ಗೆಲುವಿಗಾಗಿ ಮನೆ ತೊರೆಯುವ ಸಂಕಲ್ಪ ಮಾಡಿ
Team Udayavani, Mar 1, 2019, 7:26 AM IST
ರಾಯಚೂರು: ಲೋಕಸಭೆ ಚುನಾವಣೆಗೆ ಇನ್ನೂ 7 ವಾರ ಕೂಡ ಉಳಿದಿಲ್ಲ. ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ ಎಂದು ನಾನು ಈಗಾಗಲೇ ನಿರ್ಧರಿಸಿದ್ದು, ನೀವು ಕೂಡ ಪಕ್ಷದ ಗೆಲುವಿಗಾಗಿ ಮನೆ ತೊರೆಯುವ ಸಂಕಲ್ಪ ಮಾಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಕಾರ್ಯಕರ್ತರಿಗೆ ಕರೆ ನೀಡಿದರು. ನಗರದ ಖಾಸಗಿ ಹೋಟೆಲ್‌ನಲ್ಲಿ ಗುರುವಾರ ಹಮ್ಮಿಕೊಂಡಿದ್ದ ಮೋದಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಅದಕ್ಕೂ ಮುನ್ನ ದೇಶಾದ್ಯಂತ ಏಕಕಾಲದಲ್ಲಿ ಪ್ರಧಾನಿ ನರೇಂದ್ರ ಮೋದಿ ನಡೆಸಿದ ಸಂವಾದ ಕಾರ್ಯಕ್ರಮ ವೀಕ್ಷಿಸಿದರು.
ದೇಶದ ಪ್ರಧಾನಿ ನರೇಂದ್ರ ಮೋದಿ ಕಳೆದ 5 ವರ್ಷದಿಂದ ರಜೆ ಇಲ್ಲದೇ ಶ್ರಮಿಸುತ್ತಿದ್ದಾರೆ. ನಾವು ಕನಿಷ್ಟ ಪಕ್ಷ ಚುನಾವಣೆ ವೇಳೆಯಲ್ಲಾದರೂ ಪಕ್ಷಕ್ಕಾಗಿ ಶ್ರಮಿಸಬೇಕು. ನಾನು ಈಗಾಗಲೇ 10-12 ದಿನಗಳಿಂದ ಪ್ರವಾಸ ಆರಂಭಿಸಿದ್ದೇನೆ. ಚುನಾವಣೆ ಮುಗಿಯುವವರೆಗೂ ಮನೆ ಸೇರುವುದಿಲ್ಲ. ನೀವು ಕೂಡ ಬಿಜೆಪಿ ಗೆಲುವಿಗಾಗಿ, ಪಕ್ಷ ಸಂಘಟನೆಗಾಗಿ ಮನೆ ತೊರೆಯಿರಿ ಎಂದರು.
ಪ್ರಧಾನಿ ಮೋದಿಯವರ ಸಾಧನೆಗಳನ್ನು ಪ್ರತಿಯೊಬ್ಬರಿಗೂ ತಿಳಿಸುವ ಕೆಲಸವಾಗಬೇಕು. ಪ್ರತಿ ಕಾರ್ಯಕರ್ತರು ತಮ್ಮ ಮನೆ ಮೇಲೆ ಪಕ್ಷದ ಧ್ವಜ ಹಾರಿಸಬೇಕು. ಮಾ.2ರಂದು ಒಂದು ಸಾವಿರ ಬೈಕ್‌ಗಳ ಮೂಲಕ ರ್ಯಾಲಿ ನಡೆಸಬೇಕು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಇನ್ನೂ ಸ್ವಲ್ಪ ಪ್ರಯತ್ನ ಪಟ್ಟಿದ್ದರೆ ನಾವು ಅಧಿಕಾರ ಚುಕ್ಕಾಣಿ ಹಿಡಿಯಬಹುದಿತ್ತು. ಸಾಕಷ್ಟು ಕ್ಷೇತ್ರಗಳಲ್ಲಿ ಕಡಿಮೆ ಅಂತರದಲ್ಲಿ ಸೋಲನುಭವಿಸಿದ್ದೇವೆ. ಆದರೆ, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಯನ್ನು ಒಂದು ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಎಂದು ಕರೆ ನೀಡಿದರು.
ರಾಜ್ಯ ಸಮಿತಿ ಮುಖಂಡ ಎನ್.ರವಿಕುಮಾರ ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ 4250ಕ್ಕೂ ಅಧಿಕ ವಿಧಾನಸಭೆ ಕ್ಷೇತ್ರಗಳ ಕಾರ್ಯಕರ್ತರೊಂದಿಗೆ ನೇರ ಸಂವಾದ ನಡೆಸಿದ್ದಾರೆ. ಇದು ದಾಖಲೆ ಕಾರ್ಯಕ್ರಮವಾಗಿದೆ. ಪ್ರಧಾನಿ ಮೋದಿ, ಅಮಿತ್ ಶಾ ದೇಶಾದ್ಯಂತ ಸಂಚರಿಸಿದರೆ, ಬಿಎಸ್‌ವೈ ಸೇರಿ ಅನೇಕ ನಾಯಕರು ರಾಜ್ಯಾದ್ಯಂತ ಸಂಚರಿಸುತ್ತಿದ್ದಾರೆ. ಅದರಂತೆ ಕಾರ್ಯಕರ್ತರು ನಿಮ್ಮ ನಿಮ್ಮ ಬೂತ್ ಮಟ್ಟದಲ್ಲಿ ಸಂಚರಿಸಿ ಪಕ್ಷ ಬಲಪಡಿಸಿ ಎಂದರು.
ರಾಯಚೂರು ಜಿಲ್ಲಾ ಉಸ್ತುವಾರಿ ಹಾಲಪ್ಪ ಆಚಾರ್, ಬಿಜೆಪಿ ಜಿಲ್ಲಾಧ್ಯಕ್ಷ ಶರಣಪ್ಪಗೌಡ ಜಾಡಲದಿನ್ನಿ, ಶಾಸಕರಾದ ಶಿವರಾಜ ಪಾಟೀಲ, ಕೆ.ಶಿವನಗೌಡ ನಾಯಕ, ಮಾಜಿ ಶಾಸಕರಾದ ಬಸನಗೌಡ ಬ್ಯಾಗವಾಟ್, ಎ.ಪಾಪಾರೆಡ್ಡಿ, ಶಿಸ್ತು ಸಮಿತಿ ಮುಖಂಡ ಎನ್. ಶಂಕ್ರಪ್ಪ, ಮುಖಂಡರಾದ ತ್ರಿವಿಕ್ರಮ ಜೋಶಿ, ಆರ್.ತಿಮ್ಮಯ್ಯ, ಅಶೋಕ ಗಸ್ತಿ, ದೊಡ್ಡಮಲ್ಲೇಶ, ರಮಾನಂದ ಯಾದವ, ಶಶಿಧರ ಮಸ್ಕಿ ಸೇರಿ ಇತರರು ಇದ್ದರು.
ಸಂಕಲ್ಪ ಯಾತ್ರೆ: ಲೋಕಸಭೆ ಚುನಾವಣೆ ಪ್ರಚಾರಾರ್ಥ ಬಿಜೆಪಿಯಿಂದ ಮೋದಿ ವಿಜಯ ಸಂಕಲ್ಪ ಯಾತ್ರೆ ನಡೆಸಲಾಯಿತು. ನಗರದ ಚಂದ್ರಮೌಳೇಶ್ವರ ವೃತ್ತದಿಂದ 100 ಮೀಟರ್ ಅಂತರದಲ್ಲಿರುವ ಖಾಸಗಿ ಹೋಟೆಲ್‌ವರೆಗೂ ಯಾತ್ರೆ ನಡೆಸಲಾಯಿತು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿ ಗಣ್ಯರು ಪಾಲ್ಗೊಂಡಿದ್ದರು. ಇದನ್ನು ಬಸವೇಶ್ವರ ವೃತ್ತದಿಂದ ನಡೆಸುವ ಉದ್ದೇಶವಿತ್ತು. ಆದರೆ ಸಮಯಾಭವದಿಂದ ರದ್ದುಗೊಳಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Derogatory Remark: ಧರ್ಮಸ್ಥಳದಲ್ಲಿ ಆಣೆ, ಪ್ರಮಾಣ ಮುಗಿದ ಕತೆ: ಸಿ.ಟಿ.ರವಿ
Police: ಬಾಂಗ್ಲಾದಿಂದ ಅಕ್ರಮ ವಲಸೆ: ಮುಂಬೈಯಲ್ಲಿ10,ದೆಹಲಿಯಲ್ಲಿ11 ಮಂದಿ ಸೆರೆ
Kashmir: 300 ಅಡಿ ಕಮರಿಗೆ ಸೇನಾ ವಾಹನ ಬಿದ್ದು 5 ಯೋಧರ ಸಾವು; ಹಲವರಿಗೆ ಗಾಯ
Catholic ಸಮ್ಮೇಳನದಲ್ಲಿ ಪ್ರಧಾನಿ ಮೋದಿ ಭಾಗಿ: ಕೇರಳದ ಬಿಷಪ್ ತರಾಟೆ
England; ಬೆನ್ ಸ್ಟೋಕ್ಸ್‌ಗೆ ಗಾಯ: ಚಾಂಪಿಯನ್ಸ್ ಟ್ರೋಫಿಗೆ ಅಲಭ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.