ಮಾನವೀಯತೆ ರಹಿತ ಬದುಕು ಸಲ್ಲ
Team Udayavani, Jan 28, 2019, 10:35 AM IST
ಸಿಂಧನೂರು: ಇತ್ತೀಚಿನ ದಿನಗಳಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿವೆ. ಯಾರಲ್ಲಿ ಮಾನವೀಯ ಮೌಲ್ಯ ಇರುವುದಿಲ್ಲವೋ ಅವರು ಇದ್ದೂ ಸತ್ತಂತೆ. ಅಂತಹ ಬದುಕು ಬದುಕೇ ಅಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ವೆಂಕಟರಾವ್ ನಾಡಗೌಡ ಅಭಿಪ್ರಾಯಪಟ್ಟರು.
ನಗರದ ಪಿಡಬ್ಲ್ಯುಡಿ ಕ್ಯಾಂಪ್‌ನ ಜೆಸ್ಕಾಂ ಇಲಾಖೆ ಆವರಣದಲ್ಲಿ ನಡೆದ ಸಿಂಧನೂರು ಕೆಪಿಟಿಸಿಎಲ್, ಜೆಸ್ಕಾಂ ಅಧಿಕಾರಿಗಳು, ನೌಕರರು ಹಾಗೂ ವಿದ್ಯುತ್ ಗುತ್ತಿಗೆದಾರರ ಸಂಘದ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ 8ನೇ ವರ್ಷದ ಕ್ರೀಡಾಕೂಟಗಳಲ್ಲಿ ವಿಜೇತರಿಗೆ ಬಹುಮಾನ ವಿತರಣೆ, 2018ನೇ ಸಾಲಿನ ಉತ್ತಮ ಜೆಸ್ಕಾಂ ಗ್ರಾಹಕರಿಗೆ ಪ್ರಶಸ್ತಿ ಪ್ರದಾನ ಹಾಗೂ ಅನಾಥ ಮಕ್ಕಳಿಗೆ ಸಹಾಯಧನ ವಿತರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಮತ್ತು ವೈಯಕ್ತಿಕ ಬದುಕಿನಲ್ಲಿ ಮಾನವೀಯ ಮೌಲ್ಯಗಳು ಮರೆಯಾಗುತ್ತಿರುವುದರಿಂದ ಮನುಷ್ಯ ದುರ್ಮಾರ್ಗದಲ್ಲಿ ಸಾಗುತ್ತಿದ್ದಾನೆ. ಮಾನವೀಯ ಮೌಲ್ಯ ಅಳವಡಿಸಿಕೊಳ್ಳದವರು ಸುಂದರ ಬದುಕು ಸಾಧ್ಯವಾಗುವುದಿಲ್ಲ. ಮನುಷ್ಯ ಎಷ್ಟೇ ಎತ್ತರಕ್ಕೆ ಬೆಳೆಯಲಿ ಅವನಲ್ಲಿ ಕರುಣೆ, ಪ್ರೀತಿ, ಸಾಮಾಜಿಕ ಕಳಕಳಿಯಂತ ಮೌಲ್ಯಗಳಿರಬೇಕು. ಇದು ಇಲ್ಲದೇ ಇರುವುದರಿಂದ ಅನಾಥ ಆಶ್ರಮಗಳು ಹೆಚ್ಚಾಗುತ್ತಿವೆ. ಅನೇಕ ಮಕ್ಕಳು ವೃದ್ಧ ತಂದೆ-ತಾಯಿಯನ್ನು ವೃದ್ಧಾಶ್ರಮಕ್ಕೆ ಸೇರಿಸುತ್ತಿದ್ದಾರೆ. ಇದು ಉತ್ತಮ ಬೆಳವಣಿಗೆಯಲ್ಲ. ಮಕ್ಕಳು ತಂದೆ-ತಾಯಿಯನ್ನು ಗೌರವದಿಂದ ಕಾಣಬೇಕು ಎಂದರು.
ಸಿಂಧನೂರು ಜೆಸ್ಕಾಂ ಇಲಾಖೆ ಒಳ್ಳೆಯ ಕೆಲಸ ಮಾಡುತ್ತಿದೆ. ಬಡವರನ್ನು ಗುರುತಿಸಿ ಸಹಾಯಧನ ನೀಡುವುದು, ಉತ್ತಮ ಗ್ರಾಹಕರಿಗೆ ಪ್ರಶಸ್ತಿ ಪ್ರದಾನ ಮಾಡಿ ಪ್ರೋತ್ಸಾಹಿಸುತ್ತಿರುವುದು ಉತ್ತಮ ಕಾರ್ಯ ಎಂದು ಶ್ಲಾಘಿಸಿದರು.
ಜೆಸ್ಕಾಂ ಅಧಿಕಾರಿ ಚಂದ್ರಶೇಖರ ದೇಸಾಯಿ ಮಾತನಾಡಿ, ನಮ್ಮ ಇಲಾಖೆಯಿಂದ ಪ್ರತಿವರ್ಷ ಗಣರಾಜ್ಯೋತ್ಸವದ ಅಂಗವಾಗಿ ಬಡವರಿಗೆ ಸಹಾಯಧನ ಮಾಡುತ್ತಾ ಬಂದಿದ್ದೇವೆ. ವಿವಿಧ ಕ್ರೀಡೆ ಆಯೋಜಿಸಲಾಗುತ್ತಿದೆ. ಈ ವರ್ಷ ಬಡ ಅನಾಥ ಆಶ್ರಮದವರಿಗೆ ಒಂದು ಲಕ್ಷ ರೂ. ಸಹಾಯಧನ ಹಾಗೂ ಮಕ್ಕಳಿಗೆ ಪುಸ್ತಕ ವಿತರಿಸಲಾಗಿದೆ. ಉತ್ತಮ ಗ್ರಾಹಕರನ್ನು ಗೌರವಿಸಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಜೆಸ್ಕಾಂ ಸಿಬ್ಬಂದಿಗಳಾದ ನಟರಾಜ, ರಿಯಾಜ ಅಹ್ಮದ್, ಬಸನಗೌಡ ನಾಡಂಗ, ಮಹಮ್ಮದ್, ಬಸವರಾಜ ರೆಡ್ಡಿ, ಅನಾಥ ಆಶ್ರಮದ ಸಿಬ್ಬಂದಿ ಜೋಸೆಫ್, ಪುಷ್ಪಲತಾ, ಅವಿನಾಶ ದೇಶಪಾಂಡೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್‌ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್‌ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.