ಮಾನ್ವಿ: ನಿನ್ನೆ 16 ಮಂದಿಗೆ ಕೋವಿಡ್ ದೃಢ
Team Udayavani, Jul 5, 2020, 11:15 AM IST
ಮಾನ್ವಿ: ಪಟ್ಟಣದ ವಾರ್ಡ್ ನಂ.5ರ ಕಾಕತೀಯ ನಗರದ ವ್ಯಕ್ತಿಗೆ ಸೋಂಕು ತಗುಲಿದ ಹಿನ್ನೆಲೆಯಲ್ಲಿ ತಹಶೀಲ್ದಾರ್ ಅಮರೇಶ ಬಿರಾದಾರ, ಟಿಎಚ್‌ಒ ಚಂದ್ರಶೇಖರಯ್ಯ ಸ್ಥಳಕ್ಕೆ ತೆರಳಿ ಪರಿಶೀಲಿಸಿದರು.
ಮಾನ್ವಿ: ತಾಲೂಕಿನಲ್ಲಿ ಶನಿವಾರ ಒಂದೇ ದಿನ 16 ಜನರಿಗೆ ಕೋವಿಡ್ ಸೋಂಕು ವಕ್ಕರಿಸಿದ್ದು, ಸಾರ್ವಜನಿಕರಲ್ಲಿ ಭಯ ಹುಟ್ಟಿಸಿದೆ. ಪಟ್ಟಣದ ವಾರ್ಡ್ ನಂ.14 (ಪಿಟಿಎಂ ರೋಡ್), ವಾರ್ಡ್
ನಂ. 8 (ಅಂಬೇಡ್ಕರ್ ನಗರ) ಹಾಗೂ ವಾರ್ಡ್ ನಂ. 5 (ಕಾಕತೀಯ ನಗರ) ಸೇರಿ ಒಟ್ಟು 11 ಜನರಿಗೆ ಸೋಂಕು ತಗುಲಿದೆ. ಇನ್ನು ತಾಲೂಕಿನ ಉಮ್ಮಳಿ ಹೊಸೂರನಲ್ಲಿ 1, ಸಾಂಗಾಪುರ 1, ಬಾಗಲವಾಡ 3 ಮಂದಿಗೆ ಸೇರಿ ಒಟ್ಟು 16 ಕೋವಿಡ್ ಪಾಸಿಟಿವ್ ಪ್ರಕರಣ ದೃಢಪಟ್ಟಿವೆ.
ಸೋಂಕಿತ ವ್ಯಕ್ತಿಗಳಿಂದ ಟ್ರಾವೆಲ್ ಹಿಸ್ಟರಿ ಕಲೆ ಹಾಕಲಾಗುತ್ತಿದ್ದು, ಪ್ರಕರಣ ದೃಢವಾದ ಪ್ರದೇಶಗಳನ್ನು ಕಂಟೈನ್ಮೆಂಟ್ ಝೋನ್ ಎಂದು ಗುರುತಿಸಲಾಗಿದೆ. ಸೋಂಕಿತರನ್ನು ಜಿಲ್ಲಾ ಕೋವಿಡ್
-19 ಆಸ್ಪತ್ರೆಗೆ ದಾಖಲಿಸಲಾಗಿದೆ. ತಾಲೂಕಿನಾದ್ಯಂತ ದಿನದಿಂದ ದಿನಕ್ಕೆ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು ಸಾರ್ವಜನಿಕರು ಕಡ್ಡಾಯವಾಗಿ ಮಾಸ್ಕ್ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ಮೂಲಕ ಸೋಂಕು ಹರಡದಂತೆ ಸ್ವಯಂ ಎಚ್ಚರ ವಹಿಸಬೇಕು. ಸೋಂಕಿತರ ಸಂಪರ್ಕದಲ್ಲಿರುವವರು ಸ್ವಯಂ ಪ್ರೇರಣೆಯಿಂದ ಕೋವಿಡ್-19 ಪರೀಕ್ಷೆ ಮಾಡಿಸಿಕೊಳಲು ವೈದ್ಯಾಧಿಕಾರಿಗಳು ವಿನಂತಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Development: ಭಾರತದ ಅಭಿವೃದ್ಧಿಯಲ್ಲಿ ಯುವ ಶಕ್ತಿಯ ಪ್ರಾಮುಖ್ಯತೆ
Actor Arrested: ಸ್ಯಾಂಡಲ್ವುಡ್ ನಿರ್ದೇಶಕನ ಮೇಲೆ ಗುಂಡು ಹಾರಿಸಿ ಹತ್ಯೆಗೆ ಯತ್ನ; ನಟ ಬಂಧನ
ಹರಗಾಪುರ ಕೇಸ್ ಗೆ ತಿರುವು: ದರೋಡೆ ಆಗಿದ್ದು 75 ಲಕ್ಷ ರೂ., ಸಿಕ್ಕಿದ್ದು ಒಂದು ಕೋಟಿ ರೂ.!
Dense Smog: ಸರಣಿ ಅಪಘಾತ… ಇಬ್ಬರು ಮೃತ್ಯು, ಹಲವು ಮಂದಿಗೆ ಗಾಯ
Actor Siddique: ಅತ್ಯಾಚಾರ ಆರೋಪ; ನಟ ಸಿದ್ದಿಕ್ಗೆ ನಿರೀಕ್ಷಣಾ ಜಾಮೀನು ಮಂಜೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.