ಶಿಕ್ಷಣದಿಂದಷ್ಟೇ ಉತ್ತಮ ಸಾಧನೆ
ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದಲ್ಲಿ ಜಿಲ್ಲೆ ಗಣನೀಯ ಪ್ರಗತಿ ಸಾಧಿಸಲಿ: ವಿಶಾಲಾಕ್ಷಿ
Team Udayavani, Mar 8, 2020, 1:09 PM IST
ಕೊಂಡ್ಲಹಳ್ಳಿ: ಮಕ್ಕಳನ್ನು ಸಾಧಕರನ್ನಾಗಿಸಲು ಪೋಷಕರು ಶಿಕ್ಷಣಕ್ಕೆ ಹೆಚ್ಚು ಆದ್ಯತೆ ನೀಡಬೇಕು ಎಂದು ಜಿಪಂ ಅಧ್ಯಕ್ಷೆ ವಿಶಾಲಾಕ್ಷಿ ನಟರಾಜ್ ಕರೆ ನೀಡಿದರು. ಸರ್ಕಾರಿ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಸಮಾರಂಭವನ್ನು ಶನಿವಾರ ಉದ್ಘಾಟಿಸಿ ಅವರು ಮಾತನಾಡಿದರು. ಬರದ ನಾಡು ಮೊಳಕಾಲ್ಮೂರು ತಾಲೂಕಿನ ಸರ್ಕಾರಿ ಶಾಲೆಗಳಲ್ಲಿ ಜಿಲ್ಲೆಯಲ್ಲಿಯೇ ಹೆಚ್ಚು ಮಕ್ಕಳು ದಾಖಲಾಗಿರುವುದು ಸಂತಸದ ಸಂಗತಿ. ಜಿಲ್ಲೆಯಲ್ಲಿ ಈ ಬಾರಿ ಎಸ್‌ಎಸ್‌ಎಲ್ ಸಿ ಫಲಿತಾಂಶದಲ್ಲಿ 1ರಿಂದ 5ನೇ ಸ್ಥಾನ ಪಡೆಯುವ ಪ್ರಯತ್ನಗಳು ನಡೆಯುತ್ತಿರುವುದು ಉತ್ತಮ ಬೆಳವಣಿಗೆ ಎಂದರು.
ಜಿಪಂ ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಡಾ| ಕೆ. ಅನಂತ್ ಮಾತನಾಡಿ, ಪೋಷಕರು ಮಕ್ಕಳ ಪ್ರತಿಭೆಗೆ ಆಸರೆಯಾಗಬೇಕು. ಇಂಗ್ಲಿಷ್ ವ್ಯಾಮೋಹದಿಂದ ಪೋಷಕರು ಕಾನ್ವೆಂಟ್ ಶಿಕ್ಷಣದತ್ತ ಆಕರ್ಷಿತರಾಗುತ್ತಿದ್ದಾರೆ. ಆದರೆ ಸರ್ಕಾರಿ ಶಾಲಾ ವಿದ್ಯಾರ್ಥಿಗಳೇ ಎಲ್ಲಾ ಕ್ಷೇತ್ರಗಳಲೂ ಉತ್ತಮ ಸಾಧನೆ ಮಾಡಿರುವುದು ಹಾಗೂ ಮಾಡುತ್ತಿರುವುದು ಕಂಡು ಬರುತ್ತಿರುವುದು ಪ್ರಶಂಸನೀಯ ಎಂದು ಶ್ಲಾಘಿಸಿದರು.
ಡಿಡಿಪಿಐ ರವಿಶಂಕರ್ ರೆಡ್ಡಿ ಮಾತನಾಡಿ, ಮಾನವೀಯ ಮೌಲ್ಯಗಳು ಮಾಯವಾಗುತ್ತಿರುವ ಇಂದಿನ ದಿನಮಾನದಲ್ಲಿ ಮಕ್ಕಳಿಗೆ ಸಂಸ್ಕಾರಯುತ ಹಾಗೂ ಬದುಕಿನ ಕೌಶಲ್ಯ ನೀಡುವ ಶಿಕ್ಷಣದ ಅವಶ್ಯಕತೆ ಇದೆ ಎಂದು ಪ್ರತಿಪಾದಿಸಿದರು. ತಾಪಂ ಸದಸ್ಯ ಟಿ. ರೇವಣ್ಣ ಅಧ್ಯಕ್ಷತೆ ವಹಿಸಿದ್ದರು. ಸಮಾರಂಭದಲ್ಲಿ ಎಸ್‌ಡಿಎಂಸಿ ಅಧ್ಯಕ್ಷ ಎಸ್. ಆರ್. ನಾಗರಾಜ್, ವನಮಿತ್ರ ಪ್ರಶಸ್ತಿ ಪುರಸ್ಕೃತ ಕಾ.ತಿ. ಮಾಸ್ತರ್, ಬಿಜೆಪಿ ಪ್ರಧಾನ ಕಾರ್ಯದರ್ಶಿ ಜಯಪಾಲಯ್ಯ, ತಾಪಂ ಸದಸ್ಯರಾದ ಈ. ರಾಮರೆಡ್ಡಿ, ರೇಷ್ಮೆ ವೀರೇಶ್, ಗ್ರಾಪಂ ಅಧ್ಯಕ್ಷೆ ಈರಕ್ಕ, ಡಯಟ್ ಪ್ರಾಚಾರ್ಯ ಪ್ರಕಾಶ್, ರಾಜ್ಯ ಪಟ್ಟಸಾಲೆ ಸಮಾಜದ ಗೌರವಾಧ್ಯಕ್ಷ ಡಿ. ಷಡಕ್ಷರಪ್ಪ, ಜಿಂಕಾ ಶ್ರೀನಿವಾಸ್, ಪ್ರದೇಶ ಕುರುಬರ ಸಂಘದ ನಿರ್ದೇಶಕ ಎಸ್.ಕೆ. ಗುರುಲಿಂಗಪ್ಪ, ನಿವೃತ್ತ ಶಿಕ್ಷಕರಾದ ಬಾಲಚಂದ್ರಪ್ಪ, ಪಿ. ಬಸವರಾಜಪ್ಪ, ಎಸ್. ರಾಮಣ್ಣ, ಎಸ್.ಟಿ. ಬ್ರಹ್ಮಾನಂದಪ್ಪ, ಪಿಡಿಒ ಪ್ರಹ್ಲಾದ್, ವಿಷಯ ಪರಿವೀಕ್ಷಕ ಎಚ್.ಟಿ. ಚಂದ್ರಣ್ಣ, ಕೆ.ಎಂ. ಲಕ್ಷ್ಮಣ್, ಮುಖ್ಯ ಶಿಕ್ಷಕ ಹುಲಿಕುಂಟೆಪ್ಪ ಮೊದಲಾದವರು ಪಾಲ್ಗೊಂಡಿದ್ದರು.
ಇದೇ ಸಂದರ್ಭದಲ್ಲಿ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ಎನ್. ಸೋಮಶೇಖರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಇಸಿಒ ಎಚ್.ಜೆ. ಓಂಕಾರಪ್ಪ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.