![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 5, 2022, 3:29 PM IST
ದೇವದುರ್ಗ: ಯರಮಸಾಳ ಮಾರ್ಗವಾಗಿ ನಾಗರಾಳ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿ ಗುಣಮಟ್ಟ ಕಾಯ್ದುಕೊಳ್ಳಲು ಅಧಿಕಾರಿಗಳು ನಿಗಾವಹಿಸಬೇಕು. ಕಳಪೆ ಕೆಲಸ ಕುರಿತು ಗ್ರಾಮಸ್ಥರಿಂದ ದೂರು ಬಂದಲ್ಲಿ ಅಧಿಕಾರಿಗಳೇ ನೇರ ಹೊಣೆ ಎಂದು ಶಾಸಕ ಕೆ. ಶಿವನಗೌಡ ನಾಯಕ ಎಚ್ಚರಿಸಿದರು.
ಸಮೀಪದ ಯರಮಸಾಳ ಗ್ರಾಮದಲ್ಲಿ ಕೆಕೆಆರ್‌ಡಿಬಿ ಯೋಜನೆಯ 572 ಲಕ್ಷ ರೂ. ಅನುದಾನದಲ್ಲಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.
ಬಹುಕಾಲ ಬಾಳಿಕೆಗೆ ಬರುವಂತಹ ಗುಣಮಟ್ಟದ ರಸ್ತೆ ಕಾಮಗಾರಿ ಕೈಗೊಳ್ಳಬೇಕು. ಉತ್ತಮ ರಸ್ತೆ ನಿರ್ಮಾಣದಿಂದ ಈ ಭಾಗದ ಜನರಿಗೆ ಅನುಕೂಲವಾಗಲಿದೆ. ಹೀಗಾಗಿ ಅಧಿಕಾರಿಗಳು ಕಾಳಜಿಯಿಂದ ಕಾಮಗಾರಿ ನೋಡಿಕೊಳ್ಳಬೇಕು ಎಂದು ಹೇಳಿದರು.
ಗ್ರಾಮಸ್ಥರ ಸಹಕಾರ ಮೂಲಕ ಗುತ್ತಿಗೆದಾರರಿಂದ ಉತ್ತಮ ರಸ್ತೆ ನಿರ್ಮಿಸಿಕೊಳ್ಳಬೇಕು. ಈ ಭಾಗದ ಜನರ ಬೇಡಿಕೆಯಂತೆ ರಸ್ತೆ ನಿರ್ಮಿಸಲಾಗುತ್ತಿದೆ. ಅದರಂತೆ ಗುಣಮಟ್ಟ ಕಾಮಗಾರಿ ಬಗ್ಗೆ ಜನರು ಎಚ್ಚರ ವಹಿಸಬೇಕು ಎಂದು ಹೇಳಿದರು.
ಹತ್ತು ಹಲವು ಗ್ರಾಮಗಳಿಗೆ ರಸ್ತೆ ಸಂಪರ್ಕ ಕಲ್ಪಿಸಲು ಕ್ರಿಯಾಯೋಜನೆ ರೂಪಿಸಲಾಗಿದೆ. ಯಾವುದೇ ಕಾಮಗಾರಿ ಕೈಗೊಂಡರು ಗುಣಮಟ್ಟದ ಬಗ್ಗೆ ನಿಗಾ ವಹಿಸಿದಾಗ ಮಾತ್ರ ಬಹುವರ್ಷ ರಸ್ತೆಗಳು ಬಳಕೆ ಬರಲಿವೆ ಎಂದು ಹೇಳಿದರು.
ಪ್ರಕಾಶ ಪಾಟೀಲ್ ಜೇರಬಂಡಿ, ಬಸವರಾಜಸ್ವಾಮಿ ಯರಮಸಾಳ, ಲಿಂಗನಗೌಡ, ಕೆಂಚಣ್ಣ ಪೂಜಾರಿ, ರವಿಗೌಡ ಮಾತ್ಪಳ್ಳಿ, ಮಲ್ಲಿಕಾರ್ಜುನ ಸೇರಿದಂತೆ ಇತರರು ಇದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.