ಹಳ್ಳಿಗಳಿಗೆ ಫ್ಲೋರೈಡ್‌ಯುಕ್ತ ನೀರೇ ಗತಿ

ನೀರು ಶುದ್ಧೀಕರಣ ಘಟಕಗಳ ದುರಸ್ತಿಗೆ ನಿರ್ಲಕ್ಷ್ಯ ಮೊಣಕಾಲು ಬೇನೆ, ಕಿಡ್ನಿಯಲ್ಲಿ ಕಲ್ಲಿನ ಸಮಸ್ಯೆ ಉಲ್ಭಣ

Team Udayavani, Mar 21, 2020, 1:03 PM IST

21-March-9

ಮಾನ್ವಿ: ಈಗಾಗಲೇ ಬೇಸಿಗೆ ಪ್ರಾರಂಭವಾಗಿರುವುದರಿಂದ ತಾಲೂಕಿನಾದ್ಯಂತ ಕುಡಿಯುವ ನೀರಿನ ಸಮಸ್ಯೆ ಉಲ್ಭಣಗೊಳ್ಳುತ್ತಿದೆ. ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಳ್ಳದೆ ನಿರ್ಲಕ್ಷಿಸುತ್ತಿದ್ದಾರೆ. ಅನೇಕ ಹಳ್ಳಿಗಳಲ್ಲಿರುವ ಶುದ್ಧೀಕರಣ ಘಟಕಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿಲ್ಲ.

ದುರಸ್ತಿಗೆ ಅಧಿಕಾರಿಗಳು ಕೂಡಲೇ ಸ್ಪಂದಿಸದಿರುವುದು ಗ್ರಾಮೀಣ ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಮೂಲ ಕಾರಣವಾಗಿದೆ. ತಾಲೂಕಿನಲ್ಲಿ 135 ಶುದ್ಧೀಕರಣ ಘಟಕಗಳಿವೆ. ಇದರಲ್ಲಿ 93 ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, 38 ಘಟಕಗಳು ದುರಸ್ತಿಗೊಂಡಿವೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇತ್ತೀಚೆಗೆ ಕೆಆರ್‌ ಡಿಎಲ್‌ನಿಂದ ಗ್ರಾಮೀಣ ಕುಡಿಯುವ ನೀರು ಸರಬರಾಜು ಇಲಾಖೆಗೆ 13 ಶುದ್ಧೀಕರಣ ಘಟಕಗಳನ್ನು ಹಸ್ತಾಂತರಿಸಿಕೊಳ್ಳಲಾಗಿದೆ. ಇಲಾಖೆಯಿಂದ ನಿರ್ಹಹಣೆಗಾಗಿ ಐದು ಜನ ಶಾಖಾ ಅಧಿಕಾರಿಗಳನ್ನು ಸಹ ನೇಮಕ ಮಾಡಲಾಗಿದೆ.

ದುರಸ್ತಿ: 135ರಲ್ಲಿ 38 ಮಾತ್ರ ಕಟ್ಟಿವೆ ಎಂದು ಅಧಿಕಾರಿಗಳು ಹೇಳುತ್ತಾರಾದರೂ, ಸತ್ಯಸಂಗತಿ ಎಂದರೆ ಯಾವುದೇ ಶುದ್ಧೀಕರಣ ಘಟಕಗಳು ನಿರಂತರವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಹದಿನೈದು ದಿನ ಕಾರ್ಯನಿರ್ವಹಿಸಿದರೆ ತಿಂಗಳು ದುರಸ್ತಿಯಾಗುತ್ತವೆ. ಕರಡಿಗುಡ್ಡ ಮತ್ತು ಕಪಗಲ್‌ ಗ್ರಾಮದಲ್ಲಿ ಶುದ್ಧೀಕರಣ ಘಟಕಗಳು ಪ್ರಾರಂಭಿಸಿದ ಮೊದಲ ದಿನವೇ ದುರಸ್ತಿಗೆ ಒಳಪಟ್ಟಿದ್ದು,
ಲ್ಕೈದು ವರ್ಷ ಕಳೆದರೂ ರಿಪೇರಿ ಮಾಡಿಲ್ಲ. ಜಾನೇಕಲ್‌ನಲ್ಲಿನ ಘಟಕ ಪದೆ ಪದೆ ಕೈಕೊಡುತ್ತಲೇ ಇವೆ.

ಕಳಪೆ: ವಿವಿಧ ಏಜೆನ್ಸಿಗಳಿಗೆ ನೀಡಿದ ಶುದ್ಧೀಕರಣ ಘಟಕಗಳು ತುಂಬಾ ಕಳಪೆ ಗುಣಮಟ್ಟ ಮತ್ತು ಕಡಿಮೆ ಸಾಮರ್ಥ್ಯದ ಮಷಿನ್‌ ಗಳನ್ನು ಅಳವಡಿಸಲಾಗಿದೆ ಎಂಬ ಆರೋಪ ಕೇಳಿಬರುತ್ತಿವೆ.

ಶುದ್ಧೀಕರಣ ಯಂತ್ರದಲ್ಲಿ 26 ಬಿಡಿಭಾಗದ ಸಲಕರಣೆಗಳಿರುತ್ತವೆ. ಇವು ಕಳಪೆಯಾಗಿದ್ದು, ನೀರನ್ನು ಸರಿಯಾಗಿ ಶುದ್ಧೀಕರಿಸುವುದಿಲ್ಲ. ಪದೆ ಪದೆ ಯಂತ್ರಗಳು ದುರಸ್ತಿಗೆ ಬರುತ್ತಿವೆ. ಇನ್ನು ಕೆಲವಡೆ ನೀರಿನ ಕೊರತೆ, ನಿರ್ವಹಣೆ ಕೊರತೆಯಿಂದ ಯಂತ್ರಗಳು ಕೆಟ್ಟಿವೆ. ಅಲ್ಲದೆ ಏಜೆನ್ಸಿಗಳು ಕೂಡಲೇ ದುರಸ್ತಿಗೂ ಮುಂದಾಗುವುದಿಲ್ಲ. ಪಟ್ಟಣದಲ್ಲಿ ಅನೇಕ ವಾರ್ಡ್‌ಗಳಲ್ಲಿ ಶುದ್ಧೀಕರಣ ಘಟಕಗಳನ್ನು ಪ್ರಾರಂಭಿಸಿದ್ದರೂ, ಕಳಪೆ ಯಂತ್ರ ಮತ್ತು ನೀರಿನ ಕೊರತೆಯಿಂದ ಸ್ಥಗಿತಗೊಂಡಿವೆ.

ಫ್ಲೋರೈಡ್‌ ಸಮಸ್ಯೆ: ಇನ್ನೂ ಕೆಲ ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಮಿತಿಮೀರಿದೆ. ಫ್ಲೋರೈಡ್‌, ಅರ್ಸೆನಿಕ್‌ ಅಂಶವಿರುವ ನೀರಿನ್ನೇ ಬಳಸುತ್ತಿದ್ದಾರೆ. ಕೆಲವಡೆ ಕೆರೆ, ಬಾವಿ ಮತ್ತು ಕಾಲುವೆ ನೀರನ್ನು ಶುದ್ಧೀಕರಿಸದೆ ಸೇವನೆ ಮಾಡುತ್ತಿರುವುದರಿಂದ ರೋಗಕ್ಕೆ ತುತ್ತಾಗುತ್ತಿದ್ದಾರೆ. ಜಾನೇಕಲ್‌ ಗ್ರಾಮದಲ್ಲಿ ಫ್ಲೋರೈಡ್‌ಯುಕ್ತ ನೀರಿನ ಸೇವನೆಯಿಂದ ಮೊಣಕಾಲು ನೋವು, ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಳ್ಳುತ್ತಿವೆ. ಪೋತ್ನಾಲ್‌, ಕೊಕ್ಲೃಕಲ್‌, ಚಾಗಬಾವಿ, ಬೊಮ್ಮನಾಳ, ಸಂಗಾಪುರ ಕಪಗಲ್‌, ಚೀಕಲಪರ್ವಿ ಗ್ರಾಮಗಳಲ್ಲಿ ಬೇಸಿಗೆಯಲ್ಲಿ ಕುಡಿಯುವ ಶುದ್ಧ ನೀರಿಗೆ ಪರದಾಡುವಂತ ಸ್ಥಿತಿ ನಿರ್ಮಾಣವಾಗುತ್ತದೆ. ಈ ಬಾರಿ ಕೊರೊನಾ ವೈರಸ್‌ ಭೀತಿಯಲ್ಲಿರುವುದರಿಂದ ಸ್ಥಿತಿ ಇನ್ನೂ ಗಂಭೀರ ಎನ್ನವಂತಿದೆ.

ಖಾಸಗಿ ಶುದ್ಧೀಕರಣ ಘಟಕಗಳಿಂದ ಅಧಿಕ ಹಣ ನೀಡಿ ನೀರು ಖರೀದಿ  ಮಾಡಿ ಕುಡಿಯಬೇಕಾಗುತ್ತದೆ. ಇನ್ನಾದರೂ ಅಧಿಕಾರಿಗಳು ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಸಾರ್ವಜನಿಕರಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು ಎಂಬ ಮಾತು ಕೇಳಿಬಂದಿವೆ.

ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದೆ. ತಾಲೂಕಿನಾದ್ಯಂತ 135 ಆರ್‌ಒ ಪ್ಲಾಂಟ್‌ಗಳಿದ್ದು, ಕೇವಲ 38 ದುರಸ್ತಿಯಾಗಿವೆ. ಈಗಾಗಲೇ ಇವುಗಳ ರಿಪೇರಿಗೆ ಸಂಬಂಧಿಸಿದ ಏಜೆನ್ಸಿಗೆ ಸೂಚಿಸಿದ್ದೇನೆ. ಜಂಗಮರಹಳ್ಳಿಯಲ್ಲಿ ಶುದ್ಧೀಕರಣ ದುರಸ್ತಿ ಮಾಡಿಸಲಾಗಿದೆ. ಶಾಖಾಪುರದಲ್ಲಿ ಕೆರೆಗೆ ನೀರು ತುಂಬಿಸಲಾಗಿದೆ. ಹೀಗೆ ಒಂದೊಂದಾಗಿ ದುರಸ್ತಿ ಮಾಡಿಸಲಾಗುತ್ತಿದ್ದು, ಸಮಯಾವಕಾಶ ಬೇಕಿದೆ.
ಶಶಿಕಾಂತ್‌ ವಂದಾಳಿ,
ಗ್ರಾಮೀಣ ನೀರು ಸರಬರಾಜು ಇಲಾಖೆ,
ಮಾನ್ವಿ

ಕಳೆದ 15 ವರ್ಷಗಳಿಂದ ಕುಡಿಯುವ ನೀರಿನ ಸಮಸ್ಯೆ ನಿರ್ಲಕ್ಷಿಸಲಾಗಿತ್ತು. ಆದರೆ ಕಳೆದ ವರ್ಷದಿಂದ ಕುಡಿಯುವ ನೀರಿಗೆ ಆದ್ಯತೆ ನೀಡಲಾಗಿದೆ. ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕಳೆದ ತಿಂಗಳು ಐದು ಬೋರ್‌ವೆಲ್‌ ಕೊರೆಯಿಸಿ, ಟ್ಯಾಂಕ್‌ ನಿರ್ಮಾಣ ಮಾಡಿ ನೀರಿನ ವ್ಯವಸ್ಥೆ ಮಾಡಲಾಗಿದೆ. ಮುಂದೆಯೂ ನೀರಿನ ಸಮಸ್ಯೆ ಇರುವ ವಾರ್ಡ್‌ಗಳಲ್ಲಿ ಬೋರ್‌ ವೆಲ್‌ ಕೊರೆಸಲಾಗುವುದು. ಈ ಬಾರಿ ಬೇಸಿಗೆಯಲ್ಲಿ ನೀರಿನ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಲಾಗಿದೆ.
ರಾಜಾಮಹೇಂದ್ರ ನಾಯಕ,
ಪುರಸಭೆ ಸದಸ್ಯರು.

„ರವಿ ಶರ್ಮಾ

ಟಾಪ್ ನ್ಯೂಸ್

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

Udupi: ಶ್ರೀಕೃಷ್ಣಮಠದಲ್ಲಿ ಇಂದಿನಿಂದ ಸಪ್ತೋತ್ಸವ

CM-Meeting

Review Meeting: ಉನ್ನತ ಶಿಕ್ಷಣಕ್ಕೆ ಬೋಧಕರ ಕೊರತೆ: ಸಿಎಂ ಸಿದ್ದರಾಮಯ್ಯ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ

1-raichur

Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ

Raichuru-Rims

Raichuru: ರಿಮ್ಸ್‌ ಆಸ್ಪತ್ರೆಯಲ್ಲಿ ಮತ್ತೋರ್ವ ಬಾಣಂತಿ ಸಾವು; 3 ತಿಂಗಳಿನಲ್ಲಿ 12 ಮಂದಿ ಬಲಿ

ಮುಂದಿನ ಅವಧಿಗೆ ನಾನೇ ಸಿಎಂ ಅಭ್ಯರ್ಥಿ: ಸತೀಶ್ ಜಾರಕಿಹೊಳಿ

Karnataka Politics: ಮುಂದಿನ ಅವಧಿಗೆ ‘ನಾನೇ ಸಿಎಂ ಅಭ್ಯರ್ಥಿ’: ಸತೀಶ್ ಜಾರಕಿಹೊಳಿ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

Maski ಅಕ್ರಮ‌ ಮರಂ ಸಾಗಾಣಿಕೆ: ಎರಡು ಟಿಪ್ಪರ್ ವಶಕ್ಕೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

ವಿದ್ಯುತ್‌ ದರ ಏರಿಕೆಯ ಸುಳಿವು ನೀಡಿದ ಮೆಸ್ಕಾಂ;ಯೂನಿಟ್‌ಗೆ 0.70 ರೂ. ದರ ಏರಿಕೆ ಪ್ರಸ್ತಾವನೆ

BJP-flag

Election Preperation: ಸ್ಥಳೀಯ ಸಂಸ್ಥೆ ಚುನಾವಣೆ: ಇಂದಿನಿಂದ ಬಿಜೆಪಿ ಸರಣಿ ಸಭೆ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Kambala ಜ. 11: ಉಳ್ಳಾಲ ನರಿಂಗಾನ ಕಂಬಳ್ಳೋತ್ಸವ

Health-insure

Editorial: ಅಪಘಾತ ಚಿಕಿತ್ಸೆ ಯೋಜನೆ ಜನರಿಗೆ ಜೀವದಾನ

BNg-Mureder

Brutal: ಪತ್ನಿ, ಇಬ್ಬರು ಮಕ್ಕಳನ್ನು ಮಚ್ಚಿನಿಂದ ಕೊಚ್ಚಿ ಕೊಂದ ಪತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.