ಕತ್ತೆ -ಕುದುರೆ ವ್ಯತ್ಯಾಸ ಗೊತ್ತಾಗಬಾರ್ದಾ ?

ಕೃಷಿ ಇಲಾಖೆ ಅಧಿಕಾರಿಗೆ ಶಾಸಕ ನಾಡಗೌಡ ಪ್ರಶ್ನೆ ! ಸಿಂಧನೂರಲ್ಲಿ ತುರ್ತು ಸಭೆ-ಖರೀದಿ ಕೇಂದ್ರದ ಉಗ್ರಾಣಕ್ಕೆ ಭೇಟಿ

Team Udayavani, Feb 10, 2021, 5:21 PM IST

MLA Nadagouda

ಸಿಂಧನೂರು: ತಿಂಗಳ ಹಿಂದೆ ಕೆಡಿಪಿ ಸಭೆಯಲ್ಲೇ ಸೂಚನೆ ನೀಡಿ ರೈತ ಸಂಪರ್ಕ ಕೇಂದ್ರಗಳಲ್ಲಿ ಜೋಳ ಖರೀದಿಗೆ ನೋಂದಣಿ ಮಾಡಿಕೊಳ್ಳಲು ಹೇಳಿದ್ದೆ. ಈಗ ನೋಡಿದ್ರೆ, ಬರೀ ಮಾತಲ್ಲಿ ಹೇಳ್ತೀರಿ. ಡಾಟಾ ಕೊಟ್ರೆ ತಾನೇ ಕತ್ತೆ ಯಾವುದು, ಕುದರೆ ಯಾವದಂತ ಗೊತ್ತಾಗೋದು? ಎಂದು ಶಾಸಕ ವೆಂಕಟರಾವ್‌ ನಾಡಗೌಡ ಅವರು ಕೃಷಿ ಇಲಾಖೆ ಎಡಿಎಗೆ ತರಾಟೆ ತೆಗೆದುಕೊಂಡರು.

ನಗರದ ತಹಶೀಲ್ದಾರ್‌ ಕಚೇರಿಯಲ್ಲಿ ಮಂಗಳವಾರ ತುರ್ತು ಸಭೆ ನಡೆಸಿದ ಅವರು, ಜೋಳ ಖರೀದಿ ಕೇಂದ್ರದ ಕುರಿತು ಪ್ರಗತಿ ಪರಿಶೀಲಿಸಿದರು. ರೈತ ಸಂಪರ್ಕ ಕೇಂದ್ರಗಳಲ್ಲಿ ನೋಂದಣಿ ಸೇರಿದಂತೆ ತಾತ್ಕಲಿಕ ಅನುಮೋದನೆ ಕೇಸ್‌ಗಳಲ್ಲಿ ಒಪ್ಪಿಗೆ ನೀಡುವ ಕೆಲಸವಾಗಬೇಕು. 400ರಿಂದ 500ರಷ್ಟು ಪ್ರಕರಣಗಳು ಈಗ ತಾಂತ್ರಿಕ ಸಮಸ್ಯೆಗೆ ಸಿಲುಕಿದ್ದು, ಗೊತ್ತಾಗಬೇಕಿದೆ. ಇದನ್ನೆಲ್ಲ ಯಾರು ಇತ್ಯರ್ಥಪಡಿಸಬೇಕು. ಪಹಣಿ, ಬೆಳೆ ದಾಖಲಾತಿ ವಿಷಯದಲ್ಲಿ ಅಧಿ ಕಾರಿಗಳು ಮಾಡಿದ ತಪ್ಪಿಗೆ ರೈತರು ಯಾಕೆ ಶಿಕ್ಷೆ ಅನುಭವಿಸಬೇಕು ಎಂದು ಪ್ರಶ್ನಿಸಿದರು.

ಕೃಷಿ ಇಲಾಖೆ ಎಡಿಎ ಪ್ರಶಾಂತ್‌ ಅವರು, ಜೋಳ ಬೆಳೆದ ಪ್ರದೇಶಗಳಲ್ಲಿ ನೋಂದಣಿ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದರು. ಎಷ್ಟು ನೋಂದಣಿಯಾಗಿದೆ ಎಂಬ ಪ್ರಶ್ನೆ ಕೇಳಿದಾಗ ಉತ್ತರಿಸಲು ವಿವರ ಇರಲಿಲ್ಲ. ಇದರಿಂದ ಸಿಟ್ಟಿಗೆದ್ದ ಶಾಸಕರು, ಆಹಾರ ಇಲಾಖೆಯವರು ಈವರೆಗೂ ನೋಂದಣಿ ಮಾಡಿದ್ದಾಗಿ ವಿವರ ಕೊಡುತ್ತಿದ್ದಾರೆ. ನಿಮ್ಮ ಬಳಿ ಲೆಕ್ಕ ಇಲ್ಲ. ಹೀಗಾದರೆ ಹೇಗೆ? ಕತ್ತೆ ಯಾವುದು, ಕುದುರೆ ಯಾವುದು ಎಂಬುದು ಗೊತ್ತಾಬೇಕಲ್ಲ? ಎಂದು ತರಾಟೆಗೆ ತೆಗೆದುಕೊಂಡರು.

ಯಾವುದೇ ರೈತರನ್ನು ತಾಲೂಕು ಕೇಂದ್ರಕ್ಕೆ ಬರದಂತೆ ನೋಡಿಕೊಳ್ಳಬೇಕು. ರೈತ ಸಂಪರ್ಕ ಕೇಂದ್ರಗಳಲ್ಲಿ ನೋಂದಣಿ ಮಾಡಿಸಬೇಕು. ಯಾವೊಬ್ಬ ರೈತರನ್ನು ಕೂಡ ವಾಪಸ್‌ ಕಳಿಸಿದರೆ, ಸಹಿಸುವುದಿಲ್ಲ ಎಂದು ಎಚ್ಚರಿಸಿದರು.

ಖರೀದಿ ಪಾಯಿಂಟ್‌ ಹೆಚ್ಚಳ: ತಾಲೂಕಿನಲ್ಲಿ 2,140 ರೈತರಿಂದ 1 ಲಕ್ಷ 19 ಸಾವಿರ ಕ್ವಿಂಟಲ್‌ ಜೋಳ ಮಾರಾಟಕ್ಕೆ ನೋಂದಣಿಯಾಗಿದೆ. ಇದುವರೆಗೆ 98 ರೈತರಿಂದ 4,601 ಕ್ವಿಂಟಲ್‌ ಮಾತ್ರ ಖರೀದಿಸಲಾಗಿದೆ. ಕೂಡಲೇ ಖರೀದಿಗೆ ಇನ್ನು ನಾಲ್ಕು ಹೆಚ್ಚುವರಿ ಪಾಯಿಂಟ್‌ಗಳನ್ನು ತೆಗೆದು, ತೂಕ ಮಾಡುವುದನ್ನು ತ್ವರಿತಗೊಳಿಸಬೇಕು. 15 ದಿನಗಳೊಳಗೆ ಜೋಳ ಖರೀದಿ ಮಾಡಬೇಕು. ಪ್ರತಿ ದಿನ ನನಗೆ ಮಾಹಿತಿ ಅಪ್‌ಡೇಟ್‌ ಮಾಡಬೇಕು ಎಂದರು.

ಇದನ್ನೂ ಓದಿ :ಹೆಚ್ಚುತ್ತಿದೆ ಹೋರಾಟ ಕಿಚ್ಚು

ಇದಕ್ಕೂ ಮೊದಲು ತಾಲೂಕಿನ ಕಲ್ಲೂರು ಬಳಿಯ ಖರೀದಿ ಕೇಂದ್ರದ ಉಗ್ರಾಣಕ್ಕೆ ಭೇಟಿ ನೀಡಿ ವಿವರ ಸಂಗ್ರಹಿಸಿದರು. ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಕೀಲ್‌ ಅವರನ್ನು ದೂರವಾಣಿಯಲ್ಲಿ ಸಂಪರ್ಕಿಸಿ, ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಸೂಚನೆ ನೀಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್‌ ಮಂಜುನಾಥ ಭೋಗಾವತಿ, ಸಹಾಯಕ ಕೃಷಿ ನಿರ್ದೇಶಕ ಪ್ರಶಾಂತ, ಆಹಾರ ನಿಗಮದ ಅಧಿ ಕಾರಿಗಳಾದ ಆನಂದ ಮೋಹನ್‌, ಆಹಾರ ನಿಗಮದ ಮ್ಯಾನೇಜರ್‌ ಪಾಷಾ, ಜೆಡಿಎಸ್‌ ಮುಖಂಡ ನಾಗೇಶ್‌ ಹಂಚಿನಾಳ, ಸರ್ವೆ ಮೇಲ್ವಿಚಾರಕ ಶಾಂತಕುಮಾರ್‌ ಇದ್ದರು.

ಟಾಪ್ ನ್ಯೂಸ್

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

1-JMM

Jharkhand; ಸಿಎಂ ಆಗಿ ಹೇಮಂತ್ ಸೊರೇನ್ ಪ್ರಮಾಣ ವಚನ ಸ್ವೀಕಾರ

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

ಪ್ರಯಾಣಿಕರಿಗೆ ಟಿಕೆಟ್‌ ಅಗತ್ಯವಿಲ್ಲದ ಭಾರತದ ಏಕೈಕ ಉಚಿತ ರೈಲು ಪ್ರಯಾಣದ ಬಗ್ಗೆ ಗೊತ್ತಾ?

Renukaswamy Case: ಬೆನ್ನುನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-qeqwewq

Udupi; ಶ್ರೀ ಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ: ಡಿ.1 ರಂದು ದೀಪೋತ್ಸವ

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

156

Nikhil Kumarswamy: ಸೋತ ನಿಖಿಲ್‌ಗೆ ಜಿಲೆಯ ಪಕ್ಷ ಸಂಘಟನೆ ಹೊಣೆ

Vijayapura: ಬಿಚ್ಚಿಟ್ಟರೆ ಬಣ್ಣ ಬಯಲು, ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು: ಯತ್ನಾಳ್

ಬಾಯಿ ಮುಚ್ಚಿ ಕುಳಿತರೆ ಒಳ್ಳೆಯದು, ಇಲ್ಲದಿದ್ದರೆ.. ಸ್ವಪಕ್ಷೀಯರ ವಿರುದ್ಧವೇ ಯತ್ನಾಳ್ ಕಿಡಿ

fir

Karnataka ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿರುದ್ಧ ಲೈಂಗಿ*ಕ ದೌರ್ಜನ್ಯ ಪ್ರಕರಣ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

1-ajmir

Ajmer dargah ಶಿವ ದೇವಾಲಯ?; ಕೋಮು ಸೌಹಾರ್ದತೆಗೆ ಭಂಗ ತರುವ ಕುತಂತ್ರ: ಖಾದಿಮರ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.