ತಾಲೂಕು ಕೇಂದ್ರಗಳಲ್ಲೇ ಮೌಲ್ಯಮಾಪನ ನಡೆಸಿ
Team Udayavani, Jun 29, 2020, 6:20 PM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಮುದಗಲ್ಲ: ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿವೆ. ಪರೀಕ್ಷೆ ಮುಗಿದ ನಂತರ ಉತ್ತರಪತ್ರಿಕೆಗಳ ಮೌಲ್ಯಮಾಪನವನ್ನು ತಾಲೂಕು ಹಂತದಲ್ಲೇ ನಡೆಸಬೇಕೆಂದು ಕರ್ನಾಟಕ ರಾಜ್ಯ ಗ್ರಾಮೀಣ ಪ್ರೌಢಶಾಲಾ ಶಿಕ್ಷಕ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಕನ್ನಡ ಮಾಧ್ಯಮ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಜಿಲ್ಲಾ ಹಂತದಲ್ಲಿ ನಡೆಯುತ್ತದೆ. ಉಳಿದ ಮಾಧ್ಯಮ ಪತ್ರಿಕೆಗಳ ಮೌಲ್ಯಮಾಪನಕ್ಕೆ ಶಿಕ್ಷಕರು ಬಹಳ ದೂರ ಹೋಗಬೇಕಿದೆ. ಕೋವಿಡ್ ಸೋಂಕಿನ ಭೀತಿ ಇದ್ದು, ಈ ಹಿನ್ನೆಲೆಯಲ್ಲಿ ಶಿಕ್ಷಕರ ಸುರಕ್ಷತೆ ದೃಷ್ಟಿಯಿಂದ ತಾಲೂಕು ಹಂತದಲ್ಲೇ ಮೌಲ್ಯಮಾಪನ ನಡೆಸಬೇಕು. ಇದರಿಂದ ಗ್ರಾಮೀಣ ಪ್ರದೇಶದಿಂದ ಬರುವ ಶಿಕ್ಷಕರು ತಮ್ಮ ಸ್ವಂತ ವಾಹನದಲ್ಲಿ ಮೌಲ್ಯಮಾಪನ ಕೇಂದ್ರಗಳಿಗೆ ತೆರಳಲು ಅನುಕೂಲವಾಗುತ್ತದೆ. ಪ್ರತಿ ಜಿಲ್ಲೆಗೆ ಬರುವ ಎಲ್ಲ ಪತ್ರಿಕೆಗಳನ್ನು ಆಯಾ ತಾಲೂಕಿನ ಮೌಲ್ಯಮಾಪಕರ ಶಿಕ್ಷಕರ ಸಂಖ್ಯೆಗನುಗುಣವಾಗಿ ಆಯಾ ತಾಲೂಕುಗಳಿಗೆ ಪತ್ರಿಕೆಗಳನ್ನು ಹಂಚಿಕೆ ಮಾಡಬೇಕು. ತಾಲೂಕು ಕೇಂದ್ರದ ಒಳ್ಳೆಯ ಖಾಸಗಿ ಅಥವಾ ಸರಕಾರಿ ಕಾಲೇಜುಗಳಲ್ಲಿ ಮೌಲ್ಯಮಾಪನ ಪ್ರಾರಂಭಿಸಲು ಶಿಕ್ಷಣ ಸಚಿವರು ಆದೇಶಿಸಬೇಕೆಂದು ರಾಜ್ಯ ಗ್ರಾಮೀಣ ಪ್ರೌಢಶಾಲಾ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಪವಾಡೆಪ್ಪ, ಕಾರ್ಯಾಧ್ಯಕ್ಷ ಕೆ.ಬಿ. ಕುರಹಟ್ಟಿ ಪ್ರಧಾನ ಕಾರ್ಯದರ್ಶಿ ಭೀಮಾಶಂಕರ ಬಡಿಗೇರ ಹಾಗೂ ಗ್ರಾಮೀಣ ಪ್ರೌಢಶಾಲೆ ಸಂಘದ ಎಲ್ಲ ಜಿಲ್ಲಾ ಪದಾಧಿಕಾರಿಗಳು ಆಗ್ರಹಿಸಿದ್ದಾರೆ
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.