ನಾಡಿದ್ದು ತುಂಗಾರತಿ, ಲಕ್ಷ ದೀಪೋತ್ಸವ
Team Udayavani, Nov 21, 2018, 6:00 AM IST
ರಾಯಚೂರು: ನ.23ರಂದು ಮಂತ್ರಾಲಯದಲ್ಲಿ ಕಾರ್ತಿಕ ಮಾಸದ ನಿಮಿತ್ತ ತುಂಗಾರತಿ, ಲಕ್ಷ ದೀಪೋತ್ಸವ ಕಾರ್ಯಕ್ರಮ ಜರುಗಲಿದೆ ಎಂದು ಮಂತ್ರಾಲಯ ಮಠದ ಶ್ರೀ ಸುಬುಧೇಂದ್ರ ತೀರ್ಥರು ತಿಳಿಸಿದ್ದಾರೆ. ಮಂಗಳವಾರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕೇಂದ್ರ ಸರ್ಕಾರ ಮಂತ್ರಾಲಯವನ್ನು ಸ್ವಚ್ಛ ಐಕಾನ್ ಎಂದು ಗುರುತಿಸಿದ್ದು, ಕರ್ನೂಲ್ ಜಿಲ್ಲಾಧಿಕಾರಿಯನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಿದೆ.
ಕೆಲವೇ ದಿನಗಳಲ್ಲಿ ಅಭಿವೃದ್ಧಿ ಕಾರ್ಯಗಳು ಆರಂಭವಾಗಲಿವೆ. ಯೋಜನೆಗಳನ್ನು ಸರ್ಕಾರದ ಪ್ರತಿನಿಧಿಗಳ ಜತೆಗೂಡಿ ರೂಪಿಸಲಾಗಿದೆ. ತಿಂಗಳೊಳಗೆ ಕೆಲಸ ಆರಂಭಗೊಳ್ಳುವ ನಿರೀಕ್ಷೆಯಿದೆ. ನಾವು ಮಠಕ್ಕೆ ವಿಶೇಷ ಅನುದಾನ ಕೇಳಿಲ್ಲ. ಜನೆಗಳನ್ನೇ ಕೇಳಿದ್ದೇವೆ. ಕೇವಲ ಮಠವನ್ನು ಮಾತ್ರ ಯೋಜನೆಗೆ ಗುರುತಿಸಲಾಗಿತ್ತು. ಆದರೆ, ನಾವು ಇಡೀ ಮಂತ್ರಾಲಯವನ್ನು ಯೋಜನೆ ವ್ಯಾಪ್ತಿಗೆ ತರುವಂತೆ ಪ್ರಸ್ತಾವನೆ ಸಲ್ಲಿಸಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ ಮಠಕ್ಕೆ ಭೇಟಿ
ನೀಡುವಂತೆ ಮನವಿ ಮಾಡಲಾಗುವುದು ಎಂದರು. ಭಕ್ತರು ಹಾಗೂ ಜಾನುವಾರುಗಳ ಅನುಕೂಲಕ್ಕಾಗಿ ತುಂಗಭದ್ರಾ ನದಿಗೆ ಅಡ್ಡಲಾಗಿ ಸಮಾನಾಂತರ ಜಲಾಶಯ ನಿರ್ಮಿಸುವ ವಿಚಾರ ಇದೆ. ಈ ಬಗ್ಗೆ ರಾಯಚೂರು ಗ್ರಾಮೀಣ ಶಾಸಕರು ಕೂಡ ಆಸಕ್ತಿ ತೋರಿದ್ದಾರೆ. ಶೀಘ್ರದಲ್ಲೇ ಕರ್ನಾಟಕ, ತೆಲಂಗಾಣ ಮತ್ತು ಕೇಂದ್ರ ಸರ್ಕಾರಗಳಿಗೆ ಈ ಬಗ್ಗೆ ಒತ್ತಾಯ ಮಾಡಲಾಗುವುದು ಎಂದರು. ಸತತ ಬರದಿಂದ ರಾಜ್ಯ ಸಂಪೂರ್ಣ ಸೊರಗಿದೆ. ರೈತರು ಸಂಕಷ್ಟದಲ್ಲಿದ್ದಾರೆ. ಹೀಗಾಗಿ, ರೈತರ ಸಂಪೂರ್ಣ ಸಾಲ ಮನ್ನಾ ಆಗಬೇಕು ಎಂದು ಒತ್ತಾಯಿಸಿದರು.
ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನಕ್ಕೆ ಮಹಿಳೆಯರ ಪ್ರವೇಶ ವಿಚಾರವಾಗಿ ಸುಪ್ರೀಂ ಕೋರ್ಟ್ ನೀಡಿರುವ ಆದೇಶ ಗೌರವಿಸ ಬೇಕು. ಜತೆಗೆ, ಅಲ್ಲಿನ ಸಂಪ್ರದಾಯ, ಕಟ್ಟುಪಾಡುಗಳಿಗೂ ಧಕ್ಕೆ ಬಾರದ ರೀತಿ ನಡೆದುಕೊಳ್ಳಬೇಕು. ನಾವು ಆ ದೇವಸ್ಥಾನಕ್ಕೆ ಹೆಚ್ಚಾಗಿ ನಡೆದುಕೊಳ್ಳುವುದಿಲ್ಲ. ಹೀಗಾಗಿ, ದೇವಸ್ಥಾನಕ್ಕೆ ನಡೆದುಕೊಳ್ಳುವ ಭಕ್ತರು ಅಲ್ಲಿನ ಹಿರಿಯರ ಜತೆ ಸಮಾಲೋಚಿಸಿ ಈ ಬಗ್ಗೆ ಸೂಕ್ತ ಪರಿಹಾರ ಕಂಡುಕೊಳ್ಳಲಿ.
ಶ್ರೀ ಸುಬುಧೇಂದ್ರ ತೀರ್ಥರು, ಮಂತ್ರಾಲಯ ಮಠ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Guarantee schemes; ಸಿದ್ದರಾಮಯ್ಯ ವಿರುದ್ಧದ ಅರ್ಜಿ: ವಿಚಾರಣೆ ಡಿ. 6ಕ್ಕೆ ಮುಂದೂಡಿಕೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್!
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
MUST WATCH
ಹೊಸ ಸೇರ್ಪಡೆ
Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.