ತಾಪಂ ಇಒಗಳು ಕೆಲಸದ ಶೈಲಿ ಬದಲಿಸಿಕೊಳ್ಳಲಿ


Team Udayavani, Sep 3, 2022, 3:48 PM IST

10-work

ರಾಯಚೂರು: ಜಿಲ್ಲೆಯ ಅಭಿವೃದ್ಧಿಗೆ ಅನೇಕ ಯೋಜನೆಗಳು ಬರುತ್ತಿದ್ದರೂ ಕಾರಣಾಂತರಗಳಿಂದ ಪ್ರಗತಿ ಕುಂಠಿತಗೊಂಡಿರುವುದು ಕಂಡು ಬರುತ್ತಿದೆ. ಇನ್ನು ಮುಂದೆ ಕೆಲಸಗಳು ಅನಗತ್ಯವಾಗಿ ವಿಳಂಬವಾಗದ ರೀತಿಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಕರ್ತವ್ಯ ಶೈಲಿ ಬದಲಿಸಿಕೊಳ್ಳುಬೇಕು ಎಂದು ಜಿಪಂ ಸಿಇಒ ಶಶಿಧರ ಕುರೇರ ತಿಳಿಸಿದರು.

ನಗರದ ಜಿಪಂ ಸಭಾಂಗಣದಲ್ಲಿ ಶುಕ್ರವಾರ ವಿವಿಧ ಇಲಾಖೆಯ ಯೋಜನೆಗಳ ಕುರಿತು ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದಲ್ಲಿ ಈವರೆಗೂ ಅಗತ್ಯ ಸೌಲಭ್ಯಗಳು ಸರಿಯಾಗಿ ತಲುಪಿಲ್ಲ ಎನ್ನುವುದು ವಿಪರ್ಯಾಸ. ಈ ನಿಟ್ಟಿನಲ್ಲಿ ಎಚ್ಚರಿಕೆಯಿಂದ ಕೆಲಸ ಮಾಡಬೇಕು. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲಿ ಅಗತ್ಯ ಮೂಲ ಸೌಲಭ್ಯಗಳಾದ ಶುದ್ಧ ಕುಡಿಯುವ ನೀರು, ರಸ್ತೆ, ಬೀದಿ ದೀಪ ಅಳವಡಿಕೆ, ಒಳಚರಂಡಿ ಮತ್ತು ಸ್ವತ್ಛತೆಗೆ ಎಲ್ಲ ಅಧಿಕಾರಿಗಳು ಪ್ರಥಮ ಆದ್ಯತೆ ನೀಡಬೇಕು ಎಂದು ತಿಳಿಸಿದರು.

ಜಿಲ್ಲೆಯ ಪ್ರತಿ ಗ್ರಾಪಂಗಳಲ್ಲಿ ಪಿಡಿಒಗಳು ಸುಮಾರು ವರ್ಷಗಳಿಂದ ಕೆಲಸ ಮಾಡುತ್ತಿದ್ದು, ನಿಮ್ಮ ಸೇವೆ ಅನುಭವನ್ನು ಸಕರಾತ್ಮಕವಾಗಿ ಬಳಸಿಕೊಂಡು ಅಭಿವೃದ್ಧಿಗೆ ಆದ್ಯತೆ ನೀಡಬೇಕು. ಅಧಿಕಾರಿಗಳು ಯೋಜನೆಗಳನ್ನು ಸಕಾಲಕ್ಕೆ ಅನುಷ್ಠಾನ ಮಾಡಿದರೆ ಆ ಗ್ರಾಪಂ, ತಾಲೂಕು ಮತ್ತು ಜಿಲ್ಲೆಗೆ ಹೆಸರು ಬರುತ್ತದೆ ಎಂದರು.

ಕೆಲಸದಲ್ಲಿ ಯಾರು ಮೇಲು ಕೀಳಿಲ್ಲ. ನನ್ನ ಕೆಲಸವನ್ನು ನಾನು ಮಾಡುತ್ತೇನೆ. ನಿಮ್ಮ ನಿಮ್ಮ ಜವಾಬ್ದಾರಿಗಳನ್ನು ಸರಿಯಾಗಿ ನಿಭಾಯಿಸಿ. ಅಧಿ ಕಾರಿಗಳು ಮತ್ತು ಸಿಬ್ಬಂದಿ ನಿಗದಿತ ಸಮಯದಲ್ಲಿ ಕಚೇರಿಗಳಿಗೆ ತೆರಳಬೇಕು. ಅಶಿಸ್ತು ತೋರಿದಲ್ಲಿ ಕಠಿಣ ಕ್ರಮ ಎದುರಿಸಬೇಕಾಗುತ್ತದೆ. ನಿಮ್ಮ ವಿರುದ್ಧ ಬರುವ ದೂರುಗಳನ್ನು ಗಂಭೀರವಾಗಿ ಪರಿಗಣಿಸಲಾಗುತ್ತದೆ. ಹೀಗಾಗಿ ದೂರುಗಳು ಬರದಂತೆ ಎಚ್ಚರಿಕೆಯಿಂದ ಕೆಲಸ ಮಾಡಬೇಕು ಎಂದರು.

ಜಿಲ್ಲೆಯ 179 ಗ್ರಾಪಂಗಳ ಪೈಕಿ ಕೇವಲ ಬೆರಳಕೆ ಪಂಚಾಯತಿಗಳು ಮಾತ್ರ ಅಭಿವೃದ್ಧಿ ಆಗಿವೆ ಎನ್ನುವುದಲ್ಲ. ಎಲ್ಲ ಪಂಚಾಯತಿಗಳು ಅಭಿವೃದ್ಧಿ ಆಗಬೇಕೆಂಬ ದೃಢ ಸಂಕಲ್ಪ ಎಲ್ಲರಲ್ಲಿ ಬರಬೇಕು ಎಂದರು.

2021-22ನೇ ಸಾಲಿನಲ್ಲಿ ಬಾಕಿಯಿರುವ ಎಲ್ಲ ಕಾಮಗಾರಿಗಳನ್ನು ನಿಗದಿತ ಸಮಯದಲ್ಲಿ ಮುಗಿಸಬೇಕು. ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿಕಾರರಿಗೆ ಕೆಲಸ ನೀಡಬೇಕು. ಜಿಲ್ಲೆಯಲ್ಲಿ ಮಾನವ ದಿನಗಳನ್ನು ಹೆಚ್ಚು ಸೃಜಿಸಬೇಕು. ನರೇಗಾ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನ ಮಾಡಬೇಕು. ವಸತಿ ಯೋಜನೆಯಡಿ ಅರ್ಹ ಫಲಾನುಭವಿಗಳ ಪಟ್ಟಿ ಸಿದ್ದಪಡಿಸಬೇಕು ಎಂದರು.

ಇದೇ ವೇಳೆ ತಾಲೂಕವಾರು ಸುದಿರ್ಘ‌ವಾಗಿ ಪ್ರಗತಿ ಪರಿಶೀಲನೆ ನಡೆಸಿದರು. ಜಿಪಂ ಉಪಕಾರ್ಯದರ್ಶಿ ಶಶಿಕಾಂತ ಶಿವಪುರೆ, ಮುಖ್ಯ ಯೋಜನಾಧಿಕಾರಿ ಡಾ| ಟಿ.ರೋಣಿ, ಮುಖ್ಯ ಲೆಕ್ಕಾಧಿಕಾರಿ ನಾಗರಾಜ ಸೇರಿ ವಿವಿಧ ತಾಪಂ ಇಒಗಳು, ಪಿಡಿಒಗಳು, ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿ ವಿರುದ್ಧ ಭುಗಿಲೆದ್ದ ಹೆಬ್ಬಾಳಕರ ಬೆಂಬಲಿಗರಿಂದ ಆಕ್ರೋಶ

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

Belagavi: ಸಿ.ಟಿ. ರವಿಯನ್ನು ಹೆಗಲ ಮೇಲೆ‌ ಹೊತ್ತುಕೊಂಡು ಜೀಪ್ ಗೆ ಹಾಕಿದ ಪೊಲೀಸರು

1-ullala

Mangaluru; ನೇತ್ರಾವತಿ ಸೇತುವೆ ದುರಸ್ತಿ ಆರಂಭ: ಸಂಚಾರ ಸಲಹೆ ನೀಡಿದ ಪೊಲೀಸರು

1-aaammm

Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ

1-lok-sabha

BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

K. S. Eshwarappa: ಗುಂಪುಗಾರಿಕೆ ಮಾಡುತ್ತಿರುವವರು ಬಿಜೆಪಿ ಕಟ್ಟಿ ಬೆಳೆಸಿಲ್ಲ

Untitled-1

Kasaragod Crime News: ರಸ್ತೆಯಲ್ಲಿ ಬಿಯರ್‌ ಬಾಟ್ಲಿ ಒಡೆದ ಮೂವರ ಬಂಧನ

byndoor

Belthangady: ಬಸ್‌ ಬೈಕ್‌ ಢಿಕ್ಕಿ, ಸವಾರ ಗಂಭೀರ

5

Malpe: ಮೆಹಂದಿಯಲ್ಲಿ ತಡರಾತ್ರಿವರೆಗೆ ಡಿಜೆ ಬಳಕೆ; ಪ್ರಕರಣ ದಾಖಲು

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Mangaluru: ಹೊಸ ವರ್ಷಾಚರಣೆ ಹಿನ್ನೆಲೆ: ಮಾರ್ಗಸೂಚಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.