Maski ವಾಹನ ಸವಾರರು ಹೈರಾಣು; ರಸ್ತೆಗಳಿಗೆ ಡಾಂಬರೀಕರಣ ಮಾಡುವಂತೆ ಒತ್ತಾಯ
ಹದೆಗೆಟ್ಟ ಗ್ರಾಮೀಣ ರಸ್ತೆಗಳು: ಸಂಚಾರಕ್ಕೆ ದುಸ್ತರ
Team Udayavani, Jul 4, 2024, 6:34 PM IST
ಮಸ್ಕಿ: ಸಮೀಪದ ಮಾರಲದಿನ್ನಿ, ಅಡವಿಭಾವಿ, ಅಂಕುಶದೊಡ್ಡಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಬಹುತೇಕ ರಸ್ತೆಗಳು ಗುಂಡಿಮಯವಾಗಿದ್ದು ವಾಹನ ಚಾಲಕರು, ಗ್ರಾಮೀಣ ಜನರು ಸಮಸ್ಯೆ ಎದುರಿಸುವಂತಾಗಿದೆ.
ಹದಗೆಟ್ಟ ರಸ್ತೆಯಲ್ಲಿ ಪ್ರತಿನಿತ್ಯ ಸಂಚರಿಸುವುದೇ ಸವಾಲಾಗಿ ಪರಿಣಮಿಸಿದೆ. ರಸ್ತೆಯುದ್ದಕ್ಕೂ ಗುಂಡಿಗಳದ್ದೇ ದರ್ಬಾರು ಇದ್ದು, ಮಾರಲದಿನ್ನಿ ಗ್ರಾಪಂ ವ್ಯಾಪ್ತಿಯ ಮಾರಲದಿನ್ನಿ ತಾಂಡಾ, ಮಾರಲದಿನ್ನಿ, ಉಸ್ಕಿಹಾಳ, ಅಡವಿಭಾವಿ ಗ್ರಾಪಂ ವ್ಯಾಪ್ತಿಯ ಬೆನಕನಾಳ, ಬೆಲ್ಲದಮರಡಿ, ಅಡವಿಭಾವಿ ತಾಂಡಾ, ತೀರ್ಥಭಾವಿ ಹಾಗೂ ಅಂಕುಶದೊಡ್ಡಿ ಗ್ರಾಪಂ ವ್ಯಾಪ್ತಿಯ ಕಾಟಗಲ್ಲ, ಮುದಬಾಳ ಸೇರಿದಂತೆ ವಿವಿಧ ಗ್ರಾಮಗಳಿಗೆ ಸಂಪರ್ಕಿಸುವ ಬಹುತೇಕ ರಸ್ತೆಗಳು ಗುಂಡಿಮಯವಾಗಿವೆ.
ಇವೆಲ್ಲ ಗ್ರಾಮೀಣ ರಸ್ತೆಗಳಾದರೂ ವಾಹನಗಳ ಸಂಚಾರ ಸಾಕಷ್ಟು ಇದೆ. ಆಟೋಗಳು, ಖಾಸಗಿ ವಾಹನಗಳು, ವಿವಿಧ ಶಾಲಾ ವಾಹನಗಳು, ಖಾಸಗಿ ಬಸ್‌ಗಳು, ಸರ್ಕಾರಿ ಬಸ್ಸುಗಳು ಈ ರಸ್ತೆಯುದ್ದಕ್ಕೂ ಸಂಚರಿಸುತ್ತವೆ. ಈ ಭಾಗದ ರಸ್ತೆಗಳು ಒಂದು ವರ್ಷದ ಹಿಂದೆ ಚೆನ್ನಾಗಿದ್ದವು. ಮಸ್ಕಿ ನಾಲಾ ಯೋಜನೆ ಕಾಲುವೆ ಆಧುನೀಕರಣ ಕಾಮಗಾರಿ ಮಾಡುವಾಗ ಲಾರಿ, ಟಿಪ್ಪರ್‌ಗಳಂತಂಹ ದೊಡ್ಡ ದೊಡ್ಡ ವಾಹನಗಳು ಮರಳು, ಸಿಮೆಂಟ್, ಕಬ್ಬಿಣದ ಸರಳು ಹಾಗೂ ಇನ್ನಿತರ ವಸ್ತುಗಳನ್ನು ತುಂಬಿಕೊಂಡು ಈ ರಸ್ತೆ ಮುಖೇನ ಸಂಚರಿಸಿರುವುದರಿಂದ ರಸ್ತೆಗಳ ಡಾಂಬರು ಸಂಪೂರ್ಣ ಕಿತ್ತುಹೋಗಿದ್ದು, ಹಾಗೂ ಬೆಲ್ಲದಮರಡಿ, ಬೆನಕನಾಳ ಗುಡ್ಡದ ಭಾಗಗಳಲ್ಲಿ ಅಕ್ರಮವಾಗಿ ಮರಂ ಸಾಗಾಣಿಕೆ ಮಾಡುವ ಟಿಪ್ಪರ್, ಟ್ರ್ಯಾಕ್ಟರ್ ವೇಗವಾಗಿ ಓಡಾಡುತ್ತಿದ್ದು, ಇದರಿಂದ ರಸ್ತೆ ತುಂಬೆಲ್ಲ ಗುಂಡಿಗಳು ಬಿದ್ದಿವೆ.
ವಾಹನ ಸವಾರರು ಕೈಯಲ್ಲಿ ಜೀವ ಹಿಡಿದುಕೊಂಡು ಓಡಾಡುವಂತಾಗಿದೆ. ಬೈಕ್ ಸವಾರರು ವೇಗವಾಗಿ ಚಲಿಸಿ ಕೆಲವೊಮ್ಮೆ ಗುಂಡಿಗಳಿಗೆ ಬಿದ್ದು ಗಾಯಗೊಂಡಿರುವ ನಿದರ್ಶನಗಳಿವೆ. ಜನಪ್ರತಿನಿಧಿಗಳು ಈ ಭಾಗದ ರಸ್ತೆಗಳ ಮೂಲಕ ಓಡಾಡಿ ಜನರ ಸಮಸ್ಯೆ ಅರಿತುಕೊಳ್ಳಬೇಕು ಹಾಗೂ ಹದಗೆಟ್ಟಿರುವ ಗ್ರಾಮೀಣ ಭಾಗದ ರಸ್ತೆಗಳಿಗೆ ಡಾಂಬರೀಕರಣ ಮಾಡುವ ಮೂಲಕ ವಾಹನ ಸವಾರರಿಗೆ ಸುಗಮ ಸಂಚಾರಕ್ಕೆ ಅನುಕೂಲ ಕಲ್ಪಿಸಬೇಕೆಂದು ಸಾರ್ವಜನಿಕರು ಶಾಸಕರಿಗೆ ಪತ್ರಿಕೆ ಮೂಲಕ ಮನವಿ ಮಾಡಿದ್ದಾರೆ.
ಗ್ರಾಮೀಣ ಭಾಗದ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು, ರಸ್ತೆಯುದ್ದಕ್ಕೂ ಅಲ್ಲಲ್ಲಿ ಗುಂಡಿಗಳು ಬಿದ್ದಿದ್ದರಿಂದ ವಾಹನ ಸವಾರರು ಸುಗಮವಾಗಿ ಓಡಾಡಲು ಕಿರಿಕಿರಿ ಉಂಟಾಗಿದೆ. ಕೆಲವೊಮ್ಮೆ ರಾತ್ರಿ ಸಮಯದಲ್ಲಿ ಬೈಕ್ ಮೇಲೆ ಬರುವಾಗ ಗುಂಡಿ ಬಿದ್ದಿದ್ದು, ಕೈ ಕಾಲುಗಳಿಗೆ ಗಾಯಗಳಾಗಿವೆ. ಶಾಸಕರು ಇತ್ತ ಗಮನ ಹರಿಸಿ ಹದಗೆಟ್ಟಿರುವ ರಸ್ತೆಗಳಿಗೆ ಡಾಂಬರೀಕರಣ ಮಾಡಬೇಕು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಅಂಬಲಪಾಡಿ ಜಂಕ್ಷನ್ ಬಳಿ ಬೃಹತ್ ಹೊಂಡಕ್ಕೆ ಬಿದ್ದ ಕಾರು
watermelon:ಕಲ್ಲಂಗಡಿ ಬೆಳೆ ಯಾವಾಗ ಉತ್ತಮ ಇಳುವರಿ ಕೊಡುತ್ತೆ…ಕೃಷಿ ವಿಜ್ಞಾನಿಗಳ ಸಲಹೆ ಏನು?
Bidar; ಗುತ್ತಿಗೆದಾರ ಆತ್ಮಹತ್ಯೆ ಕೇಸ್; ಕರ್ತವ್ಯ ನಿರ್ಲಕ್ಷ್ಯ ತೋರಿದ 2 ಪೇದೆಗಳ ಅಮಾನತು
Tv Actor: ಗೆಳತಿಗೆ ಲೈಂಗಿಕ ಕಿರುಕುಳ ನೀಡಿ ಕೊಲೆ ಬೆದರಿಕೆ; ಖ್ಯಾತ ಕಿರುತೆರೆ ನಟ ಅರೆಸ್ಟ್
Gangavathi: ಕ್ಲಿಫ್ ಜಂಪಿಂಗ್ ಜಲ ಸಾಹಸ ಕ್ರೀಡೆ ಅಸುರಕ್ಷಿತ..! ಅಪಾಯಕಾರಿ ಸಾಹಸ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.