ಭೂಮಿ ಹಕ್ಕುಪತ್ರಕ್ಕಾಗಿ ಅಣಕು ಶವಯಾತ್ರೆ
Team Udayavani, Aug 22, 2017, 4:34 PM IST
ರಾಯಚೂರು: ಭೂವಂಚಿತರಿಗೆ ಭೂಮಿ ಮತ್ತು ನಿವೇಶನಗಳ ಹಕ್ಕುಪತ್ರ ವಿತರಿಸುವಲ್ಲಿ ಅನಗತ್ಯ ವಿಳಂಬ ಮಾಡುತ್ತಿರುವ ಜಿಲ್ಲಾಡಳಿತದ ನಿಷ್ಕ್ರೀಯತೆ ಖಂಡಿಸಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಸದಸ್ಯರು ಸೋಮವಾರ ಅಣಕು ಶವಯಾತ್ರೆ ನಡೆಸುವ ಮೂಲಕ ಬೃಹತ್ ಪ್ರತಿಭಟನೆ ನಡೆಸಿದರು. ನಗರದ ಅಂಬೇಡ್ಕರ್ ವೃತ್ತದಿಂದ ಪ್ರತಿಭಟನಾ ರ್ಯಾಲಿ ನಡೆಸಿದ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು
ಸಮಾವೇಶಗೊಂಡು ಭೂ ನ್ಯಾಯ ಮಂಡಳಿ, ಭೂ ಮಂಜೂರಾತಿ ಸಮಿತಿಗಳ ಪ್ರತಿಕೃತಿ ದಹಿಸಿ ಆಕ್ರೋಶ
ವ್ಯಕ್ತಪಡಿಸಿದರು. ಜಿಲ್ಲೆಯಲ್ಲಿ ಭೂಹೀನ ದಲಿತ, ಹಿಂದುಳಿದ ಹಾಗೂ ಇತರ ಸಮುದಾಯದ ಸಹಸ್ರಾರು ಜನ ಸರ್ಕಾರಿ ಜಮೀನು, ಇನಾಂ ಭೂಮಿ, ಗೈರಾಣಿ, ಗ್ರಾಮಠಾಣಾ ಹಾಗೂ ಖಾರೀಜ ಖಾತಾ, ಅರಣ್ಯ ಗೋಮಾಳದ ಹೆಸರಿನಲ್ಲಿ ವಾಸವಾಗಿದ್ದು, ಅಲ್ಲೇ ಕೃಷಿ ಮಾಡಿಕೊಂಡು ಜೀವನ ದೂಡುತ್ತಿದ್ದಾರೆ. ಭೂಮಿ ಪಟ್ಟಾ ಹಾಗೂ ನಿವೇಶನಗಳ ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿ ದಶಕಗಳೇ ಕಳೆದರೂ ಸರ್ಕಾರ ಈವರೆಗೆ ಕಣ್ತೆರೆದಿಲ್ಲ. ಪ್ರತಿ ಬಾರಿ ಬೇಡಿಕೆ ಸಲ್ಲಿಸಿದಾಗಲೆಲ್ಲ ಕಣ್ಣೊರೆಸುವ ತಂತ್ರ ಅನುಸರಿಸುತ್ತಿದೆ ಎಂದು ದೂರಿದರು. ಇನಾಂ ರದ್ದತಿ ಕಾಯ್ದೆಯನ್ವಯ ಇನಾಂ ರದ್ದು ಮಾಡಿ ಉಳುಮೆ ಮಾಡುತ್ತಿರುವ ಭೂ ಹೀನ ರೈತರಿಗೇ ಆ ಭೂಮಿ ಹಂಚಿಕೆ ಮಾಡಬೇಕು. ಜಾರಿಯಾಗದ ಭೂ ನ್ಯಾಯಮಂಡಳಿ ಆದೇಶಗಳನ್ನು ಕೂಡಲೇ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು. 2009ರ ನೆರೆ ಸಂತ್ರಸ್ತರಿಗೆ ಪರ್ಯಾಯವಾಗಿ ತಕ್ಷಣ ವಸತಿ ಮತ್ತು ಮೂಲ ಸೌಕರ್ಯಗಳ ಸಮಸ್ಯೆ ಇತ್ಯರ್ಥಗೊಳಿಸಲು ಕ್ರಮ ಕೈಗೊಳ್ಳಬೇಕು. ಸರ್ಕಾರಿ, ಗೈರಾಣಿ, ಪೋರಂಪೋಕು, ಖಾರೀಜ್ ಖಾತಾ ಭೂಮಿಯಲ್ಲಿರುವ ರೈತರಿಗೆ ಪಟ್ಟಾ ಬಿಡಬೇಕು. ಉಳುಮೆ ಮಾಡುತ್ತಿರುವ ಭೂಮಿಗೆ ಹಕ್ಕುಪತ್ರ ನೀಡಬೇಕು ಹಾಗೂ ಸರ್ಕಾರಿ ಹಾಗೂ ಇನ್ನಿತರ ಸ್ಥಳದಲ್ಲೇ ನಗರ ಪ್ರದೇಶಗಳನ್ನು ಒಳಗೊಂಡಂತೆ ವಾಸಿಸುವವರ ಸ್ಥಳಗಳಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿದರು. ಈ ಎಲ್ಲ ಬೇಡಿಕೆಗಳನ್ನು ನಿಗದಿತ ಮಿತಿಯೊಳಗೆ ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳಬೇಕು. ಈಗಾಗಲೇ ಭೂಮಿಯಲ್ಲಿ ಉಳುಮೆ ಮಾಡುತ್ತಿರುವವರನ್ನು ಅಥವಾ ವಾಸಿಸುವವರನ್ನು ಒಕ್ಕಲೆಬ್ಬಿಸಬಾರದು ಎಂದು ಒತ್ತಾಯಿಸಿದರು. ಸಮಿತಿ ಸದಸ್ಯರಾದ ಕುಮಾರ ಸಮತಳ, ಕೆ.ನಾಗಲಿಂಗಸ್ವಾಮಿ, ಖಾಜಾ ಅಸ್ಲಂ ಅಹ್ಮದ್, ಗುರುರಾಜ, ಜಾನ್ ವೆಸ್ಲೆ, ರೇಣುಕಾ, ಎಂ. ಆಂಜನೇಯ, ದೇವಪುತ್ರ, ಚಿನ್ನಮ್ಮ, ರಂಗಾರೆಡ್ಡಿ, ಅಜೀಜ್ ಜಾಹಗೀರದಾರ, ಹನುಮಂತ ಗುಂಜಳ್ಳಿ ಸೇರಿ ನೂರಾರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chhattisgarh: ಪತ್ರಕರ್ತ ಮುಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ
Leopard: ವಿಜಯಪುರ ನಗರದಲ್ಲಿ ಕಾಣಿಸಿಕೊಂಡ ಚಿರತೆ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
Honnavara: ಲಾರಿ ಪಲ್ಟಿಯಾಗಿ ಇಬ್ಬರು ಸಾವು; ಮೂವರಿಗೆ ಗಾಯ
ಅಪ್ಪನನ್ನೇ ಬದಲಿಸಿದ ಅತಿಶಿ: ಪ್ರಿಯಾಂಕಾ ಬೆನ್ನಲ್ಲೇ ವಿವಾದಾತ್ಮಕ ಹೇಳಿಕೆ ನೀಡಿದ ಬಿಧುರಿ
India Cricket: ಸೀಮಿತ ಓವರ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಸ್ಟಾರ್ ಆಲ್ ರೌಂಡರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.