ಪ್ರತ್ಯೇಕ ರಾಜ್ಯ ಬೇಡ; ಅಭಿವೃದ್ಧಿ ಬೇಕು!
Team Udayavani, Aug 2, 2018, 3:09 PM IST
ರಾಯಚೂರು: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ಆ.2ರಂದು ಬಂದ್‌ಗೆ ಕರೆ ನೀಡಿರುವುದಕ್ಕೆ ಹೈದರಾಬಾದ್ ಕರ್ನಾಟಕ ಜಿಲ್ಲೆಗಳಿಂದಲೇ ಪ್ರಬಲ ವಿರೋಧ ವ್ಯಕ್ತವಾಗುತ್ತಿದೆ. ನಮಗೆ ಪ್ರತ್ಯೇಕ ರಾಜ್ಯ ಬೇಡ, ಅಭಿವೃದ್ಧಿ ಬೇಕು ಎಂಬ ಘೋಷವಾಕ್ಯದಡಿ ಸಂಘಟನೆಗಳು ಹೋರಾಟ ಹಮ್ಮಿಕೊಂಡಿವೆ.
ರಾಜಕೀಯ ಪ್ರಲೋಭೆಗೆ ಸಿಲುಕಿ ನಮ್ಮನ್ನು ಹತ್ತಿಕ್ಕುವ ಹುನ್ನಾರ ನಡೆದಿದ್ದು, ಇದಕ್ಕೆ ನಾವು ಆಸ್ಪದ ನೀಡುವುದಿಲ್ಲ ಎಂದು ಎಚ್ಚರಿಸಿರುವ ಸಂಘಟನೆಗಳು, ಆ.2ರಂದು ನಡೆಯಲಿರುವ ಉ-ಕ ಬಂದ್‌ಗೆ ಬೆಂಬಲಿಸದಿರಲು ನಿರ್ಧರಿಸಿವೆ. ಅದಕ್ಕೆ ಪರ್ಯಾಯವಾಗಿ, 371 (ಜೆ) ಕಲಂ ಸಮರ್ಪಕ ಅನುಷ್ಠಾನ ಮೂಲಕ ಈ ಭಾಗದ ಪ್ರಗತಿಗೆ ಸರ್ಕಾರ ಮುಂದಾಗಲಿ ಎಂದು ಆಗ್ರಹಿಸಿ ಹೋರಾಟ ನಡೆಸಲು ನಿರ್ಧರಿಸಿವೆ.
ನಗರದಲ್ಲಿ ಬುಧವಾರ ಪೂರ್ವಭಾವಿ ಸಭೆ ನಡೆಸಿರುವ 20ಕ್ಕೂ ಅಧಿಕ ಸಂಘಟನೆಗಳ ಮುಖಂಡರು, ಸರ್ಕಾರ ಈ ಭಾಗವನ್ನು ನಿರ್ಲಕ್ಷಿಸಿರುವುದರಲ್ಲಿ ಸಂದೇಹವಿಲ್ಲ. ಆದರೆ, ಅದಕ್ಕೆ ಪ್ರತ್ಯೇಕ ರಾಜ್ಯ ಪರಿಹಾರವಲ್ಲ. ಈ ಭಾಗದ ಜನಪ್ರತಿನಿಧಿ ಗಳ ನ್ಯೂನತೆ ಅಡಗಿದೆ. ಅಲ್ಲದೇ, ಮುಂಬಯಿ ಕರ್ನಾಟಕ ಭಾಗದ ಜನ ನಮ್ಮ ಹೆಸರಿನಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವ ಹುನ್ನಾರ ನಡೆಸಿದ್ದಾರೆ. ಯಾವುದೇ ಕಾರಣಕ್ಕೂ ನಾವು ಬಲಿಪಶು ಆಗಲಾರೆವು ಎಂದು ಮುಖಂಡರು ತಿಳಿಸಿದ್ದಾರೆ.
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೂಡ ಸಭೆ ನಡೆಸಿ ಬೆಳಗಾವಿ, ಹುಬ್ಬಳ್ಳಿ, ಧಾರವಾಡದಂಥ ಆಯ್ದ ಜಿಲ್ಲೆಗಳ ನಾಯಕರೊಂದಿಗೆ ಸಭೆ ನಡೆಸಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಿದ್ದಾರೆ. ಆದರೆ, ಉತ್ತರ ಕರ್ನಾಟಕ ಎಂದರೆ ಹೈ-ಕ ಭಾಗವೂ ಸೇರಿದೆ ಎಂಬ ಕಲ್ಪನೆ ಅವರಿಗಿಲ್ಲದಿರುವುದು ವಿಷಾದನೀಯ. ಹೀಗಾಗಿ ಪ್ರತ್ಯೇಕ ರಾಜ್ಯಕ್ಕಿಂತ ಪ್ರಾದೇಶಿಕ ಅಸಮಾನತೆ ನಿವಾರಣೆ ಮಾಡಲಿ ಎಂದು ಒತ್ತಾಯಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಗಳ
ಮುಖಂಡರು ತಿಳಿಸಿದ್ದಾರೆ,
ಒಕ್ಕೊರಲ ಧ್ವನಿ
ಸಂಘಟನೆಗಳ ರಾಜ್ಯಾಧ್ಯಕ್ಷರು ಕರೆ ನೀಡಿದ್ದಾರೆ ಎಂಬ ಕಾರಣಕ್ಕೆ ಈ ಭಾಗಕ್ಕೆ ಸಂಭಂಧಿಸಿರದಿದ್ದರೂ ಅನೇಕ
ಹೋರಾಟಗಳಿಗೆ ಸಂಘಟನೆಗಳು ಬೆಂಬಲಿಸಿ ಪ್ರತಿಭಟಿಸಿವೆ. ಅಖಂಡ ಕರ್ನಾಟಕದ ಕಲ್ಪನೆಯಲ್ಲಿಯೇ ಕಾವೇರಿ ನದಿ ನೀರು ಹಂಚಿಕೆ, ಮಹದಾಯಿ, ಕಳಸಾ ಬಂಡೂರಿಯಂಥ ಹೋರಾಟಗಳಿಗೆ ಬೆಂಬಲ ನೀಡಿವೆ. ಆದರೆ, ಪ್ರಾದೇಶಿಕತೆ
ವಿಚಾರಕ್ಕೆ ಬಂದಾಗ ಸಂಘಟನೆಗಿಂತ ವೈಯಕ್ತಿಕ ಹಿತಾಸಕ್ತಿ ಮುಖ್ಯ ಎನ್ನುವುದು ಸಂಘಟನೆಗಳ ಅನಿಸಿಕೆ. ಹೀಗಾಗಿ ರಾಜ್ಯಾಧ್ಯಕ್ಷರು ಸೂಚನೆ ನೀಡದಿದ್ದರೂ ನಾವು ಪ್ರತ್ಯೇಕತೆ ವಿರೋ ಧಿಸಿ ಹೋರಾಟ ಮಾಡುವುದಾಗಿ ಎಲ್ಲ ಸಂಘಟನೆಗಳ ಮುಖಂಡರು ಒಕ್ಕೊರಲ ಧ್ವನಿ ಎತ್ತಿದ್ದಾರೆ.
ದಕ್ಷಿಣ ಕರ್ನಾಟಕ ಎಂದರೆ ಬೆಂಗಳೂರು, ಉತ್ತರ ಕರ್ನಾಟಕ ಎಂದರೆ ಬೆಳಗಾವಿ, ಹೈ-ಕ ಎಂದರೆ ಕಲಬುರಗಿ ಎಂಬ ತಪ್ಪು ಕಲ್ಪನೆ ನಿವಾರಣೆಯಾಗಬೇಕು. ಎಲ್ಲ ಜಿಲ್ಲೆಗಳಿಗೂ ಸಮಾನ ಪ್ರಾತಿನಿಧ್ಯ ಸಿಗಬೇಕು. ಈ ಭಾಗದ ಹಿಂದುಳಿಯುವಿಕೆಗೆ ಪ್ರತ್ಯೇಕ ರಾಜ್ಯ ಪರಿಹಾರವಲ್ಲ. ಎಲ್ಲರನ್ನು ಗಣನೆಗೆ ತೆಗೆದುಕೊಂಡು ಅಭಿವೃದ್ಧಿಗೆ ಮುಂದಾಗಬೇಕು. ರಾಜಕೀಯ, ಶೈಕ್ಷಣಿಕ ಕ್ಷೇತ್ರಗಳಲ್ಲಿ ಸಮಾನ ಪ್ರಾತಿನಿಧ್ಯ ನೀಡಬೇಕು. ಹೀಗಾಗಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯಕ್ಕಾಗಿ ನೀಡಿದ ಬಂದ್‌ಗೆ ನಮ್ಮ ವಿರೋಧವಿದೆ. 371 (ಜೆ) ಸಮರ್ಪಕ ಅನುಷ್ಠಾನಕ್ಕಾಗಿ ನಾವು ಹೋರಾಟ ಹಮ್ಮಿಕೊಂಡಿದ್ದೇವೆ. ಡಾ| ರಜಾಕ್ ಉಸ್ತಾದ್, ಹೈ-ಕ ಹೋರಾಟ ಸಮಿತಿ ಮುಖಂಡ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UI Movie Review: ಫೋಕಸ್ ಸಿಗೋವರೆಗೆ ಸಿನ್ಮಾ ನೋಡ್ತಾನೇ ಇರಿ!
Bantwal; ನಿಷೇಧವಿದ್ದರೂ ಹಳೇಯ ಸೇತುವೆಯಲ್ಲಿ ಸಂಚಾರ; ಸಿಲುಕಿಕೊಂಡ ಗೂಡ್ಸ್ ವಾಹನ
ರಬಕವಿ-ಬನಹಟ್ಟಿ: ಸಚಿವರಿಂದ ಬೇಡಿಕೆ ಈಡೇರಿಸುವ ಭರವಸೆ… ತಿಂಗಳ ಬಳಿಕ ನೇಕಾರರ ಹೋರಾಟ ಅಂತ್ಯ
German: ಮಾರುಕಟ್ಟೆಗೆ ನುಗ್ಗಿದ ಕಾರು, ಇಬ್ಬರು ಸಾವು, 60ಕ್ಕೂ ಹೆಚ್ಚು ಗಾಯ, ವೈದ್ಯನ ಬಂಧನ
Prithvi Shaw: ಮುಂಬೈ-ಶಾ ನಡುವೆ ಆರೋಪ ಸಮರ; ಅರ್ಧ ಗೊತ್ತಿದ್ದು ಮಾತಾಡಬೇಡಿ ಎಂದ ಶಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.