ಲಿಂಗಸುಗೂರಿಗೆ ನೀರಿನ ಸಮಸ್ಯೆಯಾಗದಂತೆ ಕ್ರಮ
Team Udayavani, Jun 17, 2020, 4:52 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಿಂಗಸುಗೂರು: ಸ್ಥಳೀಯ ಪುರಸಭೆ ವ್ಯಾಪ್ತಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.
ಪಟ್ಟಣದ ಪುರಸಭೆ ಸಭಾಭವನದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಾರಾಯಣಪುರ ಬಲದಂಡೆ ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿದೆ. ಆದ್ದರಿಂದ ಕುಡಿಯುವ ನೀರಿನ ಸಮಸ್ಯೆಯಾಗಲಿದೆ. ಈ ಹಿನ್ನೆಲೆಯಲ್ಲಿ ಲಿಂಗಸುಗೂರು, ಕರಡಕಲ್, ಕಸಬಾಲಿಂಗಸುಗೂರು ಹಾಗೂ ಹುಲಿಗುಡ್ಡ ಜನರಿಗೆ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳುವೆ. ಜಾಲಿಬೆಂಚಿ ಗ್ರಾಮದ ಬಳಿ ರಾಂಪುರ ಏತ ನೀರಾವರಿ ನಾಲೆಯಿಂದ ಕೆರೆಗೆ ನೀರು ತುಂಬಿಸಿಕೊಳ್ಳುವ ಕೆಲಸ ಮಾಡಲಾಗುತ್ತಿದೆ. ಇಲ್ಲವೇ ಟ್ಯಾಂಕರ್ ಮೂಲಕವಾದರೂ ಸರಿ ಗಲ್ಲಿ ಗಲ್ಲಿಗೂ ಕುಡಿಯುವ ನೀರು ಪೂರೈಸಲಾಗುವುದು. ನಳಗಳಿಗೆ ಮೋಟರ್ ಹಚ್ಚುವುದನ್ನು ತಡೆಗಟ್ಟಬೇಕು. ಒಂದು ವೇಳೆ ಹಚ್ಚಿದರೆ ಜಪ್ತಿ ಮಾಡುವಂತೆ ಮುಖ್ಯಾಧಿಕಾರಿಗೆ ಸೂಚಿಸಿದರು.
ಕುಡಿಯುವ ನೀರಿನ ಕೆರೆಯಲ್ಲಿ ಹೂಳು ಇಲ್ಲ. ಬರೀ ಆಪು ಬೆಳೆದಿದೆ. ಅದನ್ನು ತೆಗೆಸಲಾಗುವುದು. ಶುದ್ಧೀಕರಣ ಘಟಕದಲ್ಲಿ ನೀರು ಶುದ್ಧೀಕರಿಸದೇ ಹಾಗೇ ಸರಬರಾಜು ಮಾಡುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಬಂದಿವೆ ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪಟ್ಟಣಕ್ಕೆ ಒಳಚರಂಡಿ ಮತ್ತು 24×7 ಕುಡಿಯುವ ನೀರಿನ ಯೋಜನೆ ಜಾರಿಗೊಳಿಸುವ ಬಗ್ಗೆ ಪ್ರಸ್ತಾವನೆ ಸರ್ಕಾರದ ಮಟ್ಟದಲ್ಲಿದೆ. ಆದರೆ ಕೋವಿಡ್ -19 ಹಿನ್ನೆಲೆಯಲ್ಲಿ ಸರ್ಕಾರದಲ್ಲಿ ದುಡ್ಡು ಇಲ್ಲದ ಕಾರಣ ಯೋಜನೆ ನನೆಗುದಿಗೆ ಬಿದ್ದಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ಹೊಸ ಸೇರ್ಪಡೆ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.