ಕುಡಿವ ನೀರಿನ ಸಮಸ್ಯೆ ನಿವಾರಣೆ: ಹೂಲಗೇರಿ
Team Udayavani, Jul 6, 2020, 3:25 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಲಿಂಗಸುಗೂರು: ರಾಂಪುರ ಏತ ನೀರಾವರಿ ಯೋಜನೆಯಿಂದ ಕುಡಿವ ನೀರಿನ ಕೆರೆಗೆ ನೀರು ಹರಿಸಲಾಗುತ್ತಿದೆ. ಇದರಿಂದ ಪಟ್ಟಣದಲ್ಲಿನ ನೀರಿನ ಸಮಸ್ಯೆ ನಿವಾರಣೆ ಆಗಿದೆ ಎಂದು ಶಾಸಕ ಡಿ.ಎಸ್.ಹೂಲಗೇರಿ ಹೇಳಿದರು.
ಸ್ಥಳೀಯ ಪುರಸಭೆ ವ್ಯಾಪ್ತಿ ಪ್ರದೇಶಗಳಿಗೆ ಕುಡಿವ ನೀರು ಪೂರೈಸುವ ಕೆರೆಗೆ ಭೇಟಿ ನೀಡಿ ವೀಕ್ಷಿಸಿ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಬಲದಂಡೆ ನಾಲೆ ಆಧುನೀಕರಣ ಕಾಮಗಾರಿ ನಡೆಯುತ್ತಿತ್ತು. ಹೀಗಾಗಿ ಕೆರೆಯಲ್ಲಿ ನೀರು ಸಂಗ್ರಹ ಕಡಿಮೆ ಆಗಿದ್ದರಿಂದ ಕುಡಿವ ನೀರಿನ ಸಮಸ್ಯೆ ಎದುರಾಗಿತ್ತು. ಈ ಕುರಿತು ನೀರಾವರಿ ಹಾಗೂ ಪುರಸಭೆ ಅಧಿಕಾರಿಗಳ ಜತೆ ಚರ್ಚಿಸಿ ರಾಂಪುರ ಏತ ನೀರಾವರಿ ಯೋಜನೆಯಿಂದ ಕುಡಿವ ನೀರಿನ ಕೆರೆ ತುಂಬಿಸಲು ತಿರ್ಮಾನಿಸಲಾಗಿದೆ. ನಂತರ ಪ್ರಾದೇಶಿಕ ಆಯುಕ್ತರು ಹಾಗೂ ಕೆಬಿಜೆಎನ್‌ಎಲ್ ಮುಖ್ಯ ಇಂಜಿನಿಯರ್‌ಗೆ ಸಮಸ್ಯೆ ಮನವರಿಕೆ ಮಾಡಿ ಜೂ.29ರಿಂದ ಕುಡಿವ ನೀರಿನ ಕೆರೆಗೆ ನೀರು ಹರಿಸಲಾಗುತ್ತಿದೆ. ಇನ್ನೂ ಒಂದೂವರೆ ತಿಂಗಳವರೆಗೆ ಪಟ್ಟಣದ ಜನತೆಗೆ ಎಂದಿನಂತೆ ನೀರು ಸರಬರಾಜು ಮಾಡಲಾಗುವುದು. ಅಗಸ್ಟ್ ತಿಂಗಳಲ್ಲಿ ಐಸಿಸಿ ಸಭೆ ನಂತರ ನಾಲೆಗೆ ನೀರು ಹರಿಸುವುದರಿಂದ ನೀರಿನ ಸಮಸ್ಯೆಯಾಗದು ಎಂದರು.
ಪಟ್ಟಣಕ್ಕೆ 24/7 ಕುಡಿವ ನೀರು ಯೋಜನೆ ಹಾಗೂ ಒಳಚರಂಡಿ ಯೋಜನೆ ಜಾರಿಗೊಳಿಸುವ ಬಗ್ಗೆ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಅನುಮೋದನೆ ದೊರೆತಿತ್ತು. ಆದರೆ ಬಿಜೆಪಿ ಸರ್ಕಾರ ಬಂದ ಮೇಲೆ ಈ ಯೋಜನೆ ರದ್ದು ಮಾಡಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ಆದರೂ ಯಾವುದಕ್ಕೂ ಹಿಂಜರಿಯುವ ಪ್ರಶ್ನೆಯೇ ಇಲ್ಲ, ಹೋರಾಟ ಮಾಡಿಯಾದರೂ ಯೋಜನೆ ತರುವೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಭೂಪನಗೌಡ ಕರಡಕಲ್, ಮುಖಂಡರಾದ ಪಾಮಯ್ಯ ಮುರಾರಿ, ಸೋಮಶೇಖರ ಐದನಾಳ, ಪುರಸಭೆ ಸದಸ್ಯರಾದ ಮಹ್ಮದ್ ರಫಿ, ಪ್ರಮೋದ ಕುಲಕರ್ಣಿ, ಮೌಲಾಸಾಬ್, ಕುಪ್ಪಣ್ಣ ಕೊಡ್ಲಿ, ಪರಶುರಾಮ ನಗನೂರು ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Raichuru: ರಿಮ್ಸ್ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ
Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ
Maski ಅಕ್ರಮ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.