ಗಿರಿಜನರು ಸರಕಾರದ ಸೌಲಭ್ಯ ಪಡೆಯಲಿ
Team Udayavani, Jan 16, 2022, 5:49 PM IST
ದೇವದುರ್ಗ: ಗಿರಿಜನರಲ್ಲಿ ಸಾಮಾನ್ಯ ಜನರು, ಸ್ವಾತಂತ್ರ್ಯ ಹೋರಾಟಗಾರರು, ಆಡಳಿತ ಚುಕ್ಕಾಣಿ ಹಿಡಿದವರು ಇದ್ದಾರೆ. ಆದರೂ ಅವರು ನಿರೀಕ್ಷಿತ ಮಟ್ಟದ ಪ್ರಗತಿ ಹೊಂದಿಲ್ಲ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯ ಆಡಳಿತ ಮಂಡಳಿ ಸದಸ್ಯ ನಾಗರಾಜ ಅಕ್ಕರಕಿ ಅಭಿಪ್ರಾಯ ವ್ಯಕ್ತಪಡಿಸಿದರು.
ಪಟ್ಟಣದ ಮುರಿಗೆಪ್ಪ ಖೇಣೆದ್ ಫಂಕ್ಷನ್ ಹಾಲನಲ್ಲಿ ನಡೆದ ಗಿರಿಜನ ಜಿಲ್ಲಾ ಸಮಾವೇಶದಲ್ಲಿ ಅವರು ಮಾತನಾಡಿದರು.
ಗಿರಿಜನ ಸಮುದಾಯಗಳು ಎಲ್ಲ ರಂಗದಲ್ಲಿ ಮುಂದೆ ಬರಬೇಕಾದರೆ ಪಾಲಕರು ಮಕ್ಕಳಿಗೆ ಮೊದಲು ಶಿಕ್ಷಣ ಸೌಲಭ್ಯ ಕಲ್ಪಿಸಬೇಕು. ಶಿಕ್ಷಣ ಪಡೆದಲ್ಲಿ ಸರಕಾರದ ಹಲವು ಯೋಜನೆಗಳ ಸೌಲಭ್ಯಗಳು ಪಡೆಯಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಮತಾಂತರಗೊಂಡ ಎಸ್‌ಸಿ, ಎಸ್‌ಟಿ ಮತ್ತು ಅಲ್ಪಾಸಂಖ್ಯಾತರನ್ನು ಕೇವಲ ಒಂದೇ ಸೌಲಭ್ಯ ಪಡೆಯುವಂತಾಗಬೇಕು. ಅರಣ್ಯ ಉತ್ಪನ್ನಗಳ ಮೇಲಿನ ಹಕ್ಕು ವನವಾಸಿಗಳಿಗೆ ದೊರಕುವಂತಾಗಬೇಕು. ಎಲ್ಲರೂ ಒಗ್ಗಟ್ಟಾಗಿ ಇಂತಹ ಸಮಾವೇಶಗಳ ಮೂಲಕ ಗಿರಿಜನರ ಸಮಸ್ಯೆಗಳು ಬಗ್ಗೆ ಚರ್ಚಿಸಿ ಒಕ್ಕೊರಲ ಧ್ವನಿಯನ್ನು ಸರಕಾರದ ಮಟ್ಟಕ್ಕೆ ತಲುಪಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ತಿರುಮಲೇಶ ಆಚಾರ್ಯ ರಾಜಜೋಷಿ, ವಾಲ್ಮೀಕಿ ಮಹಾಸಭಾ ತಾಲೂಕಾಧ್ಯಕ್ಷ ರಾಮಣ್ಣ ಕರಡಿಗುಡ್ಡ, ಯಮನೂರಪ್ಪ ನಾಯಕ, ಗಿರಿಜನ ಸುರಕ್ಷಾ ವೇದಿಕೆಯ ವೆಂಕಟೇಶ ಚಿಂತಲಕುಂಟಿ, ಆರ್. ಶ್ರೀನಿವಾಸ ಮೈಸೂರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.