ಬಂಡಾಯ ಸಾಹಿತ್ಯಕ್ಕಿಲ್ಲ ಚೌಕಟ್ಟಿನ ಹಂಗು: ದೇವೇಂದ್ರಪ್ಪ

Team Udayavani, Dec 3, 2018, 2:23 PM IST

ray-2.jpg

ರಾಯಚೂರು: ಆರಂಭದಲ್ಲಿ ದಲಿತ ಸಾಹಿತ್ಯಕ್ಕೆ ಸಾತ್ವಿಕ ನೆಲೆಗಟ್ಟಿಲ್ಲ ಎಂದು ಅನೇಕರು ಜರಿದರು. ಆದರೆ, ಬೇರೆ ಸಾಹಿತ್ಯದಂತೆ ಇದಕ್ಕೆ ಯಾವುದೇ ಚೌಕಟ್ಟು, ಗಡಿ ರೇಖೆಗಳಿಲ್ಲ ಎಂಬುದನ್ನು ಅರಿಯಬೇಕು ಎಂದು ಗಂಗಾವತಿ ಸರ್ಕಾರಿ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ದೇವೇಂದ್ರಪ್ಪ ಜಾಜಿ ಹೇಳಿದರು.

ನಗರದ ರಂಗಮಂದಿರದಲ್ಲಿ ರವಿವಾರ ನಡೆದ ರಾಜ್ಯ ಮಟ್ಟದ ವಿಚಾರ ಸಂಕಿರಣದ ಗೋಷ್ಠಿಯಲ್ಲಿ ದಲಿತ ಬಂಡಾಯ ಸಾಹಿತ್ಯ; ಸೈದ್ಧಾಂತಿಕ ನೆಲೆಗಟ್ಟು ಎಂಬ ವಿಷಯದ ಕುರಿತು ಅವರು ಮಾತನಾಡಿದರು. 

70ರ ದಶಕದಲ್ಲಿ ಹುಟ್ಟಿಕೊಂಡ ಬಂಡಾಯ ಸಾಹಿತ್ಯದ ಚಳವಳಿ ನಾನಾ ಆಯಾಮ ಪಡೆಯಿತು. ಆದರೆ, ಇದನ್ನು ಒಪ್ಪದ ವ್ಯವಸ್ಥೆ ಅದೊಂದು ಸಾಹಿತ್ಯವೇ ಅಲ್ಲ ಎನ್ನುವಂತೆ ಮಾಡಿತ್ತು. ಅದಕ್ಕೂ ಮುನ್ನ ನಾಡಿನ ಮೇರು ಸಾಹಿತಿಗಳು ಕುಲಭೇದದ ಬಗ್ಗೆ ಬರೆದಿದ್ದರು ಎಂಬುದನ್ನು ಅರಿಯಬೇಕು. ಹರಿಹರ, ರಾಘವಾಂಕ, ವಾಲ್ಮೀಕಿಯಂಥವರು ತಮ್ಮ ಕೃತಿಗಳಲ್ಲಿ ಕುಲಭೇದವನ್ನು ಪ್ರಶ್ನಿಸಿದ್ದಾರೆ ಎಂದು ವಿವರಿಸಿದರು.

ದಲಿತ ಬಂಡಾಯ ಸಾಹಿತ್ಯ ಸ್ಥಗಿತಗೊಂಡಿಲ್ಲ. ಇಂದಿಗೂ ಅನೇಕ ಸಾಹಿತಿಗಳು ತಮ್ಮೊಳಗಿನ ತುಮುಲಗಳನ್ನು ಬರಹಗಳಲ್ಲಿ ದಾಖಲಿಸುತ್ತಿದ್ದಾರೆ. ಸಾಫ್ಟವೇರ್‌ ಯುಗದಲ್ಲಿ ನಾಜೂಕಾದ ಶೋಷಣೆಗಳು ದಾಳಿ ಮಾಡುತ್ತಲೇ ಇವೆ. ಆದರೆ, ಬಂಡಾಯದ ಜತೆಗೆ ನಾವಿದ್ದೇವೆ ಎನ್ನುವವರ ಬಗ್ಗೆಯೂ ಜಾಗರೂಕತೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಿದರು.

ದಲಿತ ಸಾಹಿತ್ಯ ಹಾಗೂ ಸಾಮಾಜಿಕ ತಲ್ಲಣಗಳ ಕುರಿತು ಮಾತನಾಡಿದ ದೇವೇಂದ್ರ ಹೆಗಡೆ, ಈಗ ನಮ್ಮೆದುರು ಸಂಕಲ್ಪಗಳೇ ಇಲ್ಲ ಎನ್ನುವ ತಲ್ಲಣ ಕಾಡುತ್ತಿದೆ. ಸಾಹಿತ್ಯದ ಬಗ್ಗೆ ಮಾತನಾಡಿ ಸುಮ್ಮನಾಗುತ್ತಿದ್ದೇವೆ. ಈಗ ಮನುವಾದ ಮತ್ತಷ್ಟು ಆಳಕ್ಕೆ ಬೇರು ಬಿಟ್ಟು ತಳದಿಂದ ಬೆಳೆಯುತ್ತಿದೆ. ನಮ್ಮ ಮನೆ ಪಕ್ಕದಲ್ಲಿ ಹಿಂದುತ್ವವಾದ ಬೆಳೆಯುತ್ತಿದ್ದರೆ ನಾವು ಮಾತ್ರ ನಮ್ಮ ವೈಚಾರಿಕೆ ನೆಲೆಗಟ್ಟಿನಲ್ಲಿ ಬೆಳೆಯದೆ ಹಿಂದುಳಿಯುತ್ತಿದ್ದೇವೆ ಎಂದು ವಿಷಾದಿಸಿದರು. ಆಶಯ ನುಡಿಗಳನ್ನಾಡಿದ ಪತ್ರಕರ್ತ ನಾಗತಿಹಳ್ಳಿ ನಾಗರಾಜ, ಈಗ ವ್ಯವಸ್ಥೆಯನ್ನು ಪ್ರಶ್ನಿಸಿದವರನ್ನು ನಗರ ನಕ್ಸಲ್‌ಗಳು ಎಂಬ ಹಣೆಪಟ್ಟಿ ಕಟ್ಟಲಾಗುತ್ತಿದೆ.

ದಲಿತರನ್ನು ನೇರವಾಗಿ ಗುರಿಯಾಗಿಸಿ ದಾಳಿ ಮಾಡಲಾಗುತ್ತಿದೆ. ಸಮಾನತೆ ಬೇಕಾದರೆ ಸವಾಲು ಎದುರಿಸಲೇಬೇಕು. ಪ್ರಗತಿಪರರು ಕೂಡ ಕೋಮುವಾದಿಗಳ ಜತೆ ಕೈ ಜೋಡಿಸುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಆತಂಕ ವ್ಯಕ್ತಪಡಿಸಿದರು. 

ಸಮಾಜವಾದ ಎಂದರೆ ದೇಶದ್ರೋಹ ಎನ್ನುವಂತಾಗಿದೆ. ಯುವಕರು ಸಾಮಾಜಿಕ ಜಾಲತಾಣಗಳನ್ನು ಸರಿಯಾಗಿ ಬಳಸಬೇಕು. ಕೇವಲ ಕಾಲಹರಣಕ್ಕೆ ಮಾತ್ರವಲ್ಲದೇ ನಮ್ಮತನ ಬಲಗೊಳ್ಳಲು ಬಳಸಿಕೊಳ್ಳಬೇಕು ಎಂದು ಹೇಳಿದರು.

ಹಿರಿಯ ಸಾಹಿತಿ ಅಲ್ಲಪ್ರಭು ಬೆಟ್ಟದೂರು ಅಧ್ಯಕ್ಷತೆ ವಹಿಸಿದ್ದರು. ಕಸಾಪ ನಿಕಟಪೂರ್ವ ಅಧ್ಯಕ್ಷ ಮಹಾಂತೇಶ ಮಸ್ಕಿ, ಸಾಹಿತಿ ವೀರ ಹನುಮಾನ, ಮಲ್ಲಿಕಾರ್ಜುನ ಶಿಖರಮಠ, ಎಂ.ಆರ್‌. ಭೇರಿ, ಚಾಂದಪಾಷಾ ಪಾಲ್ಗೊಂಡಿದ್ದರು. 

ಟಾಪ್ ನ್ಯೂಸ್

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

121

Horoscope: ಉದ್ಯೋಗ ಸ್ಥಾನದಲ್ಲಿ ಎರಡೂ ಬಗೆಯ ಅನುಭವಗಳು ಆಗಲಿದೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Raichur: hit for setting firecrackers in front of house

Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!

BJP doing election campaign on Waqf issue: Sharan Prakash Patil

Raichur: ವಕ್ಫ್‌ ವಿಚಾರದಲ್ಲಿ ಬಿಜೆಪಿ ಚುನಾವಣೆ ಪ್ರಚಾರ: ಶರಣ ಪ್ರಕಾಶ ಪಾಟೀಲ

10-

Maski ರುದ್ರಭೂಮಿಯಲ್ಲಿ ವಿದ್ಯುತ್ ವ್ಯವಸ್ಥೆ ಮಾಡುವಂತೆ ಸಾರ್ವಜನಿಕರ ಒತ್ತಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sirwara: ಮರಳು ತುಂಬಿದ ಲಾರಿ ಪಲ್ಟಿ : ಇಬ್ಬರಿಗೆ ಗಾಯ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

Sindhanur: ಬೈಕ್ ಗಳ ಮುಖಾಮುಖಿ ಡಿಕ್ಕಿ; ಇಬ್ಬರ ದುರ್ಮರಣ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Belegavi: ‘ನಾ ಡ್ರೈವರ್’ ಹಾಡಿನ ಗಾಯಕ ಮಾಳು ನಿಪನಾಳನಿಂದ ಯುವಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.