Muski:ಅದ್ದೂರಿಯಾಗಿ ನೆರವೇರಿದ ಮಲ್ಲಿಕಾರ್ಜುನ ದೇವರ ಮಹಾರಥೋತ್ಸವ 

120 ವರ್ಷಗಳ ಹಳೆಯ ರಥ..

Team Udayavani, Feb 24, 2024, 6:18 PM IST

1-sadsad

ಮಸ್ಕಿ: ಎರಡನೇ ಶ್ರೀ ಶೈಲ ಎಂದು ಪ್ರಸಿದ್ದಿ ಪಡೆದ ಕಲ್ಯಾಣ ಕರ್ನಾಟಕದ ಮಲ್ಲಿಕಾರ್ಜುನ ದೇವರ ಮಹಾರಥೋತ್ಸವವು ಶನಿವಾರ ಸಂಜೆ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು.

ಜಾತ್ರೆ ನಿಮಿತ್ತ ಬೆಳಗ್ಗೆ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಈಶ್ವರ ಲಿಂಗಕ್ಕೆ ಮಹಾ ಅಭಿಷೇಕ ಸೇರಿದಂತೆ ವಿವಿಧ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆದವು. ನಂತರ ರಥದ ಕಳಸಾರೋಹಣ ನಡೆಸಲಾಯಿತು. ಬೆಳಗ್ಗೆ ೧೧ ಗಂಟೆಗೆ ೧೨೦ ವರ್ಷಗಳಿಗೂ ಪುರಾತನ ಇತಿಹಾಸವಿರುವ ರಥವನ್ನು ಎಳೆದು ಭಕ್ತರು ಭಕ್ತಿ ಸಮರ್ಪಿಸಿದರು.

ಬಳಿಕ ಸಂಜೆ 5.೩೦ ಗಂಟೆಗೆ ಪಲ್ಲಕ್ಕಿಯಲ್ಲಿ ಮಲ್ಲಿಕರ್ಜುನನ ಉತ್ಸವ ಮೂರ್ತಿಯನ್ನು ನೂತನ ರಥದ ಸುತ್ತ ಐದು ಭಾರಿ ಪ್ರದಕ್ಷಣೆ ಹಾಕಿದ ನಂತರ ರಥದ ಮೇಲೆ ಪ್ರತಿಷ್ಠಾಪಿಸಲಾಯಿತು. ಮಸ್ಕಿಯ ಗಚ್ಚಿನ ಹಿರೇಮಠದ‌ ವರರುದ್ರಮುನಿ‌ ಶಿವಾಚಾರ್ಯರು,ಕೊಪ್ಪಳದ ಅಭಿನವ ಗವಿಶ್ರೀಗಳು ನೂತನವಾಗಿ ನಿರ್ಮಾಣಗೊಂಡ ರಥಕ್ಕೆ ಧಾರ್ಮಿಕ ವಿಧಿ-ವಿಧಾನಗಳಂತೆ ಪೂಜೆ ಸಲ್ಲಿಸಿ ರಥೋತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಿದರು.

ಭಕ್ತರು ಉತ್ತುತ್ತಿ ಬಾಳೆ ಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ದೈವದ ಕಟ್ಟೆವರೆಗೆ ರಥ ಎಳೆದು ವಾಪಾಸು ದೇವಸ್ಥಾನದ ಮುಂಭಾಗಕ್ಕೆ ತರಲಾಯಿತು. ಭೋವಿ (ವಡ್ಡರ್) ಸಮಾಜದ ಅನೇಕ ಯುವಕರು ಇಡೀ ದಿನ ಉಪವಾಸ ಹಾಗೂ ಮಡಿವಂತಿಕೆಯಿಂದ ತೆರಿನ ಕೆಳಗೆ ಇದ್ದು ರಥಕ್ಕೆ ಸೊನ್ನೆ ಹಾಕುವ ಮೂಲಕ ರಥೋತ್ಸವದ ಯಶಸ್ವಿಗೆ ಕಾರಣರಾದರು.

ರಥೋತ್ಸವದಲ್ಲಿ ಸಂಸದ ಸಂಗಣ್ಣ ಕರಡಿ,‌ ಕೇಂದ್ರದ ಮಾಜಿ‌ ಸಚಿವ ಬಸವರಾಜ ಪಾಟೀಲ್ ಅನ್ವರಿ, ಮಾಜಿ ಶಾಸಕ ಪ್ರತಾಪ್ ಗೌಡ ಪಾಟೀಲ್, ರಾಜಶೇಖರ ಹಿಟ್ನಾಳ, ಮಹಾದೇವಪ್ಪಗೌಡ ಪಾಟೀಲ್‌, ಸಿದ್ದನಗೌಡ ತುರುವಿಹಾಳ ದೇವಸ್ಥಾನ ಸಮಿತಿ ಸದಸ್ಯರು,ಮುಖಂಡರು ಭಾಗವಹಿಸಿದ್ದರು. ಸಾವಿರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ಭಕ್ತರು ಅದ್ಧೂರಿ ಜಾತ್ರೆಯ ಯಶಸ್ಸಿಗೆ ಸಾಕ್ಷಿಯಾದರು. ಸರ್ಕಲ್ ಇನ್ ಸ್ಪೆಕ್ಟರ್ ಮಲ್ಲಿಕಾರ್ಜುನ ‌ಇಕ್ಕಳಕಿ, ಪಿಎಸ್ಐ ವೈಶಾಲಿ ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.

ಟಾಪ್ ನ್ಯೂಸ್

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

Congress ಅಧಿವೇಶನದಿಂದ ಬಿಜೆಪಿ ಆತಂಕ, ಹೀಗಾಗಿ ಅಪಪ್ರಚಾರ: ಸುರ್ಜೇವಾಲಾ

EX-PM-M-Singh

Critical: ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಆರೋಗ್ಯದಲ್ಲಿ ಏರುಪೇರು; ಏಮ್ಸ್‌ಗೆ ದಾಖಲು

BGV–BIMS

Belagavi: ಬಿಮ್ಸ್ ಆಸ್ಪತ್ರೆಯಲ್ಲಿ ಮತ್ತೊರ್ವ ಬಾಣಂತಿ ಮೃತ್ಯು; ಕುಟುಂಬಸ್ಥರ ಆಕ್ರಂದನ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

RSS: ಮೋಹನ್‌ ಭಾಗವತರ ಮಂದಿರ,ಮಸೀದಿ ಹೇಳಿಕೆಗೆ ಈಗ ಆರೆಸ್ಸೆಸ್‌ ಪತ್ರಿಕೆ ಆಕ್ಷೇಪ

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು

Telangana: ಕಾನೂನು ಪಾಲನೆ ಕಡ್ಡಾಯ: ತೆಲುಗು ಚಿತ್ರರಂಗಕ್ಕೆ ತೆಲಂಗಾಣ ಸಿಎಂ ಖಡಕ್‌ ಮಾತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Demand to lift restrictions on rice transport from the Karnataka to Telangana

Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ

Sindhanur: ಲಾರಿ ಪಲ್ಟಿ… ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್​ ಸೇರಿ ಮೂವರ ದುರ್ಮರಣ

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್

ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್‌ 5 ವಿದ್ಯುತ್‌ ಘಟಕ ಸ್ಥಗಿತ

8-sirwar

Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

8

Kasaragod: ಟ್ಯಾಂಕರ್‌ ಲಾರಿಯಿಂದ ರಸ್ತೆಗೆ ಹರಿದ ಎಣ್ಣೆ

EX-PM-M-Singh

Passes Away: ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ವಿಧಿವಶ

crime

Siddapura: ಬೈಕಿಗೆ ಕಾರು ಡಿಕ್ಕಿ; ಸವಾರರು ಗಂಭೀರ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Syria ಸರ್ವಾಧಿಕಾರಿ ಬಶರ್‌ ಅಸಾದ್‌ ಪತ್ನಿಗೆ ಲ್ಯುಕೇಮಿಯಾ: ವರದಿ

Untitled-1

Kasaragod Crime News: ಬೈಕ್‌ ಕಳವು; ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.