ಕುಮಾರನಾಯಕ ವರದಿ ಅವೈಜ್ಞಾನಿಕ: ಸೇಠ್
Team Udayavani, Jan 27, 2017, 3:45 AM IST
ರಾಯಚೂರು: ಪದವಿಪೂರ್ವ ಕಾಲೇಜುಗಳ ಉಪನ್ಯಾಸಕರ ಹಾಗೂ ಪ್ರಾಚಾರ್ಯರ ವೇತನ ಪರಿಷ್ಕರಣೆ ಕುರಿತು ಹಿರಿಯ ಐಎಎಸ್ ಅಧಿಕಾರಿ ಜಿ.ಕುಮಾರ ನಾಯಕ ಸಲ್ಲಿಸಿದ ವರದಿ ಅವೈಜ್ಞಾನಿಕವಾಗಿದ್ದು, ಅದರಲ್ಲಿನ ಕೆಲ ಅಂಶಗಳನ್ನು ಮಾತ್ರ ಜಾರಿಗೊಳಿಸಲಾಗುವುದು ಎಂದು ಶಿಕ್ಷಣ ಸಚಿವ ತನ್ವೀರ್ ಸೇಠ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ವರದಿಯಲ್ಲಿ ಉಲ್ಲೇಖೀಸಿದ ಎಲ್ಲ ಅಂಶಗಳ ಜಾರಿ ಅಸಾಧ್ಯ. ನಿರೀಕ್ಷೆಗೂ ಮೀರಿದ ಕೆಲವೊಂದು ಬೇಡಿಕೆಗಳಿವೆ. ಹೀಗಾಗಿ ಅವಶ್ಯವಿರುವ ಕೆಲ ಅಂಶಗಳನ್ನು ಮಾತ್ರ ಗಣನೆಗೆ ತೆಗೆದುಕೊಳ್ಳಲಾಗುವುದು ಎಂದರು.
ಪರೀಕ್ಷಾ ಅಕ್ರಮ ತಡೆಗೆ ಮಸೂದೆ:
ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ಪ್ರಶ್ನೆಪತ್ರಿಕೆ ಸೋರಿಕೆಯಂಥ ಅಕ್ರಮದಲ್ಲಿ ಭಾಗಿಯಾದವರಿಗೆ ಹಾಗೂ ಅದನ್ನು ಪಡೆದ ವಿದ್ಯಾರ್ಥಿಗಳಿಗೂ ಆರು ವರ್ಷ ನಿರ್ಬಂಧ ಹೇರಲು ಅವಕಾಶ ಇರುವ ಮಸೂದೆಯನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು. ವಿದ್ಯಾರ್ಥಿಗಳು ಅವರ ಶಾಲೆಯ ಪರೀಕ್ಷಾ ಕೇಂದ್ರ ಬಿಟ್ಟು ಬೇರೆ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಿದೆ. ಅಕ್ರಮ ತಡೆಗಾಗಿ ಸಿಸಿ ಕ್ಯಾಮರಾ ಅಳವಡಿಸಲಾಗುವುದು. 2015ರಲ್ಲಿ ಉಪನ್ಯಾಸಕರ ನೇಮಕಾತಿಗೆ ಅರ್ಜಿ ಸಲ್ಲಿಸಿದ್ದ 268 ಅಭ್ಯರ್ಥಿಗಳಿಗೆ ವಯೋಮಿತಿ ಮೀರುತ್ತಿದ್ದು, ಅವರಿಗೆ ಹೊಸ ನೇಮಕಾತಿ ವೇಳೆ ಪರಿಗಣಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದ.ಕ.ದ ವೈಭವಿ, ಉಡುಪಿಯ ಧೀರಜ್ ಐತಾಳ್ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ
D.K. Shivakumar: ಬೆಳಗಾವಿ ಕಾಂಗ್ರೆಸ್ ಅಧಿವೇಶನ ಬಗ್ಗೆ ಚರ್ಚೆ
KEA: ಎಂಎಸ್ಸಿ ನರ್ಸಿಂಗ್: ಅರ್ಜಿ ಸಲ್ಲಿಕೆಗೆ ಡಿ. 2 ಕೊನೆ ದಿನ
Karnataka: ಪಠ್ಯಪುಸ್ತಕಕ್ಕೆ ಬೇಡಿಕೆ ಸಲ್ಲಿಸಲು ಡಿ. 9 ಕಡೇ ದಿನ
ಸಾಹಿತ್ಯ ಸಮ್ಮೇಳನನ ಖರ್ಚು ಕಡಿತಗೊಳಿಸಿ ಹಂಪಿ ಕನ್ನಡ ವಿ.ವಿ.ಗೆ ನೆರವು: ಜೋಶಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.