ಸಾಮೂಹಿಕ ವಿವಾಹ ಬಡವರಿಗೆ ವರ
Team Udayavani, Mar 23, 2018, 5:25 PM IST
ಸಿರವಾರ: ಸಮಾಜದಲ್ಲಿ ಇತ್ತೀಚೆಗೆ ಮಠಮಾನ್ಯಗಳು, ಸಂಘ-ಸಂಸ್ಥೆಗಳಿಂದ ಸಾಮೂಹಿಕ ವಿವಾಹ ಆಯೋಜನೆ ಹೆಚ್ಚುತ್ತಿದ್ದು, ಇದು ಉತ್ತಮ ಕೆಲಸವಾಗಿದೆ. ಆರ್.ಕೆ. ಕಮಲಮ್ಮ ಬಸಣ್ಣ ಕುಟುಂಬ ಸಾಮೂಹಿಕ ವಿವಾಹ ಆಯೋಜಿಸಿ ಸಮಾಜ ಸೇವೆ ಮಾಡಿದ್ದು ಶ್ರೇಷ್ಠ ಕಾರ್ಯ ಎಂದು ನವಲಕಲ್ಲು ಬೃಹನ್ಮಠದ ಅಭಿನವ ಸೋಮನಾಥ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ಪಟ್ಟಣದ ಆರ್.ಕೆ. ಕಮಲ್ಲಮ್ಮ ಬಸಣ್ಣ ಕುಟುಂಬದ ವತಿಯಿಂದ ವೆಂಕಟೇಶ್ವರ ದೇವಸ್ಥಾನದಲ್ಲಿ ಗುರುವಾರ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು. ಸಾಮೂಹಿಕ ವಿವಾಹಗಳು ಬಡ ಕುಟುಂಬಗಳಿಗೆ ವರವಾಗಿವೆ.. ಬಡವರು ಸಾಲದ ಹೊರೆಯಿಂದ ಪಾರಾಗುವಂತಾಗಿದೆ. ಮಹಾತ್ಮರ ಆಶೀರ್ವಾದದಿಂದ ಸಾಮೂಹಿಕ ವಿವಾಹದಲ್ಲಿ ಮದುವೆಯಾದ ಅನೇಕ ಜೋಡಿಗಳು ಸುಖ ಸಂಸಾರ ನಡೆಸುತ್ತಿವೆ ಎಂದರು.
ಮಾನ್ವಿ ಕಲ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಮಠ ಮಾನ್ಯಗಳಂತೆ ಆರ್.ಕೆ.ಕಮಲಮ್ಮ ಬಸಣ್ಣ ಕುಟುಂಬ ಕಳೆದ ಮೂರು ವರ್ಷಗಳಿಂದ ಸಾಮೂಹಿಕ ವಿವಾಹ ನಡೆಸುತ್ತಿರುವುದು ಶ್ಲಾಘನೀಯ ಎಂದ ಅವರು, ನವದಂಪತಿಗಳು ಅನ್ಯೋನ್ಯದಿಂದ ಸುಖ ಸಂಸಾರ ನಡೆಸಬೇಕು ಎಂದು ಸಲಹೆ ನೀಡಿದರು. ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ 26 ಜೋಡಿ ನವಜೀವನಕ್ಕೆ ಕಾಲಿಟ್ಟರು. ನೀಲಗಲ್ಲು ಬೃಹನ್ಮಠದ ಪಂಚಾಕ್ಷರಿ ಶಿವಾಚಾರ್ಯ ಸ್ವಾಮೀಜಿ, ಗಬ್ಬೂರಿನ ಬೂದಿ ಬಸವೇಶ್ವರ ಶಿವಾಚಾರ್ಯ ಸ್ವಾಮೀಜಿ, ಆರ್.ಕೆ. ಕಮಲ್ಲಮ್ಮ, ಆರ್.ಕೆ. ಅಮರೇಶ ಸಾಹುಕಾರ, ಎನ್. ಗಿರಿಜಾಶಂಕರ, ಅರ್.ಕೆ. ಚನ್ನಬಸವ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ
Raichur: ಕುದುರೆಗೆ ಮೈ ತೊಳೆಸಲು ಹೋದ ಯುವಕ ಕೆರೆಪಾಲು
Raichur: ಹುಲಿಯಂತಿದ್ದ ಸಿಎಂ ಇಲಿಯಾಗಿದ್ದಾರೆ: ರಮೇಶ್ ಜಾರಕಿಹೊಳಿ
Raichuru: ಆರ್‌ಟಿಪಿಎಸ್ ಬೂದಿ ಹೊಂಡದ ನೀರು ಕೃಷ್ಣಾ ನದಿಗೆ; ಜನರಲ್ಲಿ ಆತಂಕ
Dhananjay: ಸಿಕ್ಕ ಸಿಕ್ಕಲೆಲ್ಲ ಕೇಳ್ತಿದ್ರಲ್ಲ; ಅದಕ್ಕೆ ಅನೌನ್ಸ್ ಮಾಡಿದೆ: ಡಾಲಿ
MUST WATCH
ಹೊಸ ಸೇರ್ಪಡೆ
Bengaluru: ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿಯ ಜೀವ ಉಳಿಸಿದ ಸಂಚಾರ ಪೊಲೀಸರು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
BBK11: ಅಸಲಿ ಆಟ ಶುರು ಮಾಡಿದ ಧನರಾಜ್: ಮೋಕ್ಷಿತಾಳಿಗೆ ಅಹಂಕಾರ ಇದೆ ಎಂದ ಸೈಲೆಂಟ್ ಕಿಲಾಡಿ
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.