ಕೈ-ಕಮಲ ಮುಖಂಡರ ಮತ ಬೇಟೆ

ರಣಬಿಸಿಲಿಗೆ ಮೈಯೊಡ್ಡಿ ಪ್ರಚಾರಕ್ಕಿಳಿದ ಬಿಜೆಪಿ-ಕಾಂಗ್ರೆಸ್‌­ ! ಪಾಪದ ದುಡ್ಡು ಯಾರೂ ಮುಟ್ಟಬಾರದು: ಭೋಸರಾಜು

Team Udayavani, Mar 27, 2021, 9:01 PM IST

xdfsaq

ಮಸ್ಕಿ: ಚುನಾವಣೆಯಲ್ಲಿ ಮತದಾರರಿಗೆ ಹಂಚುವ ದುಡ್ಡು ಪಾಪದ ದುಡ್ಡು. ಇದನ್ನು ಯಾರೂ ಮುಟ್ಟಬಾರದು ಎಂದು ವಿಧಾನ ಪರಿಷತ್‌ ಸದಸ್ಯ ಎನ್‌.ಎಸ್‌. ಭೋಸರಾಜು ಹೇಳಿದರು.

ತಾಲೂಕಿನ ತೋರಣದಿನ್ನಿ ಜಿಪಂ ವ್ಯಾಪ್ತಿಯ ಗಾಳಿದುರ್ಗಮ್ಮ ಕ್ಯಾಂಪ್‌ನಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಆರ್‌.ಬಸನಗೌಡ ಪರ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದರು. ಮತದಾರರನ್ನು ಖರೀದಿ ಮಾಡುವುದು ದೊಡ್ಡ ಅಪರಾಧ. ಹಣ ಹಂಚುವ ಮೂಲಕ ಜನರನ್ನು ಖರೀದಿ ಮಾಡುತ್ತೇವೆ ಎನ್ನುವುದು ಮೂರ್ಖತನ. ಆದರೆ ಈ ಚುನಾವಣೆಯಲ್ಲಿ ಹಂಚುವ ಹಣ ಅದು ಪಾಪದ ಹಣ. ಬಿಜೆಪಿಯೇ ಆಗಲಿ, ಕಾಂಗ್ರೆಸ್‌ ಮತ್ತು ಜೆಡಿಎಸ್‌ ಪಕ್ಷಗಳೇ ಆಗಲಿ ಯಾವ ಪಕ್ಷ ಹಂಚಿದರೂ ಅದು ಪಾಪದ ರೊಕ್ಕ. ಜನ ಇದನ್ನು ಗುಡಿ-ಗುಂಡಾರಕ್ಕೂ ಮತ್ತೂಂದು ಒಳ್ಳೆಯ ಕಾರ್ಯಕ್ಕೋ ಬಳಸಬೇಕು. ಯಾರು ಎಷ್ಟು ದೊಡ್ಡ ಕೊಟ್ಟರೂ ಅದನ್ನು ಪಡೆದು ಒಳ್ಳೆಯ ವ್ಯಕ್ತಿಗಳಿಗೆ ಮಾತ್ರ ಮತ ಹಾಕಬೇಕು. ಅದರಲ್ಲೂ ಈ ಬಾರಿ ಉಪಚುನಾವಣೆಯಲ್ಲಿ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಕೋಟಿಗಟ್ಟಲೇ ಹಣ ಖರ್ಚು ಮಾಡುತ್ತಾರೆ. ಅವರ ಹಣದ ಅಹಂಕಾರಕ್ಕೆ ಬುದ್ಧಿ ಕಲಿಸಬೇಕು. ಬಸನಗೌಡ ತುರುವಿಹಾಳ ಅವರಿಗೆ ವೋಟ್‌ ಹಾಕಬೇಕು ಎಂದು ಮನವಿ ಮಾಡಿದರು.

ಸಂಸದ ಆರ್‌.ದೃವನಾರಾಯಣ ಮಾತನಾಡಿ, ಬಿಜೆಪಿ ಯಾವತ್ತೂ ಸ್ವಂತ ಬಲದ ಮೇಲೆ ಅ ಧಿಕಾರಕ್ಕೆ ಬಂದಿಲ್ಲ. ವಾಮ ಮಾರ್ಗದಿಂದ ಅ ಧಿಕಾರಕ್ಕೆ ಬಂದರೂ ಅವರಿಗೆ ಆಡಳಿತ ನಡೆಸಲು ಬರುವುದಿಲ್ಲ. 2008ರ ಅವಧಿ ಯಲ್ಲೂ ಹೀಗೆ ಹಲವು ಶಾಸಕರು ಭ್ರಷ್ಟಾಚಾರ, ಸೆಕ್ಸ್‌ ಹಗರಣದಲ್ಲಿ ಸಿಲುಕಿ ತಮ್ಮ ಸಂಸ್ಕೃತಿ ಹೊರ ಹಾಕಿದ್ದರು. ಈಗಲೂ ಅದೇ ನಡೆದಿದೆ ಎಂದು ಲೇವಡಿ ಮಾಡಿದರು. ಅಭ್ಯರ್ಥಿ ಆರ್‌.ಬಸನಗೌಡ ತುರುವಿಹಾಳ ಮಾತನಾಡಿ, ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್‌ ಹಿಂದೆ 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಕಳ್ಳತನದ ವೋಟ್‌ಗಳ ಮೂಲಕ ಗೆದ್ದಿದ್ದರು. ಅವರು ಸಕ್ರಮವಾಗಿ ಚುನಾವಣೆ ಮಾಡಿಲ್ಲ. ಹೀಗಾಗಿ ಈ ಬಾರಿ ಮತ್ತೆ ಅವರಿಗೆ ಬುದ್ಧಿ ಕಲಿಸುವ ದಿನ ಬಹುಬೇಗ ಹತ್ತಿರ ಬಂದಿದೆ. 365 ದಿನವೂ ನಿಮ್ಮ ಸೇವೆಯಲ್ಲಿ ಇರುತ್ತೇನೆ ಎಂದು ಹೇಳಿದರು.

ಶಾಸಕ ಬಸನಗೌಡ ದದ್ದಲ, ಮಾಜಿ ಶಾಸಕ ಹಂಪಯ್ಯ ನಾಯಕ, ಕಾಂಗ್ರೆಸ್‌ ಮುಖಂಡ ಕೆ.ಕರಿಯಪ್ಪ, ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಪಾಟೀಲ್‌, ಕಿರಲಿಗಂಪ್ಪ ಸೇರಿ ಇತರರು ಇದ್ದರು. ಕುರುಕುಂದಿ-ತಿಡಿಗೋಳದಲ್ಲಿ ಬಿಜೆಪಿ ಪ್ರಚಾರ ಸಿಂಧನೂರು: ತುಂಗಭದ್ರಾ ಜಲಾಶಯದ ಕಾಲುವೆಗಳ ಆಧುನೀಕರಣ ಕೆಲಸಗಳನ್ನು ಕೈಗೆತ್ತಿಕೊಂಡು ಪೂರ್ಣಗೊಳಿಸಿದ ಕೀರ್ತಿ ಬಿ.ಎಸ್‌. ಯಡಿಯೂರಪ್ಪ ಸರಕಾರಕ್ಕೆ ಸಲ್ಲುತ್ತದೆ. ನೀರಾವರಿ ವಿಷಯದಲ್ಲಿ ಹೆಚ್ಚಿನ ಸೌಲಭ್ಯವನ್ನು ಪಡೆದುಕೊಳ್ಳುವುದಕ್ಕಾಗಿ ಬಿಜೆಪಿ ಅಭ್ಯರ್ಥಿ ಪ್ರತಾಪ್‌ಗೌಡ ಪಾಟೀಲ್‌ ಅವರನ್ನು ಗೆಲ್ಲಿಸಬೇಕು ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

ತಾಲೂಕಿನ ಕುರುಕುಂದಾ ಗ್ರಾಮದಲ್ಲಿ ಮಸ್ಕಿ ಉಪಚುನಾವಣೆ ನಿಮಿತ್ತ ಶುಕ್ರವಾರ ಹಮ್ಮಿಕೊಂಡಿದ್ದ ಬಿಜೆಪಿ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು. ಮಾತುಕೊಟ್ಟರೆ ತಪ್ಪದ ನಾಯಕ ಯಾರಾದರೂ ಇದ್ದರೆ, ಅದು ಬಿಎಸ್‌ವೈ ಮಾತ್ರ. ಅವರು ಈ ಭಾಗದ ನೀರಾವರಿ ಸೌಲಭ್ಯಕ್ಕೆ ಹೆಚ್ಚಿನ ಅನುದಾನ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲಿ 2ನೇ ಬೆಳೆಗೆ ನೀರು ತಪ್ಪುವ ಭೀತಿ ಹೋಗಲಾಡಿಸಲು ನವಲಿ ಬಳಿ ಸಮನಾಂತರ ಜಲಾಶಯ ನಿರ್ಮಾಣಕ್ಕೆ ಒತ್ತು ನೀಡಲಾಗುವುದು. ಪ್ರತಾಪಗೌಡರನ್ನು ಗೆಲ್ಲಿಸಿದರೆ, ಅವರು ಮಂತ್ರಿಯಾಗುತ್ತಾರೆ. ಆಗ ನಾವೆಲ್ಲ ಸೇರಿ ಸರಕಾರದ ಮೇಲೆ ಒತ್ತಡ ತಂದು ನವಲಿ ಜಲಾಶಯದ ಕೆಲಸವನ್ನು ಮಾಡಿಸಿಕೊಳ್ಳಲು ಅನುಕೂಲವಾಗುತ್ತದೆ. ಬೇರೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿದರೆ, ಯಾವುದೇ ಪ್ರಯೋಜನವಿಲ್ಲ ಎಂದರು.

ವಿರೋಧಿ ಗಳ ಆರೋಪದಲ್ಲಿ ಹುರುಳಿಲ್ಲ:

ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್‌ ಮಾತನಾಡಿ, ಹಣಕ್ಕಾಗಿ ಬಿಜೆಪಿಗೆ ಹೋಗಿದ್ದಾರೆಂಬ ನಮ್ಮ ವಿರೋ ಧಿಗಳ ಆರೋಪದಲ್ಲಿ ಯಾವುದೇ ಹುರುಳಿಲ್ಲ. ಹಿಂದಿನ ಚುನಾವಣೆಯಲ್ಲಿ ನಮ್ಮ ಪ್ರತಿಸ್ಪ  ರ್ಧಿಗೆ 60 ಸಾವಿರ ಮತ ಬಿದ್ದಾಗ ನಮಗೂ ಅಚ್ಚರಿಯಾಗಿತ್ತು. ಅದು ಅವರ ಮೇಲಿನ ಅಭಿಮಾನದ ಮತಗಳಲ್ಲ. ಬದಲಿಗೆ ರಾಜ್ಯದಲ್ಲಿ, ರಾಷ್ಟ್ರದಲ್ಲಿ ಬಿಜೆಪಿಯನ್ನು ಅಧಿ  ಕಾರಕ್ಕೆ ತರಬೇಕೆಂಬ ಮತಗಳಾಗಿದ್ದವು. ಜನರ ನಾಡಿಮಿಡಿತವನ್ನು ಅರಿತು ಬಿ.ಎಸ್‌. ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿಯನ್ನಾಗಿ ಮಾಡಬೇಕೆಂಬ ಏಕೈಕ ಉದ್ದೇಶದಿಂದ ಬಿಜೆಪಿ ಸೇರಬೇಕಾಯಿತು. ಕಾಂಗ್ರೆಸ್‌ ಗೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ ಋಣಕ್ಕಾಗಿ ಸಿಎಂ, ಕಳೆದ ಒಂದೂವರೆ ವರ್ಷದಲ್ಲೇ ಕ್ಷೇತ್ರಕ್ಕೆ ಸಿಎಂ 1200 ಕೋಟಿ ರೂ. ಅನುದಾನ ಕೊಟ್ಟಿದ್ದಾರೆ. ಮುಂದಿನ ದಿನಗಳಲ್ಲೂ ಹೆಚ್ಚಿನ ಅಭಿವೃದ್ಧಿ ಕೈಗೊಳ್ಳಲು, ಬಿಎಸ್‌ವೈ ಶಕ್ತಿಯನ್ನು ಬಲಪಡಿಸಲು ಬಿಜೆಪಿಗೆ ಮತ ಹಾಕಬೇಕು ಎಂದು ಮನವಿ ಮಾಡಿದರು.

ಕೃಷಿ ಬೆಲೆ ಆಯೋಗದ ಅಧ್ಯಕ್ಷ ಹನುಮನಗೌಡ ಬೆಳಗುರ್ಕಿ, ಜಿಪಂ ಸದಸ್ಯ ಅಮರೇಗೌಡ ವಿರೂಪಾಪುರ ಅವರು ಮಾತನಾಡಿ, ಬಿಜೆಪಿ ಅಭ್ಯìಥಿಯನ್ನು ಯಾಕೆ ಗೆಲ್ಲಿಸಬೇಕು. ಅವರು ಗೆದ್ದರೆ ಕ್ಷೇತ್ರಕ್ಕೆ ಆಗುವ ಅನುಕೂಲಗಳನ್ನು ವಿವರಿಸಿದರು. ಜಿಪಂ ಅಧ್ಯಕ್ಷೆ ಆದಿಮನೆ ವೀರಲಕ್ಷಿŒ, ಜಿಪಂ ಸದಸ್ಯ ಎನ್‌.ಶಿವನಗೌಡ ಗೋರೆಬಾಳ, ಬಸವರಾಜಗೌಡ ಕುರುಕುಂದಿ ಇದ್ದರು. ಅದ್ಧೂರಿ ಮೆರವಣಿಗೆ: ಬಿಜೆಪಿ ಅಭ್ಯರ್ಥಿ ಗ್ರಾಮಕ್ಕೆ ಕಾಲಿಟ್ಟಾಗ ಕುರುಕುಂದಾ, ತಿಡಿಗೋಳ ಸೇರಿದಂತೆ ಈ ಮಾರ್ಗದ ಗ್ರಾಮಗಳಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.

ಟಾಪ್ ನ್ಯೂಸ್

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

58758

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

ಹೊಸಪೇಟೆ: ಸ್ಕ್ಯಾನ್‌ ಮಾಡಿ, ಹಂಪಿ ಕಂಬಗಳ ಸಪ್ತ ಸ್ವರ ಕೇಳಿ

6-uv-fusion

Opportunities: ಅವಕಾಶಗಳನ್ನು ಸೃಷ್ಟಿಸಿಕೊಳ್ಳುವ ಚತುರತೆ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ

Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

The day will come when our team member will become CM: Yatnal

Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್

ಯಡಿಯೂರಪ್ಪ

Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್‌ ಯಡಿಯೂರಪ್ಪ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ

10-uv-fusion

Nature: ಪ್ರಕೃತಿ ಮಡಿಲಲ್ಲಿ ಒಂದು ಕ್ಷಣ

9-uv-fusion

Grandfather: ಬಡ ತಾತನ ಹೃದಯ ಶ್ರೀಮಂತಿಕೆ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.