ಸೌಲಭ್ಯ ಕೊರತೆ: ಕುಪ್ಪಿಗುಡ್ಡದಲ್ಲಿ ಗುಡ್ಡದಷ್ಟು ಸಮಸ್ಯೆ


Team Udayavani, Sep 4, 2017, 3:40 PM IST

ray-5.jpg

ಲಿಂಗಸುಗೂರು: ತಾಲೂಕಿನ ಕುಪ್ಪಿಗುಡ್ಡ ಗ್ರಾಮದಲ್ಲಿ ಬೆಟ್ಟದಷ್ಟು ಸಮಸ್ಯೆಗಳು ತಾಂಡವವಾಡುತ್ತಿದ್ದರೂ
ಅಧಿಕಾರಿಗಳ ಸ್ಪಂದನೆ ಮಾತ್ರ ಶೂನ್ಯವಾಗಿದೆ.

ಲಿಂಗಸುಗೂರು ಪಟ್ಟಣದಿಂದ ಆರು ಕಿ.ಮೀ. ಅಂತರದಲ್ಲಿರುವ ಈ ಗ್ರಾಮ ಮಸ್ಕಿ ವಿಧಾನಸಭಾ ಕ್ಷೇತ್ರಕ್ಕೆ ಒಳಪಡುತ್ತಿದ್ದು, ಸರ್ಜಾಪುರ ಗ್ರಾಪಂ ವ್ಯಾಪ್ತಿಯಲ್ಲಿದೆ. ಗ್ರಾಮದಲ್ಲಿ 1500 ಜನಸಂಖ್ಯೆ ಇದೆ. ಗ್ರಾಮದಲ್ಲಿ ಕುಡಿಯುವ ನೀರು, ಚರಂಡಿ, ಧೋಬಿ ಘಾಟ್‌ ಸೇರಿದಂತೆ ಹಲವು ಸೌಲಭ್ಯಗಳ ಕೊರತೆ ಇದೆ.

ನೀರಿನ ಸಮಸ್ಯೆ: ರಾಜೀವ ಗಾಂಧಿ ಕುಡಿಯುವ ನೀರಿನ ಯೋಜನೆಯ ಏಳು ಗ್ರಾಮಗಳ ಪೈಕಿ ಈ ಗ್ರಾಮವನ್ನು ಸೇರಿಸಲಾಗಿದೆ. ಇದಲ್ಲದೆ ಗ್ರಾಮಕ್ಕೆ ಕುಡಿಯುವ ನೀರು ಪೂರೈಕೆಗಾಗಿ ಹಲವಾರು ಯೋಜನೆಗಳ ಮೂಲಕ ಭಗೀರಥ ಪ್ರಯತ್ನ ಮಾಡಿದರೂ ಸಮರ್ಪಕವಾಗಿ ನೀರು ಪೂರೈಕೆ ಸಾಧ್ಯವಾಗಿಲ್ಲ. ಬಾವಿಯಲ್ಲಿ ಹೂಳು ತುಂಬಿದ್ದು ಅದನ್ನು ತೆಗೆಸಲು ಗ್ರಾಪಂ ಆಡಳಿತ ನಿರ್ಲಕ್ಷ ವಹಿಸಿದೆ. ನೀರಿನ ಸಮಸ್ಯೆ ನಮ್ಮೂರಿಗೆ ಅಂಟಿರುವ ಶಾಪ ಎಂದು ಗ್ರಾಮಸ್ಥರು ಗೋಳಿಡುವಂತಾಗಿದೆ.

ಚರಂಡಿ ಇಲ್ಲ: ಗ್ರಾಮದಲ್ಲಿ ಚರಂಡಿ ವ್ಯವಸ್ಥೆಯಿಲ್ಲದ್ದರಿಂದ ಎಲ್ಲೆಂದರಲ್ಲಿ ಮಲೀನ ನೀರು ಹರಿಯುತ್ತಿದ್ದು, ಗ್ರಾಮಸ್ಥರು ಮೂಗು ಮುಚ್ಚಿಕೊಂಡು ತಿರುಗಾಡಬೇಕಾಗಿದೆ. ಇದರಿಂದ ರೋಗ ರುಜಿನಗಳು ಹರಡುವುದಕ್ಕೂ ಕಾರಣವಾಗಿದೆ. ಗ್ರಾಮದಲ್ಲಿ ಅವಶ್ಯಕತೆ ಇರುವ ಕಡೆಗಳಲ್ಲಿ ಚರಂಡಿ ನಿರ್ಮಾಣಕ್ಕೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಗ್ರಾಮದಲ್ಲಿ ಧೋಬಿ ಘಾಟ್‌ ವ್ಯವಸ್ಥೆ ಇಲ್ಲದ್ದೇ ದೊಡ್ಡ ಸಮಸ್ಯೆಯಾಗಿದೆ. ಬಟ್ಟೆ ತೊಳೆಯಲು ಪರ್ಯಾಯ ಸ್ಥಳ ಇಲ್ಲದೇ  ಮದಿಂದ ಅರ್ಧ ಕಿ.ಮೀ. ಅಂತರದಲ್ಲಿರುವ ಲಿಂಗಸುಗೂರು-ರಾಯಚೂರು ರಾಜ್ಯ ಹೆದ್ದಾರಿ ರಸ್ತೆಯಲ್ಲೇ ಗ್ರಾಮದ ಮಹಿಳೆಯರು ಸಾಲುಗಟ್ಟಿ ಕುಳಿತು ಬಟ್ಟೆ ತೊಳೆಯುತ್ತಾರೆ. ರಾಜ್ಯ ಹೆದ್ದಾರಿಯಾಗಿದ್ದರಿಂದ ವಾಹನಗಳ ಓಡಾಟ
ಹೆಚ್ಚಿರುವ ಈ ಸ್ಥಳದಲ್ಲಿ ಎಚ್ಚರ ತಪ್ಪಿದರೆ ಅನಾಹುತ ಕಟ್ಟಿಟ್ಟ ಬುತ್ತಿ. ಆದ್ದರಿಂದ ಗ್ರಾಮದಲ್ಲಿ ಧೋಬಿಘಾಟ್‌ ನಿರ್ಮಿಸಬೇಕೆಂದು ಮಹಿಳೆಯರು ಆಗ್ರಹಿಸಿದ್ದಾರೆ.

ಕೈಗೆಟುಕುವ ತಂತಿ: ಗ್ರಾಮದಲ್ಲಿನ ವಿದ್ಯುತ್‌ ಕಂಬಗಳಲ್ಲಿನ ತಂತಿಗಳು ಕೈಗೆಟುಕುವಂತಿವೆ. ಇವುಗಳನ್ನು ಸರಿಪಡಿಸಲು ಜೆಸ್ಕಾಂಗೆ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜವಾಗಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ನಿರಂತರ ಜ್ಯೋತಿ ಯೋಜನೆಯಡಿಯಲ್ಲಿ ವಿದ್ಯುತ್‌ ಕಂಬಗಳನ್ನು ಹಾಕಿ ತಂತಿಗಳ ಜೋಡಣೆ ಮಾಡಲಾಗಿದೆ. ಆದರೆ ಇನ್ನೂ ವಿದ್ಯುತ್‌ ಸಂಪರ್ಕ ನೀಡಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.