ಮಾಸ್ಕ್ ಕಡ್ಡಾಯ: ಎಸ್ಪಿ ವೇದಮೂರ್ತಿ
Team Udayavani, Jun 29, 2020, 8:52 AM IST
ರಾಯಚೂರು: ಕೋವಿಡ್ ವೈರಸ್ ಹರಡದಂತೆ ಸರ್ಕಾರ ಸಾಕಷ್ಟು ಶ್ರಮಿಸುತ್ತಿದ್ದು, ಸಾರ್ವಜನಿಕರು ಕೂಡ ತಮ್ಮ ಜವಾಬ್ದಾರಿ ಅರಿತು ನಡೆದುಕೊಳ್ಳಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಸಿ.ಬಿ.ವೇದಮೂರ್ತಿ ತಿಳಿಸಿದರು.
ನಗರದ ಡಾ| ಅಂಬೇಡ್ಕರ್ ವೃತ್ತದಲ್ಲಿ ಮಾಸ್ಕ್ ಧರಿಸದ ವಾಹನ ಸವಾರರಿಗೆ ದಂಡ ಹಾಕುವುದರ ಜತೆಗೆ ಮಾಸ್ಕ್ ವಿತರಿಸುವ ಮೂಲಕ ಜಾಗೃತಿ ಮೂಡಿಸಿದರು. ಎಲ್ಲರೂ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಇದರಿಂದ ಸೋಂಕು ಹರಡುವುದನ್ನುತಡೆಯಬಹುದು. ಅದರ ಜತೆಗೆ ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಮತ್ತು ದೈಹಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯ. ಸಾಕಷ್ಟು ವಾಹನ ಸವಾರರು ಮಾಸ್ಕ್ ಹಾಕಿಕೊಳ್ಳದೇ ವಾಹನ ಓಡಿಸುತ್ತಿರುವುದು ಬೇಸರದ ಸಂಗತಿ ಎಂದರು.
ಒಮ್ಮೆ ಮಾಸ್ಕ್ ಧರಿಸದೇ ವಾಹನ ಚಲಾಯಿಸಿದರೆ 200 ರೂ. ದಂಡ ವಿಧಿಸಲಾಗುವುದು. ಪಾದಚಾರಿಗಳೂ ಮಾಸ್ಕ್ ಧರಿಸಬೇಕು. ವ್ಯಾಪಾರ ವಹಿವಾಟು ನಡೆಸುವಾಗ ಗ್ರಾಹಕರು ಮತ್ತು ವರ್ತಕರು ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು ಎಂದರು. ಭಾರತೀಯ ರೆಡ್‌ಕ್ರಾಸ್ ಸಂಸ್ಥೆ ಜಿಲ್ಲಾ ಸಂಚಾಲಕ ದಂಡಪ್ಪ ಬಿರಾದಾರ, ಡಿಎಸ್‌ಪಿ ಶಿವನಗೌಡ ಪಾಟೀಲ ಸೇರಿ ಪೊಲೀಸ್ ಅಧಿಕಾರಿಗಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Karnataka: ಹೊಸ ಸಿಎಂ ನೇತೃತ್ವದಲ್ಲಿ ಬೆಳಗಾವಿ ಅಧಿವೇಶನ: ಸುನಿಲ್
Udupi: ಶತಚಂಡಿಕಾಯಾಗ, ಬ್ರಹ್ಮಮಂಡಲ ಸೇವೆ ಆಮಂತ್ರಣ ಪತ್ರಿಕೆ ಬಿಡುಗಡೆ
Children’s Day: ಶಿಕ್ಷಣವನ್ನು ಪ್ರೋತ್ಸಾಹಿಸಿ ಮೋದಿ ಕನಸಿನ ವಿಕಸಿತ ಭಾರತ ನಿರ್ಮಾಣ ಮಾಡೋಣ
Bantwal: ನಾಪತ್ತೆಯಾದವರ ಮೃತ*ದೇಹ ಉಳ್ಳಾಲ ರೈಲು ಹಳಿಯಲ್ಲಿ ಪತ್ತೆ
Dharmasthala; ಗ್ರಾಮಾಭಿವೃದ್ಧಿ ಯೋಜನೆ ಜನರ ನಾಡಿಮಿಡಿತ: ನಿರ್ಮಲಾ ಸೀತಾರಾಮನ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.