ್ಮಕ ಪರೀಕ್ಷೆಯ ಪುಸ್ತಕಗಳನ್ನು ಓದುತ್ತಿರುವುದರಿಂದ ಹೆಚ್ಚು ಸಹಕಾರಿಯಾಗಿದ್ದು, ಪೊಲೀಸ್ ಕಚೇರಿಯೊಳಗೆ ಗ್ರಂಥಾಲಯ ಇರುವುದರಿಂದ ಹೆಚ್ಚಿನ ಭದ್ರತೆಯಿದೆ. -ಸೃಷ್ಟಿ, ಪಿಯುಸಿ ವಿದ್ಯಾರ್ಥಿನಿ, ಸಿಂಧನೂರು
-ಯಮನಪ್ಪ ಪವಾರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bidar; ಖರ್ಗೆ ಆಪ್ತನಿಂದ ವಂಚನೆ, ಕೊಲೆ ಬೆದರಿಕೆ; ಪತ್ರ ಬರೆದಿಟ್ಟು ಗುತ್ತಿಗೆದಾರ ಆತ್ಮಹತ್ಯೆ
Ullala: ಗ್ಯಾಸ್ ಸಿಲಿಂಡರ್ ಸ್ಫೋ*ಟ ಪ್ರಕರಣ: ಸಾವಿನ ಸಂಖ್ಯೆ 2ಕ್ಕೆ ಏರಿಕೆ
Actress: ರೊಮ್ಯಾನ್ಸ್ ಮಾಡಿಕೊಂಡು ಇರುತ್ತೇನೆ ಮದುವೆ ಆಗೋದೆ ಇಲ್ಲ ಎಂದ ನಟಿ ಶ್ರುತಿ ಹಾಸನ್
Nyamathi: ಕಾಡುಪ್ರಾಣಿಗಳಿಗೆ ಇರಿಸಿದ್ದ 32 ನಾಡ ಬಾಂಬ್ ಗಳು ಪತ್ತೆ
INDvAUS: ಬ್ಯಾನ್ ತಪ್ಪಿಸಿಕೊಂಡ ವಿರಾಟ್ ಕೊಹ್ಲಿ; ಆದರೂ ಶಿಕ್ಷೆ ತಪ್ಪಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.