ಅಂಗವಿಕಲರಿಗೆ ವಿಶೇಷ ಪ್ಯಾಕೇಜ್ ಘೋಷಿಸಿ
Team Udayavani, May 15, 2020, 4:40 PM IST
ಲಿಂಗಸುಗೂರು: ಅಂಗವಿಕಲರ ಆರ್‌ಪಿಡಿ ಟಾಸ್ಕ್ಫೋರ್ಸ್ ಸಮಿತಿ ಪದಾಧಿಕಾರಿಗಳು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಲಿಂಗಸುಗೂರು: ಲಾಕ್‌ಡೌನ್ ಸಮಯದಲ್ಲಿ ಅಂಗವಿಕಲರು ವಿವಿಧ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ವಿಶೇಷ ಪ್ಯಾಕೇಜ್ ಘೋಷಣೆಗೆ ಆಗ್ರಹಿಸಿ ವಿಕಲಚೇತನರ ಆರ್‌ಪಿಡಿ ಟಾಸ್ಕ್ಫೋರ್ಸ್ ಸಮಿತಿ ಪದಾಧಿಕಾರಿಗಳು ಸಹಾಯಕ ಆಯುಕ್ತರಿಗೆ ಮನವಿ ಸಲ್ಲಿಸಿದರು.
ಅಂಗವಿಕಲರಿಗೆ ಎರಡು ತಿಂಗಳು ಮಾಸಾಶನ ಬಿಡುಗಡೆ ಮಾಡಲಾಗುವುದು ಎಂದು ಸರ್ಕಾರ ಘೋಷಿಸಿತ್ತು. ಆದರೆ ಈವರಿಗೂ ಎರಡು ತಿಂಗಳ ಮಾಸಾಶನ ಬಿಡುಗಡೆ ಮಾಡಿಲ್ಲ. ಇದರಿಂದ ಅಂಗವಿಕಲರಿಗೆ ಔಷಧ ಹಾಗೂ ದಿನ ಬಳಕೆ ಖರೀದಿಗಾಗಿ ತೊಂದರೆಯಾಗಿದೆ. ತಾಲೂಕು ಆಡಳಿತದಿಂದ ಆಹಾರ ಕಿಟ್ ವಿತರಣೆ ಸಂದರ್ಭದಲ್ಲಿ ಅಂಗವಿಕಲರನ್ನು ಪರಿಗಣಿಸಿಲ್ಲ. ಈ ಬಗ್ಗೆ ಯಾರೂ ಗಮನ ಹರಿಸುತ್ತಿಲ್ಲ. ಆದ್ದರಿಂದ ಅಂಗವಿಕಲರಿಗಾಗಿ ವಿಶೇಷ ಪ್ಯಾಕೇಜ್ ಘೋಷಣೆ ಮಾಡಬೇಕು ಹಾಗೂ 5 ಸಾವಿರ ರೂ. ಸಹಾಯಧನ ನೀಡಬೇಕು ಎಂದು ಆಗ್ರಹಿಸಿ ಸಿಎಂಗೆ ಬರೆದ ಮನವಿಯನ್ನು ಸಹಾಯಕ ಆಯುಕ್ತರಿಗೆ ಸಲ್ಲಿಸಿದರು.
ಸಮಿತಿ ತಾಲೂಕು ಅಧ್ಯಕ್ಷ ನಿಂಗನಗೌಡ ಮಾಚಕನೂರು, ಸುರೇಶ ಭಂಡಾರಿ, ಬಾಲಪ್ಪ ಕಡದಾಳ, ವೀರಭದ್ರಪ್ಪ ಗೆಜ್ಜಲಗಟ್ಟಾ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
Sri Krishnadevaraya ವಿ.ವಿ.ಗೆ ಮಂಗಳಮುಖಿ ಅತಿಥಿ ಉಪನ್ಯಾಸಕಿ; ರಾಜ್ಯದಲ್ಲೇ ಮೊದಲು
Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: 1.15 ಕೋ.ರೂ. ಚಿನ್ನ, ಕೇಸರಿ ಪತ್ತೆ
Winter Session: ಬಾಣಂತಿ ಸಾವು: ನ್ಯಾಯಾಂಗ ತನಿಖೆಗೆ ಬಿಜೆಪಿ ಪಟ್ಟು
United Nations: ನಾಡಿದ್ದು ವಿಶ್ವ ಧ್ಯಾನ ದಿನ: ಶ್ರೀ ರವಿಶಂಕರ್ ನೇತೃತ್ವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.