ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಳ್ಳಲಿ
Team Udayavani, Nov 18, 2021, 6:11 PM IST
ಸಿರವಾರ: ವಿದ್ಯಾರ್ಥಿಗಳು ಅಭ್ಯಾಸದ ಜೊತೆಗೆ ನಾಯಕತ್ವ ಗುಣ ಅಳವಡಿಸಿಕೊಂಡಾಗ ಮಾತ್ರ ಸಮರ್ಥ ವ್ಯಕ್ತಿಯಾಗಿ ನಿರ್ಮಾಣವಾಗಲು ಸಾಧ್ಯ ಎಂದು ಉಪನ್ಯಾಸಕ ಡಾ| ಅಜೀತ್ ಸಬನೀಸ ಹೇಳಿದರು.
ಪಟ್ಟಣದ ಬಸವೇಶ್ವರ ಕಾಲೇಜಿನಲ್ಲಿ ಶ್ರೀ ಅರವಿಂದ ಸೊಸೈಟಿ ಆಲ್ಕೋಡ್, ಬಸವೇಶ್ವರ ಪದವಿ ಮಹಾವಿದ್ಯಾಲಯ, ಕಲ್ಪವೃಕ್ಷ ಯುವ ಸಾಂಸ್ಕೃತಿಕ ಮಹಿಳಾ ಮತ್ತು ಮಕ್ಕಳ ಗ್ರಾಮೀಣಾಭಿವೃದ್ಧಿ ಸಂಘ ಹಾಗೂ ಯುವ ಬ್ರಿಗೇಡ್ ಆಶ್ರಯದಲ್ಲಿ ಅರವಿಂದರ 150ನೇ ಜಯಂತ್ಯುತ್ಸವ ನಿಮಿತ್ತ ಹಮ್ಮಿಕೊಂಡಿದ್ದ ವ್ಯಕ್ತಿತ್ವ ವಿಕಸನ, ಸಮಗ್ರ ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಕ್ಕಳು ವ್ಯಾಸಂಗದ ಜತೆ ವ್ಯಕ್ತಿತ್ವ ವಿಕಸನಕ್ಕೆ ಪೂರಕವಾದ ಚಟುವಟಿಕೆಗಳಿಗೂ ಗಮನ ನೀಡಬೇಕು. ಶಿಕ್ಷಣದೊಂದಿಗೆ ಉತ್ತಮ ಸಾಧನೆ ಮಾಡಲು ಆತ್ಮವಿಶ್ವಾಸವಿದ್ದಲ್ಲಿ ಯಶಸ್ಸು ಸಾಧಿ ಸಲು ಸಾಧ್ಯ. ಅದಕ್ಕಾಗಿ ಶೈಕ್ಷಣಿಕ ಕಾಲಘಟ್ಟದಲ್ಲಿ ಪಠ್ಯದ ಜತೆಗೆ ಇತರೆ ಚಟುವಟಿಕೆಗಳಲ್ಲಿ ಹೆಚ್ಚು ಸಕ್ರಿಯರಾಗಿಸುವ ಬಗ್ಗೆ ಚಿಂತನೆ ನಡೆಸಬೇಕು. ಪಠ್ಯೇತರ ಚಟುವಟಿಕೆಗಳಲ್ಲಿ ಹೆಚ್ಚು ಭಾಗವಹಿಸಿದ್ದಲ್ಲಿ ಸಮರ್ಥ ವ್ಯಕ್ತಿಯಾಗಲು ಸಾಧ್ಯ ಎಂದರು. ಡಾ| ಬಿ.ಆರ್. ಬೀಡ್ ಪ್ರಾಸ್ತವಿಕ ಮಾತನಾಡಿದರು.
ಈ ವೇಳೆ ಚುಕ್ಕಿ ಸೂಗಪ್ಪ ಸಾಹುಕಾರ, ಅರಕೇರಿ ಮಲ್ಲಪ್ಪ ಸಾಹುಕಾರ, ಆದನಗೌಡ ಆಲ್ಕೋಡ್, ಕಾಲೇಜು ಅಧ್ಯಕ್ಷ ನರಸಿಂಹರಾವ್ ಕುಲಕರ್ಣಿ, ಪಿ. ಕೃಷ್ಣ, ಮಹಾಂತೇಶ ಸ್ವಾಮಿ, ಸಂತೋಷ ತಾತ ಸೇರಿದಂತೆ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.