ಉಪನ್ಯಾಸಕರ ಕೊರತೆ: ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Dec 31, 2021, 11:45 AM IST
ಶಹಾಪುರ: ಅತಿಥಿ ಉಪನ್ಯಾಸಕರು ಪ್ರತಿಭಟನೆ ನಡೆಸುತ್ತಿರುವ ಹಿನ್ನೆಲೆ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ ಎಂದು ಆರೋಪಿಸಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟಿಸಿ ಮನವಿ ಸಲ್ಲಿಸಿದರು.
ಇಲ್ಲಿನ ಪ್ರಥಮ ದರ್ಜೆ ಕಾಲೇಜು ರಾಜ್ಯದಲ್ಲೇ ಅತಿ ಹೆಚ್ಚು ವಿದ್ಯಾರ್ಥಿಗಳ ದಾಖಲಾತಿ ಹೊಂದಿದ್ದು, ಸರಿಸುಮಾರು 3 ಸಾವಿರ ವಿದ್ಯಾರ್ಥಿಗಳನ್ನು ಹೊಂದಿದೆ. ಇಲ್ಲಿ ಕೇವಲ 21 ಜನ ಕಾಯಂ ಉಪನ್ಯಾಸಕರಿದ್ದಾರೆ. ಸುಮಾರು 110 ಜನ ಅತಿಥಿ ಉಪನ್ಯಾಸಕರಿದ್ದು, ಅವರ ಸೇವೆ ಕಾಯಂಗೊಳಿಸಲು ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಸೇವೆಗೆ ಹಾಜರಾಗುತ್ತಿಲ್ಲ. ಹೀಗಾಗಿ ತೊಂದರೆಯಾಗಿದೆ ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಅಳಲು ತೋಡಿಕೊಂಡರು.
ಮುಂಬರುವ ವಾರ್ಷಿಕ ಪ್ರಥಮ ಸೆಮಿಸ್ಟರ್ ಪರೀಕ್ಷೆ ಹೇಗೆ ಎದುರಿಸಬೇಕು? ಅಭ್ಯಾಸ ಇಲ್ಲದೇ ನಾವು ಕೇವಲ ಮೂಕ ಪ್ರೇಕ್ಷಕರಾಗಿದ್ದೇವೆ. ಈ ಕುರಿತು ಸರ್ಕಾರ ಕೂಡಲೇ ಸೂಕ್ತ ಕ್ರಮಕ್ಕೆ ಮುಂದಾಗಬೇಕೆಂದು ಅವರು ಆಗ್ರಹಿಸಿದರು.
ನಂತರ ವಿದ್ಯಾರ್ಥಿಗಳಿಂದ ಮನವಿ ಸ್ವೀಕರಿಸಿದ ತಹಶೀಲ್ದಾರ್ ಮಧುರಾಜ ಕೂಡ್ಲಿಗಿ ಅವರು ಈ ಕುರಿತು ಮೇಲಧಿಕಾರಿಗಳ ಗಮನಕ್ಕೆ ತರುವುದಾಗಿ ತಿಳಿಸಿದರು. ಪದವಿ ಕಾಲೇಜಿನ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇದ್ದರು.
ಸುವರ್ಣಸೌಧದ ಮುಂದೆ ಅಧಿವೇಶನ ವೇಳೆಯಿಂದ ಅತಿಥಿ ಉಪನ್ಯಾಸಕರು ಸತ್ಯಾಗ್ರಹ ಕೈಗೊಂಡಿದ್ದು, ಅಧಿವೇಶನ ಮುಗಿದರೂ ಸರ್ಕಾರ ಕ್ಯಾರೆ ಎನ್ನುತ್ತಿಲ್ಲ. ಅತಿಥಿ ಉಪನ್ಯಾಸಕರ ಸಮಸ್ಯೆ ಆಲಿಸಲು ತಯಾರಿಲ್ಲ. ಸರ್ಕಾರ ಬೇಡಿಕೆ ಈಡೇರಿಸುವವರೆಗೂ ಸತ್ಯಾಗ್ರಹ ಮುಂದುವರಿಯಲಿದೆ. -ರಾಘವೇಂದ್ರ ಹಾರಣಗೇರಾ, ಅತಿಥಿ ಉಪನ್ಯಾಸಕರು
ಫೆ. 10ಕ್ಕೆ ಪ್ರಥಮ ಸೆಮ್ ಪರೀಕ್ಷೆ ಆರಂಭವಾಗಲಿದ್ದು, ವೇಳಾ ಪಟ್ಟಿ ಬಂದಿದೆ. ಇಲ್ಲಿವರೆಗೂ ಒಂದು ಪಾಠ ಮುಗಿಯದೇ ಹೇಗೆ ಪರೀಕ್ಷೆ ಎದುರಿಸಬೇಕು. ಶೈಕ್ಷಣಿಕ ಉನ್ನತಿಗಾಗಿ. ಕಟ್ಟಡ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಕ್ಕಾಗಿ ಲಕ್ಷಾಂತರ ರೂ. ಖರ್ಚು ಮಾಡುವ ಸರ್ಕಾರ ಬೋಧಕರನ್ನು ನೇಮಿಸುವಲ್ಲಿ ನಿರ್ಲಕ್ಷ್ಯ ವಹಿಸಿದ್ದು ಸರಿಯಲ್ಲ. -ಶರಣಮ್ಮ, ವಿದ್ಯಾರ್ಥಿನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kadri: ಬೃಹತ್ ಗಾತ್ರದ ಚಿಟ್ಟೆ, ಜೀರುಂಡೆ !
Shimoga: ಮೊಬೈಲ್ ಕೊಡದಿದ್ದಕ್ಕೆ ಆತ್ಮಹತ್ಯೆಗೆ ಶರಣಾದ ಕಾಲೇಜು ವಿದ್ಯಾರ್ಥಿನಿ
Pushpa 2: ಖಾಕಿಗೆ ಸವಾಲು ಹಾಕುವ ʼಪುಷ್ಪ-2ʼ ಹಾಡು ರಿಲೀಸ್; ವಿವಾದದ ಬೆನ್ನಲ್ಲೇ ಡಿಲೀಟ್
IRCTC Down: ತಾಂತ್ರಿಕ ದೋಷ- ರೈಲು ಟಿಕೆಟ್ ಬುಕ್ಕಿಂಗ್ ಸಮಸ್ಯೆ-ಪ್ರಯಾಣಿಕರ ಆಕ್ರೋಶ
Kazakhstan: ವಿಮಾನ ದುರಂತ ಸಂದರ್ಭದ ಕೊನೆಯ ಕ್ಷಣದ ಭಯಾನಕ ವಿಡಿಯೋ ವೈರಲ್…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.