ಲಾಳಗೊಂಡರ ಸಮಾಜಕ್ಕೆ ಮೀಸಲು ಕಲ್ಪಿಸಿ
Team Udayavani, Mar 10, 2022, 1:16 PM IST
ಸಿಂಧನೂರು: ರಾಜ್ಯದ ಜಾತಿ ಪಟ್ಟಿಯಲ್ಲಿ ಸೇರದೇ ಇರುವ ಲಾಳಗೊಂಡರ ಸಮಾಜವನ್ನು ಹಿಂದುಳಿದ ವರ್ಗ 3(ಬಿ)ಗೆ ಸೇರಿಸುವಂತೆ ಒತ್ತಾಯಿಸಿದ ನಿಯೋಗ ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿತು. ತಮ್ಮ ಬೇಡಿಕೆ ಕುರಿತು ಮುಖ್ಯಮಂತ್ರಿಯವರಿಗೆ ಮನವಿ ಸಲ್ಲಿಸಿದ ನಿಯೋಗದ ಮುಖಂಡರು, ಈ ಬಗ್ಗೆ ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ರಾಜ್ಯದಲ್ಲಿ ಲಾಳಗೊಂಡ ಸಮಾಜವು ಆರ್ಥಿಕ, ಸಾಮಾಜಿಕ, ರಾಜಕೀಯವಾಗಿ ಹಿಂದುಳಿದಿದೆ. ವೀರಶೈವ ಜನಾಂಗದ ಜೊತೆಗೆ ಗುರುತಿಸಿಕೊಂಡಿದ್ದಾರೆ. ಲಾಳಗೊಂಡರನ್ನು ಜಾತಿ ಪಟ್ಟಿಯಲ್ಲಿ ಸೇರಿಸುವಂತೆ ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಾ ಬರಲಾಗಿದೆ. ಈವರೆಗೂ ಸ್ಪಂದನೆ ದೊರಕಿಲ್ಲ. ಮುಖ್ಯಮಂತ್ರಿಗಳು ಈ ಬಗ್ಗೆ ಗಮನ ಹರಿಸಿ, ಬೇಡಿಕೆ ಈಡೇರಿಸಬೇಕು ಎಂದಿದ್ದಾರೆ.
ನಿಯೋಗದಲ್ಲಿ ಸಮಾಜದ ರಾಜ್ಯಾಧ್ಯಕ್ಷ ಹರವಿ ಬಸನಗೌಡ, ಸಂಸದ ಸಂಗಣ್ಣ ಕರಡಿ, ಶಾಸಕರಾದ ಡಾ| ಶಿವರಾಜ್ ಪಾಟೀಲ್, ಬಸವರಾಜ ದಢೇಸುಗೂರು, ಸೋಮಲಿಂಗಪ್ಪ, ರಾಜಾವೆಂಕಟಪ್ಪ ನಾಯಕ, ಪರಣ್ಣ ಮುನವಳ್ಳಿ, ಸಿಂಧನೂರಿನ ಕೆ.ಶರಣಬಸವ ವಕೀಲರು, ಮಲ್ಲಿಕಾರ್ಜುನ ವಕೀಲರು, ಚಂದ್ರೇಗೌಡ ಹರೇಟನೂರು, ರಾಮನಗೌಡ ಮಲ್ಕಾಪುರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ
Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು
Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.