ಪ್ಲಾಸ್ಟಿಕ್ ಅನಿವಾರ್ಯ ಭ್ರಮೆ ಬಿಟ್ಟುಬಿಡಿ
ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಕೇವಲ ಒಬ್ಬಿಬ್ಬರಿಂದ ಸಾಧ್ಯವಿಲ್ಲ.
Team Udayavani, Oct 4, 2021, 6:27 PM IST
ರಾಯಚೂರು: ಅಗತ್ಯ ಬಳಕೆ ವಸ್ತುಗಳ ಸಾಲಿನಲ್ಲಿ ಪ್ಲಾಸ್ಟಿಕ್ ಕೂಡ ಸೇರಿಕೊಂಡಿದ್ದು, ಅದು ಇಲ್ಲದೇ ಜೀವನವೇ ಇಲ್ಲವೇನೋ ಎಂಬ ಭ್ರಮೆಯಿಂದ ನಾವು ಹೊರಗೆ ಬರಬೇಕಿದೆ ಎಂದು ಕೇಂದ್ರ ಸರ್ಕಾರದ ಎಂಎಚ್‌ಆರ್‌ಡಿ ಪ್ರಶಸ್ತಿ ಪುರಸ್ಕೃತ ರಾಜಶೇಖರಯ್ಯ ಹಿರೇಮಠ ಹೇಳಿದರು.
ನಗರದ 21ನೇ ವಾರ್ಡ್ ವ್ಯಾಪ್ತಿಯ ಬೊಳಮಾನದೊಡ್ಡಿ ರಸ್ತೆಯ ರೇಸ್ ಬಚಪನ್ ಶಾಲೆಯಲ್ಲಿ ಜಿಲ್ಲಾಡಳಿತ, ಜಿಪಂ, ನಗರಸಭೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಗ್ರೀನ್ ರಾಯಚೂರು, ಶಿಲ್ಲಾ ಫೌಂಡೇಶನ್ ಸಹಯೋಗದಲ್ಲಿ ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರೀಜಿ ಜಯಂತಿ ನಿಮಿತ್ತ ಹಮ್ಮಿಕೊಂಡಿದ್ದ ಪ್ಲಾಸ್ಟಿಕ್ ಮುಕ್ತ ಸಂಕಲ್ಪ ಮತ್ತು ಸ್ವಚ್ಛ ಭಾರತ ಅಭಿಯಾನ, ಸಸಿ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ಲಾಸ್ಟಿಕ್ ಜೀವನದ ಅವಿಭಾಜ್ಯ ಅಂಗವಾಗಿ ಹೊರಹುಮ್ಮುತ್ತಿದ್ದು, ಜನರಲ್ಲಿ ಪರಿಸರಕ್ಕೆ ಪೂರಕವಾಗಿರುವ ಪ್ಲಾಸ್ಟಿಕ್ ರಹಿತ ವಸ್ತುಗಳ ಬಳಕೆಗೆ ಉತ್ತೇಜಿಸುವ ಕಾರ್ಯ ಹೆಚ್ಚಾಗಬೇಕು. ಜನ ಆಧುನಿಕ ಜೀವನ ಶೈಲಿಗೆ ಮಾರುಹೋಗಿ ಪರಿಸರ ಕಾಳಜಿಯನ್ನೇ ಮರೆತಿದ್ದಾರೆ. ಪ್ಲಾಸ್ಟಿಕ್ ಸುಲಭಕ್ಕೆ ಸಿಗುವ ಕಾರಣಕ್ಕೆ ಬಳಕೆ ಹೆಚ್ಚಾಗುತ್ತಿದೆ. ಅತೀ ಹೆಚ್ಚು ಪ್ಲಾಸ್ಟಿಕ್ ಬಳಕೆಯಿಂದ ಪರಿಸದ ಮೇಲಾದ ದುಷ್ಪರಿಣಾಮ ಕುರಿತು ಜನರ ಅರಿವಿಗೆ ಬಂದಿದ್ದರೂ, ಕಡಿವಾಣ ಹಾಕುವಲ್ಲಿ
ವಿಫಲರಾಗುತ್ತಿದ್ದೇವೆ ಎಂದು ಆತಂಕ ವ್ಯಕ್ತಪಡಿಸಿದರು.
ಪ್ಲಾಸ್ಟಿಕ್ ಬಳಕೆಯಿಂದ ಪರಿಸರದ ಜತೆಗೆ ಜೀವಸಂಕುಲದ ಆರೋಗ್ಯದ ಮೇಲೆ ಪ್ರಭಾವ ಬೀರುತ್ತಿದೆ. ಮಾರುಕಟ್ಟೆಗೆ ತರಳುವಾಗ ಬಟ್ಟೆ ಚೀಲಗಳನ್ನು ಬಳಸಲು ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಿಸಲು ದೃಢ ಸಂಕಲ್ಪ ಮಾಡಬೇಕಿದೆ ಎಂದರು. ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾಜನ ರಮೇಶ್ ಮಾತನಾಡಿ, ಪರಿಸರ ಸ್ನೇಹಿ ಅನೇಕ ವಸ್ತುಗಳು ಪ್ಲಾಸ್ಟಿಕ್ ಗೆ ಪರಿರ್ಯಾಯವಾಗಿದೆ. ಪ್ಲಾಸ್ಟಿಕ್ ಮುಕ್ತ ಸಮಾಜ ನಿರ್ಮಾಣ ಕೇವಲ ಒಬ್ಬಿಬ್ಬರಿಂದ ಸಾಧ್ಯವಿಲ್ಲ. ಪ್ರತಿಯೊಬ್ಬರು ಕೈಜೋಡಿಸಬೇಕು ಎಂದರು.
ಮರುಬಳಕೆಯಾಗದ ಪ್ಲಾಸ್ಟಿಕ್ ಅನ್ನು ಒಂದಡೆ ಸಂಗ್ರಹಿಸಿ ಇಕೋಬ್ರಿಕ್ ತಯಾರಿಸಿದ 25ಕ್ಕೂ ಹೆಚ್ಚು ಮಕ್ಕಳಿಗೆ ಇದೇ ವೇಳೆ ಪ್ರಹ್ಲಾದ್ ಕುಲಕರ್ಣಿ ಅವರಿಂದ ಬಟ್ಟೆ ಚೀಲಗಳನ್ನು ಬಹುಮಾನವಾಗಿ ವಿತರಿಸಲಾಯಿತು. ಗ್ರೀನ್ ರಾಯಚೂರು ಸಂಸ್ಥೆಯ ಸಂಸ್ಥಾಪಕ ಕೊಂಡಾ ಕೃಷ್ಣಮೂರ್ತಿ, ಆರ್ ಡಿಎ ಅಧ್ಯಕ್ಷ ವೈ.ಗೊಪಾಲರೆಡ್ಡಿ, ವಕೀಲರ ಸಂಘದ ಅಧ್ಯಕ್ಷ ಜಿ.ಬಸವರಾಜ, ನಗರಸಭೆ ಸದಸ್ಯರಾದ ಬಿ ಗೊವಿಂದ, ಕಡಕೊಳ ಆಂಜನೇಯ, ಈ ಶಶಿರಾಜ ಸೇರಿ ಅನೇಕರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ
Shirva ಹಳೆವಿದ್ಯಾರ್ಥಿ ಸಂಘ; ಡಿ.29: ದಶಮಾನೋತ್ಸವ, ನೂತನ ಉಪಹಾರ ಗೃಹ ಸಮರ್ಪಣೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.