ಚರ್ಮಗಂಟು; ಬಿಡಾಡಿ ದನಗಳಿಗಿಲ್ವೆ ಚಿಕಿತ್ಸೆ?
Team Udayavani, Nov 22, 2022, 6:34 PM IST
ರಾಯಚೂರು: ಜಾನುವಾರುಗಳಿಗೆ ಚರ್ಮಗಂಟು ರೋಗ ಹಾವಳಿ ಎಲ್ಲೆಡೆ ಹೆಚ್ಚಾಗಿದೆ. ಇದೊಂದು ಸಾಂಕ್ರಾಮಿಕ ರೋಗವಾಗಿದ್ದು, ಬಿಡಾಡಿ ದನಗಳು ಕೂಡ ಈ ಕಾಯಿಲೆಗೆ ತುತ್ತಾಗುತ್ತಿರುವುದು ಮತ್ತಷ್ಟು ಆತಂಕಕ್ಕೆಡೆ ಮಾಡಿದೆ.
ಈ ಕಾಯಿಲೆಗೆ ಸೂಕ್ತ ಚಿಕಿತ್ಸೆ ಲಭ್ಯವಿದ್ದು, ಜಾನುವಾರು ಮಾಲೀಕರು ವ್ಯಾಕ್ಸಿನ್ ಕೊಡಿಸುತ್ತಿದ್ದಾರೆ. ಆದರೆ, ಬಿಡಾಡಿ ದನಗಳು ಕೂಡ ಈ ಕಾಯಿಲೆಗೆ ತುತ್ತಾಗುತ್ತಿರುವ ಸಂಗತಿ ಹೆಚ್ಚಾಗಿ ಕಂಡು ಬರುತ್ತಿದೆ. ಈ ಜಾನುವಾರುಗಳಿಗೆ ಚಿಕಿತ್ಸೆ ಯಾರು ನೀಡಬೇಕೆಂಬ ಪ್ರಶ್ನೆ ಮೂಡಿದೆ. ಇಲಾಖೆ ಸಿಬ್ಬಂದಿ ಎಲ್ಲೆಡೆ ಚಿಕಿತ್ಸೆ ನೀಡುತ್ತಿದ್ದು, ಜಿಲ್ಲೆಯಲ್ಲಿ ಇನ್ನೂ 70 ಸಾವಿರಕ್ಕೂ ಅಧಿಕ ಮಕ್ಕಳಿಗೆ ವ್ಯಾಕ್ಸಿನ್ ನೀಡಬೇಕಿದೆ. ಆದರೆ ಜಾನುವಾರು ಮಾಲೀಕರು ಚಿಕಿತ್ಸೆ ಕೊಡಿಸಲು
ಮುಂದಾಗುತ್ತಿದ್ದರೆ, ಬಿಡಾಡಿ ದನಗಳ ಆರೋಗ್ಯ ಕಾಳಜಿ ಮಾಡುವವರಿಲ್ಲದಂತಾಗಿದೆ.
ಇದೊಂದು ಸಾಂಕ್ರಾಮಿಕ ರೋಗವಾಗಿರುವ ಕಾರಣಕ್ಕೂ ಬೇರೆ ಜಾನುವಾರುಗಳಿಗೆ ಸೋಂಕು ಹರಡಿದರೆ ಏನು ಮಾಡೋದು ಎಂಬ ಆತಂಕ ಕಾಡುತ್ತಿದೆ. ಚರ್ಮಗಂಟು ಸೋಂಕು ಕೆಲವೆಡೆ ಚಿಕಿತ್ಸೆ ನೀಡಿದರೂ ನಿಯಂತ್ರಣಕ್ಕೆ ಬರುತ್ತಿಲ್ಲ.
ಮಿತಿ ಮೀರಿದ ಹಾವಳಿ: ನಗರದಲ್ಲಿ ಬಿಡಾಡಿ ದನಗಳ ಹಾವಳಿ ಮಿತಿ ಮೀರಿದೆ. ಯಾವುದೇ ಪ್ರಮುಖ ರಸ್ತೆಗಳಿಗೆ ಹೋದರೂ ರಸ್ತೆ ಅಡ್ಡವಾಗಿ ಹತ್ತಾರು ಜಾನುವಾರು ನಿಂತಿರುವ ದೃಶ್ಯ ಸಾಮಾನ್ಯವಾಗಿರುತ್ತದೆ. ಈ ಹಿಂದಿದ್ದ ಎಸ್‌ಪಿ ವೇದಮೂರ್ತಿಯವರು ಜಾನುವಾರು ಹಿಡಿದು ಕೂಡಿ ಹಾಕಿದ್ದರು. ಮಾಲೀಕರು
ಬಂದು ಬಿಡಿಸಿಕೊಂಡು ಹೋಗುವಂತೆ ಎಚ್ಚರಿಕೆ ಕೊಟ್ಟಿದ್ದರು. ಅಲ್ಲದೇ ದಂಡವನ್ನೂ ವಿ ಧಿಸಿದ್ದರು. ಕೆಲ ದಿನ ಈ ಸಮಸ್ಯೆಗೆ ವಿರಾಮ ಸಿಕ್ಕಿತ್ತು. ಅವರು ವರ್ಗಾವಣೆ ಆಗುತ್ತಿದ್ದಂತೆ ಮತ್ತದೇ ಹಳೇ ಪದ್ಧತಿ ಮುಂದುವರಿದಿದೆ. ಈಗ ಎಲ್ಲ ಕಡೆ ಮತ್ತೆ ಬಿಡಾಡಿ ದನಗಳ ಹಾವಳಿ ಎಂದಿನಂತೆ ಕಾಡುತ್ತಿದೆ. ಅಂಥ ಜಾನುವಾರುಗಳು ಕೂಡ ರೋಗಕ್ಕೆ ತುತ್ತಾಗುತ್ತಿವೆ.
1.70 ಲಕ್ಷ ಜಾನುವಾರುಗಳಿಗೆ ವ್ಯಾಕ್ಸಿನ್
ರಾಯಚೂರು ಜಿಲ್ಲೆಯಲ್ಲಿ ಎಮ್ಮೆಗಳನ್ನು ಹೊರತಾಗಿಸಿ ಸುಮಾರು 2.45 ಲಕ್ಷಕ್ಕೂ ಅಧಿಕ ಜಾನುವಾರುಗಳಿವೆ. ಅದರಲ್ಲಿ ಈಗ ಸರಿ ಸುಮಾರು 1.70 ಲಕ್ಷ ಜಾನುವಾರುಗಳಿಗೆ ಚರ್ಮಗಂಟು ರೋಗ ನಿಯಂತ್ರಣಕ್ಕಾಗಿ ವ್ಯಾಕ್ಸಿನ್ ನೀಡಲಾಗಿದೆ. ಹೆಚ್ಚುವರಿ ಲಸಿಕೆಗೆ ಪ್ರಸ್ತಾವನೆ ಕೂಡ ಸಲ್ಲಿಸಲಾಗಿದೆ. ಆದರೆ ಪಶು ಇಲಾಖೆಯಲ್ಲಿ ಶೆ.65 ಸಿಬ್ಬಂದಿ ಕೊರತೆಯಿದ್ದು, ನಿರೀಕ್ಷಿತ ಮಟ್ಟದಲ್ಲಿ ಲಸಿಕೆ ನೀಡಲಾಗಿಲ್ಲ. ಜಿಲ್ಲೆಯಲ್ಲಿ ಈವರೆಗೆ ಚರ್ಮಗಂಟು ಕಾಯಿಲೆಯಿಂದ 80
ಜಾನುವಾರು ಸತ್ತಿವೆ ಎಂದು ಗುರುತಿಸಲಾಗಿದೆ. ಆದರೆ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಈಗಾಗಲೇ ಚರ್ಮಗಂಟು ರೋಗಕ್ಕೆ ಸಾವಿರಾರು ಜಾನುವಾರು ಮೃತಪಟ್ಟಿದ್ದು, ಜಿಲ್ಲೆಯಲ್ಲಿ ಸಾವಿನ ಪ್ರಮಾಣ ಕಡಿಮೆ ಎನ್ನುತ್ತಾರೆ ಇಲಾಖೆ ಅಧಿಕಾರಿಗಳು.
ಚರ್ಮಗಂಟು ಕಾಯಿಲೆ ಕೊರೊನಾ ರೀತಿಯ ಸಾಂಕ್ರಾಮಿಕ ರೋಗವಾಗಿದೆ. ಯಾವ ಜಾನುವಾರು ಸದೃಢವಾಗಿರುವುದೋ ಅವುಗಳಿಗೆ ಏನು ಆಗಲ್ಲ. ದುರ್ಬಲ ಜನುವಾರುಗಳು ಮಾತ್ರ ಕಾಯಿಲೆಗೆ ತುತ್ತಾಗುವ ಸಾಧ್ಯತೆ ಇರುತ್ತದೆ. ಜಿಲ್ಲೆಯಲ್ಲಿ ಈಗಾಗಲೇ ವ್ಯಾಕ್ಸಿನ್ ನೀಡುವ ಕಾರ್ಯ ನಡೆಯುತ್ತಿದೆ. ಸಿಬ್ಬಂದಿ ಕೊರತೆಯಿಂದ ಎಲ್ಲ ಜಾನುವಾರುಗಳಿಗೆ ಲಸಿಕೆ ನೀಡಲಾಗಿಲ್ಲ. ಬಿಡಾಡಿ ದನಗಳಿಗೆ ಲಸಿಕೆ ನೀಡಬೇಕಾದರೆ ಸ್ಥಳೀಯರ ಸಹಕಾರ ಬೇಕಿದೆ. ನಮ್ಮ ಸಿಬ್ಬಂದಿ ಒಬ್ಬರೇ ಇರುವ ಕಾರಣ ಲಸಿಕೆ ನೀಡಲು ಆಗಲ್ಲ. ಸ್ಥಳೀಯರು ಜಾನುವಾರು ಹಿಡಿದುಕೊಂಡಲ್ಲಿ ವ್ಯಾಕ್ಸಿನ್ ನೀಡಲು ಸುಲಭವಾಗಲಿದೆ.
ಡಾ|ಅಶೋಕ ಕೊಲ್ಲಾ, ಉಪನಿರ್ದೇಶಕರು, ಪಶು ಸಂಗೋಪನಾ ಇಲಾಖೆ, ರಾಯಚೂರು
ಸಿದ್ಧಯ್ಯಸ್ವಾಮಿ ಕುಕನೂರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.