ತೊಗರಿ ಖರೀದಿ ನಿಯಮ ಖಂಡಿಸಿ ರೈತರ ಪ್ರತಿಭಟನೆ
ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿಗೆ ಪರದಾಟ
Team Udayavani, Jan 20, 2020, 4:24 PM IST
ಲಿಂಗಸುಗೂರು: ತೊಗರಿ ಖರೀದಿ ಕೇಂದ್ರದಲ್ಲಿ ನೋಂದಣಿ ನಿಯಮಗಳನ್ನು ಕೇಳಿ ತಬ್ಬಿಬ್ಬುಗೊಂಡು ಬೆಳೆ ದರ್ಶಕ ಆ್ಯಪ್ ಮಾಡಿದ ಕಂದಾಯ ಇಲಾಖೆಯ ಯಡವಟ್ಟಿಗೆ ರೈತರು ಪರದಾಡುವಂತಾಗಿದ್ದು, ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೊಗರಿ ಖರೀದಿ ಕೇಂದ್ರದಲ್ಲಿ ಹೆಸರು ನೋಂದಾಯಿಸಲು ತೀವ್ರವಾಗಿ ಹೆಣಗಬೇಕಿರುವ ಕಾರಣ ರೈತರು ಇತ್ತೀಚೆಗೆ ಪಟ್ಟಣದ ಟಿಎಪಿಎಂಸಿಯಲ್ಲಿನ ಖರೀದಿ ಕೇಂದ್ರದ ಬಳಿ ಪ್ರತಿಭಟನೆ ನಡೆಸಿದರು. ಹೊನ್ನಹಳ್ಳಿಯ ರೈತನೊಬ್ಬ ಲಿಂಗಸುಗೂರು ಪಟ್ಟಣದಲ್ಲಿ ಆರಂಭಿಸಿರುವ ತೊಗರಿ ಖರೀದಿ ಕೇಂದ್ರಕ್ಕೆ ಬಂದು ಪಹಣಿಯ ಬೆಳೆ ಕಾಲಂನಲ್ಲಿ ತೊಗರಿ ಎಂದು ದಾಖಲಾಗಿದೆ. ಫ್ರುಟ್ಸ್ ಸಾಫ್ಟ್‌ವೇರ್‌ನಲ್ಲಿ ತೆಗೆದು ನೋಡಿದಾಗ ಎಲ್ಲವೂ ಸರಿಯಾಗಿದೆ. ಆದರೂ ಖರೀದಿ ಕೇಂದ್ರದಲ್ಲಿ ತೊಗರಿ ಮಾರಾಟ ಮಾಡಲು ನೋಂದಣಿ ಆಗುತ್ತಿಲ್ಲ. ಏಕೆಂದರೆ ಈ ಹಿಂದೆ ಕಂದಾಯ ಇಲಾಖೆ ನಡೆಸಿದ ಬೆಳೆ ಸರ್ವೇ ಸಂದರ್ಭದಲ್ಲಿ ಬೇರೆ ಬೆಳೆ ನಮೂದು ಮಾಡಿದ್ದಾರೆ. ಇದರಿಂದ ತೊಗರಿ ಖರೀದಿ ಕೇಂದ್ರದಲ್ಲಿ ನಿಮ್ಮ ಹೆಸರು ಅಪ್‌ಲೋಡ್ ಆಗುತ್ತಿಲ್ಲ ಎಂದು ಸಿಬ್ಬಂದಿ ತಿಳಿಸಿದ್ದಾರೆ.
ಇದರಂತೆ ತೊಗರಿ ಮಾರಾಟ ಮಾಡಲು ಕೇಂದ್ರಕ್ಕೆ ಬಂದ
ಬಹುತೇಕ ರೈತರಿಗೆ ಸಮಸ್ಯೆ ಎದುರಾಗಿದೆ. ಫ್ರುಟ್ಸ್ ತಂತ್ರಾಂಶದ ಮೂಲಕ ಎಫ್‌ಐಡಿ ರೈತರ ಗುರುತಿನ ಸಂಖ್ಯೆ ನೀಡಿ ಆಧಾರ್ ಸಂಖ್ಯೆ ಬಳಸಿದರೆ ಹೆಸರು, ಬೆಳೆ ಹೊಂದಾಣಿಕೆ ಆಗುತ್ತಿಲ್ಲ. ಕೆಲವು ರೈತರದು ಹೊಂದಾಣಿಕೆಯಾದರೂ ತೊಗರಿ ಕೇಂದ್ರದ ಸಾಫ್ಟ್‌ವೇರ್‌ನಲ್ಲಿ ನೋಂದಣಿ ಆಗುತ್ತಿಲ್ಲ. ಅಲ್ಲದೇ ತೊಗರಿ ಖರೀದಿ ಕೇಂದ್ರದಲ್ಲಿನ ರೈತರಿಗೆ ತೊಗರಿ ಮಾರಾಟ ಮಾಡಲು ನೀಡಬೇಕಿರುವ ದಾಖಲೆಗಳ ಮಾಹಿತಿ ಸಮಪರ್ಕವಾಗಿ ಸಿಗುತ್ತಿಲ್ಲ ಹೀಗಾಗಿ ಲಿಂಗಸುಗೂರು ತೊಗರಿ ಖರೀದಿ ಕೇಂದ್ರಕ್ಕೆ ರೈತರು ಮುತ್ತಿಗೆ ಹಾಕಿ ಖರೀದಿ ಕೇಂದ್ರದಲ್ಲಿ ಸಿಬ್ಬಂದಿಯನ್ನು ತರಾಟೆಗೆ ತೆಗೆದುಕೊಂಡರು.
ಖರೀದಿ ನಿಯಮ: ತೊಗರಿ ಉತ್ಪನ್ನ ಖರೀದಿಸುವ ಮುನ್ನ ರೈತರು ನೀಡಿರುವ ವಿವರ ನ್ಯಾಫೆಡ್ ಸಂಸ್ಥೆಯ ತಂತ್ರಾಂಶದೊಂದಿಗೆ ಭೂಮಿ (ಯುಐಡಿಎಐ), ಬೆಳೆ ಸಮೀಕ್ಷೆ ದತ್ತಾಂಶದೊಂದಿಗೆ ತಾಳೆ ಮಾಡಿ ಪರಿಶೀಲಿಸಿ ನಂತರವೇ ನೊಂದಾಯಿಸಿಕೊಳ್ಳತಕ್ಕದ್ದು. ಒಂದು ವೇಳೆ ಬೆಳೆ ದರ್ಶಕದಲ್ಲಿ ಬೆಳೆ ಬೆಳೆಯದೇ ಇರುವುದು ಕಂಡುಬಂದಲ್ಲಿ ಅಂತಹ ರೈತರಿಗೆ ಕಂದಾಯ ಇಲಾಖೆ ಅಧಿಕಾರಿಗಳು ದೃಢೀಕೃತ ಪಹಣಿ ಪಡೆದು ರೈತರನ್ನು ಮತ್ತು ಪಹಣಿಯಲ್ಲಿರುವ ರೈತರ ಹೆಸರಿನ ಆಧಾರ್ ಸಂಖ್ಯೆಗೆ ಜೋಡಣೆಗೊಂಡ ಬ್ಯಾಂಕ್ ಖಾತೆ ಪಡೆದು ನೋಂದಣಿ ಮಾಡಿಕೊಳ್ಳಬೇಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Ambedkar Row: ಕಾಂಗ್ರೆಸ್ ಎಂದರೆ ಫೇಕ್ ಗಾಂಧಿಗಳ ಪಕ್ಷ: ಛಲವಾದಿ ನಾರಾಯಣಸ್ವಾಮಿ
Delhi bom*b ಬೆದರಿಕೆ; ಮಕ್ಕಳಿಗೆ ರಜೆ ಬೇಕಾಗಿತ್ತು: ಕಾರಣ ಬಿಚ್ಚಿಟ್ಟ ಪೊಲೀಸರು!
ಇಂದು ರಾಷ್ಟ್ರೀಯ ರೈತ ದಿನ: ರೈತರ ಬದುಕು ಹಸನಾದರಷ್ಟೇ ಉಳಿದೀತು ಕೃಷಿ ಸಂಸ್ಕೃತಿ
Sabarimala Railway: ಶಬರಿಮಲೆ ತೀರ್ಥಾಟನೆ: ಕೇರಳಕ್ಕೆ 10 ವಿಶೇಷ ರೈಲು
Champions Trophy, ಭಾರತ ಪ್ರವಾಸಕ್ಕೆ ಇಂಗ್ಲೆಂಡ್ ತಂಡ ಪ್ರಕಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.