ಕೋವಿಡ್ ನಿಯಮ ಜಾರಿಯಲ್ಲಿ ದ್ವಂದ್ವ ನಿಲುವು: ಧ್ರುವನಾರಾಯಣ
Team Udayavani, Mar 27, 2021, 1:10 PM IST
ಮಸ್ಕಿ (ರಾಯಚೂರು): ಕೊವಿಡ್ -19 ನಿಯಮ ಜಾರಿಯಲ್ಲಿ ಸರ್ಕಾರ ದ್ವಂದ್ವ ನೀತಿ ಅನುಸರಿಸುತ್ತಿದೆ. ಸಾರ್ವಜನಿಕರಿಗೊಂದು ತಮಗೊಂದು ನಿಯಮ ಮಾಡಿಕೊಂಡಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ದೂರಿದರು.
ಪಟ್ಟಣದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಎಸ್ ಟಿ ಜನಾಂಗಕ್ಕೆ ಮೀಸಲಾತಿ ಕೊಡುವಲ್ಲಿ ಸರ್ಕಾರ ವಿಫಲವಾಗಿದೆ. ಚುನಾವಣೆ ಪೂರ್ವದಲ್ಲಿ ಮಾತನಾಡಿದ್ದ ಸಚಿವ ಬಿ. ಶ್ರೀರಾಮುಲು 24 ಗಂಟೆಯಲ್ಲಿ ಮೀಸಲಾತಿ ಹೆಚ್ಚಿಸುವುದಾಗಿ ರಕ್ತದಲ್ಲಿ ಬರೆದುಕೊಡುವೆ ಎಂದಿದ್ದರು. ಆದರೆ, ಸರ್ಕಾರ ಅಧಿಕಾರಕ್ಕೆ ಬಂದು ಮೂರು ವರ್ಷ ಕಳೆದರೂ ಮೀಸಲಾತಿ ಏಕೆ ಹೆಚ್ಚಿಸಿಲ್ಲ ಎಂದು ಪ್ರಶ್ನಿಸಿದರು.
ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿನ ಕಾಂಗ್ರೆಸ್ ಸರ್ಕಾರ ನಂದವಾಡಗಿ ಏತ ನೀರಾವರಿ ಯೋಜನೆ ಸೇರಿದಂತೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ ಎಂದರು.
ಇದನ್ನೂ ಓದಿ:ಸರಣಿ ಧಾರಾವಾಹಿಯಂತೆ ಬಿಡುಗಡೆಯಾಗುತ್ತಿರುವ ಆಡಿಯೋ- ವಿಡಿಯೋಗಳ ವೈಜ್ಞಾನಿಕ ತನಿಖೆ: ಬೊಮ್ಮಾಯಿ
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ ಬಿಜೆಪಿ ಸೇರಿರುವ ಪ್ರತಾಪಗೌಡ ಪಾಟೀಲ ಕ್ಷೇತ್ರಕ್ಕೆ ಏನು ಮಾಡಿದ್ದಾರೆ ಎಂದು ಪ್ರಶ್ನಿಸಿದರು.
ಮಸ್ಕಿ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್. ಬಸನಗೌಡ ತುರ್ವಿಹಾಳ ಮಾ.29ರಂದು ನಾಮಪತ್ರ ಸಲ್ಲಿಸಲಿದ್ದು, ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಭಾಗವಹಿಸುವರು. ಅಂದು ಮಧ್ಯಾಹ್ನ ಸಾರ್ವಜನಿಕ ಸಭೆ ಜರುಗಲಿದೆ. ಹುಣಸೂರು ಮಾದರಿಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲವು ಸಾಧಿಸುವುದು ಖಚಿತ ಎಂದರು.
ಕಾಂಗ್ರೆಸ್ ಅಭ್ಯರ್ಥಿ ಆರ್.ಬಸನಗೌಡ ಮಾತನಾಡಿ, ನಾನು ಹಣ ತೆಗೆದು ಕೊಂಡಿದ್ದೇನೆ ಎಂದು ಬಿಜೆಪಿ ಅಭ್ಯರ್ಥಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ ಸುಳ್ಳು ಆರೋಪ ಮಾಡುತ್ತಿದ್ದಾರೆ. ಹಣ ಕೊಟ್ಟಿರುವ ಬಗ್ಗೆ ಆಣೆ ಮಾಡಲಿ. ನಾನು ಸಹ ಅಲ್ಲಿಗೆ ಬಂದು ಆಣೆ ಮಾಡುತ್ತೇನೆ ಎಂದು ಸವಾಲೆಸೆದ ಅವರು, ಸುಳ್ಳು ಆರೋಪ ಮಾಡಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡದಿರಲಿ ಎಂದರು
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.