ಕೈಲಾಗದ ಬಿಜೆಪಿ ಸಂಸದರು ಬಳೆ-ಹೂ ಮುಡಿಯಲಿ; ಎಂ.ವಿರುಪಾಕ್ಷಿ

ಮಾತಿನಂತೆ ಸಂಸತ್ತಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ವಿಷಯ ಮಂಡಿಸಿದ್ದಾರೆ.

Team Udayavani, Feb 18, 2021, 5:04 PM IST

ಕೈಲಾಗದ ಬಿಜೆಪಿ ಸಂಸದರು ಬಳೆ-ಹೂ ಮುಡಿಯಲಿ; ಎಂ.ವಿರುಪಾಕ್ಷಿ

ರಾಯಚೂರು: ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಮಾಡುವಂತೆ ರಾಜ್ಯಸಭೆ ಸದಸ್ಯ ಎಚ್‌ .ಡಿ.ದೇವೇಗೌಡ ಸದನದಲ್ಲಿ ಕಣ್ಣೀರು ಹಾಕಿ ಕೇಳಿಕೊಂಡಿದ್ದಾರೆ. ಇಂಥ ಜ್ವಲಂತ ಸಮಸ್ಯೆಗಳ ಬಗ್ಗೆ ಮಾತನಾಡದ ರಾಜ್ಯದ 26 ಸಂಸದರು ನಿಷ್ಪ್ರಯೋಜಕರಾಗಿದ್ದು, ಕೈಗೆ ಬಳೆ ತೊಟ್ಟು ಹೂ ಮುಡಿಯಲಿ ಎಂದು ಜೆಡಿಎಸ್‌ ಜಿಲ್ಲಾಧ್ಯಕ್ಷ ಎಂ.ವಿರುಪಾಕ್ಷಿ ತಾಕೀತು ಮಾಡಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಜ್ವಲಂತ ಸಮಸ್ಯೆಗಳ ಬಗ್ಗೆ ಚಕಾರ ಎತ್ತದ ಬಿಜೆಪಿಯ 26 ಸಂಸದರಿಂದ ರಾಜ್ಯಕ್ಕೆ ಏನು ಪ್ರಯೋಜನವಿಲ್ಲ. ಸಂಸದ ರಾಜಾ ಅಮರೇಶ್ವರ ನಾಯಕ ಸೇರಿದಂತೆ ಎಲ್ಲ ಸಂಸದರ ಆಡಳಿತ ನಿಷ್ಕ್ರಿಯವಾಗಿದೆ. ಅದಕ್ಕಾಗಿ ಅವರಿಗೆ ಜೆಡಿಎಸ್‌ ಪಕ್ಷದಿಂದ ಹೂವು, ಬಳೆ ಕಳುಹಿಸಲಾಗುವುದು. ನಾವು ಕೈಲಾಗದವರು ಎಂದು ಇವುಗಳನ್ನು ತೊಟ್ಟು ಕೂಡಲಿ ಎಂದರು.

ಯುಕೆಪಿ ಹಾಗೂ ನಾರಾಯಣಪುರ ಬಲದಂಡೆ ಕಾಲುವೆ ಅಭಿವೃದ್ಧಿಯಲ್ಲಿ ಎಚ್‌.ಡಿ.ದೇವೇಗೌಡ ಕೊಡುಗೆ ಅಪಾರವಾಗಿದೆ. ರೈತರ ಪರ ಕಾಳಜಿ ಹೊಂದಿರುವ ಅವರು ನಿಜವಾದ ಮಣ್ಣಿನ ಮಗನಾಗಿದ್ದಾರೆ. ತಮ್ಮ ಇಳಿವಯಸ್ಸಿನಲ್ಲೂ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ ದೇವೇಗೌಡರು ಕೃಷ್ಣಾ ಮೇಲ್ದಂಡೆ ಯೋಜನೆ ಬಗ್ಗೆ ಧ್ವನಿ ಎತ್ತಿದ್ದಾರೆ. ಈ ಬಗ್ಗೆ ನನ್ನ ಕೊನೆಯುಸಿರು ಇರುವವರೆಗೂ ಹೋರಾಡುವುದಾಗಿ ಹೇಳಿದ್ದಾರೆ. ದೇವದುರ್ಗದಲ್ಲಿ ಈಚೆಗೆ ನಡೆದ ಸಮಾವೇಶದಲ್ಲಿ ನೀಡಿದ್ದ ಮಾತಿನಂತೆ ಸಂಸತ್ತಿನಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ವಿಷಯ ಮಂಡಿಸಿದ್ದಾರೆ. ಈ ವಿಚಾರದಲ್ಲಿ ಪಕ್ಷ ನಿರಂತರ ಹೋರಾಟ ಹಮ್ಮಿಕೊಳ್ಳಲಿದೆ ಎಂದರು.

ನಾರಾಯಣಪುರ ಬಲದಂಡೆ ಕಾಲುವೆ ಹೋರಾಟ ಸಮಿತಿ ಸಂಚಾಲಕ ಶಿವಬಸಪ್ಪ ಮಾಲಿಪಾಟೀಲ್‌ರಿಗೆ ಈಗ ಎಚ್ಚರವಾಗಿದೆ. ಅವರೊಬ್ಬ ಚಡ್ಡಿ (ಆರ್‌ಎಸ್‌ಎಸ್‌)
ಸಂಘದಿಂದ ಬಂದ ವ್ಯಕ್ತಿ. ಎನ್‌ಆರ್‌ಬಿಸಿ ಆಧುನೀಕರಣ ಕಾಮಗಾರಿಯಲ್ಲಿ ಅಕ್ರಮ ನಡೆದಾಗ ಚಕಾರ ಎತ್ತದ ಅವರು ಯುಕೆಪಿ ರಾಷ್ಟ್ರೀಯ ಯೋಜನೆ ಘೋಷಣೆ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಮೊದಲು ತಮ್ಮ ಪಕ್ಷದ 26 ಸಂಸದರಿಗೆ ಬುದ್ಧಿ ಹೇಳಲಿ ಎಂದು ತಾಕೀತು ಮಾಡಿದರು.

ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನಡೆಯಲಿರುವ ಉಪಚುನಾವಣೆಯಲ್ಲಿ ಜೆಡಿಎಸ್‌ನಿಂದ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಮಾಜಿ ಸಿಎಂ, ಪಕ್ಷದ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರ ಸ್ವಾಮಿ ತಿಳಿಸಿದ್ದಾರೆ. ಅದರಂತೆ ಮಸ್ಕಿ ಕ್ಷೇತ್ರಕ್ಕೆ ಪಕ್ಷದಿಂದ ಅರ್ಹ ಅಭ್ಯರ್ಥಿಯನ್ನು ಆಯ್ಕೆ ಮಾಡಲಾಗುವುದು ಎಂದರು. ಜೆಡಿಎಸ್‌ ಪಕ್ಷದ ಕಾರ್ಯಾಧ್ಯಕ್ಷ ಎನ್‌.ಶಿವಶಂಕರ ವಕೀಲ, ಸದಸ್ಯರಾದ ಎಂ.ಪವನಕುಮಾರ, ರಾಮಕೃಷ್ಣ ಸೇರಿ ಇತರರು ಗೋಷ್ಠಿಯಲ್ಲಿದ್ದರು.

ಟಾಪ್ ನ್ಯೂಸ್

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

1-horoscope

Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ

GPS-hori

New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್‌’!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

2-katapady

Katapady: ಭೀಕರ ಅಪಘಾತ… ಹೊತ್ತಿ ಉರಿದ ಲಾರಿ, ದ್ವಿಚಕ್ರ ವಾಹನ; ಓರ್ವ ಗಂಭೀರ

BJP-SPL-Meet

BJP Politics: ಬಿ.ಎಸ್‌.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ

CM-DCM

Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್‌ರತ್ತ  “ಗುರಿ’!

ASHA_WORKERs

Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.