700 ಎಕರೆ ಭೂಸ್ವಾಧೀನ ಶಿಫಾರಸಿಗೆ ಸೂಚನೆ
Team Udayavani, Jun 20, 2020, 8:06 AM IST
ರಾಯಚೂರು: ಜಿಲ್ಲೆಯ ದೇವದುರ್ಗ ತಾಲೂಕಿನಲ್ಲಿ ಹೊಸದಾಗಿ ಕೈಗಾರಿಕಾ ಪ್ರದೇಶ ನಿರ್ಮಿಸುವ ಸಲುವಾಗಿ ನಿಲುವಂಜಿ, ಹೇರುಂಡಿ, ಕರೆಗೂಡ, ನಗರಗುಂಡ ಮತ್ತು ಕರಡಿಗುಡ್ಡ ಗ್ರಾಮಗಳಲ್ಲಿ ಒಟ್ಟು 700 ಎಕರೆ ಪ್ರದೇಶ ಭೂಸ್ವಾಧೀನ ಪಡಿಸಿಕೊಳ್ಳಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಮಂಡಳಿಗೆ ಶಿಫಾರಸು ಮಾಡಬೇಕು ಎಂದು ಜಿಲ್ಲಾಧಿಕಾರಿ ಆರ್. ವೆಂಕಟೇಶಕುಮಾರ ಕೆಐಎಡಿಬಿ ಜಿಲ್ಲಾ ಉಪ ಅಭಿವೃದ್ಧಿ ಅಧಿಕಾರಿ ಪ್ರಕಾಶ ಅವರಿಗೆ ಸೂಚನೆ ನೀಡಿದರು.
ನಗರದ ಜಿಪಂ ಸಭಾಂಗಣದಲ್ಲಿ ನಡೆದ ವಿಶೇಷ ಏಕಗವಾಕ್ಷಿ ಸಮಿತಿ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇವದುರ್ಗ ಅತಿ ಹೆಚ್ಚು ವಲಸೆ ಕಾರ್ಮಿಕರನ್ನು ಹೊಂದಿರುವ ತಾಲೂಕಾಗಿದೆ. ಇಲ್ಲಿ ಕೈಗಾರಿಕೆಗಳನ್ನು ಸ್ಥಾಪಿಸಿದ್ದಲ್ಲಿ ಕೆಲಸಕಾಗಿ ಗುಳೆಹೋಗುವವರ ಸಂಖ್ಯೆ ಕಡಿಮೆಯಾಗಲಿದೆ. ಈ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧ ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕೆಗಳನ್ನು ಸ್ಥಾಪಿಸಲು ಭೂಸ್ವಾಧೀನಪಡಿಸಿಕೊಳ್ಳಬೇಕಿದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಕೆಐಎಡಿಬಿ ವತಿಯಿಂದ 700 ಎಕರೆ ಪ್ರದೇಶವನ್ನು ಭೂಸ್ವಾಧೀನಪಡಿಸಿಕೊಳ್ಳಲು ಸಭೆಯಲ್ಲಿ ನಿರ್ಣಯಿಸಲಾಗಿದ್ದು, ಅದರಂತೆ ಶಿಫಾರಸು ಮಾಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.
ದೇವದುರ್ಗ ತಾಲೂಕಿನಲ್ಲಿ ವಿವಿಧ ರೀತಿಯ ಕೈಗಾರಿಕೆ ಸ್ಥಾಪನೆಗೆ ಉತ್ತಮ ಅವಕಾಶಗಳಿವೆ. ಕಾರ್ಮಿಕರು, ಕೃಷ್ಣ ನದಿಯಿಂದ ನೀರು ಸರಬರಾಜು ಮಾಡಲು ವ್ಯವಸ್ಥೆ ಇದೆ. ಅದರಿಂದ ಜಿಲ್ಲೆಯ ಅಭಿವೃದ್ದಿಗೆ ಹಲವು ಆಯಾಮಗಳು ದೊರೆಯಲಿವೆ ಎಂದು ಹೇಳಿದರು.
ಜಿಲ್ಲಾ ಕೈಗಾರಿಕಾ ಹಾಗೂ ವಾಣಿಜ್ಯೋದ್ಯಮ ಸಂಘದ ಅಧ್ಯಕ್ಷ ತ್ರಿವಿಕ್ರಮ ಜೋಷಿ, ಕಲಬುರಗಿ ವಿಶೇಷ ಭೂಸ್ವಾಧೀನಾಧಿಕಾರಿ ಶರಣಪ್ಪ ಸತ್ಯಂಪೇಟೆ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಮಹಮ್ಮದ್ ಇರ್ಫಾನ್ ಹಾಗೂ ಫ್ಯಾಕ್ಟರಿ ಮಾಲೀಕರ ಸಂಘದ ಅಧ್ಯಕ್ಷ ಲಕ್ಷ್ಮೀರೆಡ್ಡಿ, ರೈಸ್ ಮಿಲ್ಸ್ ಸಂಘದ ಅಧ್ಯಕ್ಷ ಶ್ರೀಕಾರ ರಾಘವೇಂದ್ರ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರದ ಉಪನಿರ್ದೇಶಕ ಬಸವರಾಜ ಯಂಕುಚ್ಚಿ ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Syria ಮಾಜಿ ಅಧ್ಯಕ್ಷ ಅಸಾದ್‌ಗೆ ವಿಚ್ಛೇದನ ಕೊಡಲು ಪತ್ನಿ ಚಿಂತನೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.