![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Nov 2, 2021, 10:59 AM IST
ರಾಯಚೂರು: ಖ್ಯಾತ ನಟ ಪುನೀತ್ ರಾಜ್‌ಕುಮಾರ್ ಸ್ಮರಣಾರ್ಥ ಜಿಲ್ಲೆಯ ಕಲಾವಿದರನ್ನು ಪ್ರೋತ್ಸಾಹಿಸಲು ಮುಂದಿನ ವರ್ಷದಿಂದ ರಾಜ್ಯೋತ್ಸವ ಪ್ರಶಸ್ತಿ ಜತೆಗೆ ಒಂದು ಲಕ್ಷ ರೂ. ಗೌರವಧನ ನೀಡುವುದಾಗಿ ನಗರ ಶಾಸಕ ಡಾ|ಶಿವರಾಜ್ ಪಾಟೀಲ್ ಘೋಷಿಸಿದರು.
ನಗರದಲ್ಲಿ ಸೋಮವಾರ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಕಲಾವಿದರನ್ನು ಪ್ರೋತ್ಸಾಹಿಸಲು ಈ ಯೋಜನೆ ಹಾಕಿಕೊಳ್ಳಲಾಗಿದೆ. ಕಲಾವಿದರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡುವ ಕೆಲಸ ಜಿಲ್ಲೆಯಿಂದ ಆರಂಭಿಸಲಾಗುವುದು. ಹೆಮ್ಮೆಯ ನಟ ಪುನೀತ್ ರಾಜ್ ಕುಮಾರ್ ಅಗಲಿರುವುದು ಕನ್ನಡ ನಾಡಿಗೆ ದೊಡ್ಡ ಆಘಾತವಾಗಿದೆ. ರಾಜ್ಯದ ಜನರಿಗೆ ಅನೇಕ ಸಾಮಾಜಿಕ ಕೆಲಸಗಳನ್ನು ಮಾಡುತ್ತಿದ್ದ ಅವರು, ಮಾನವೀಯ ಮೌಲ್ಯಗಳನ್ನು ಎತ್ತಿ ಹಿಡಿಯುತ್ತಿದ್ದರು. ಅವರು ಭೌತಿಕವಾಗಿ ಅಗಲಿದ್ದರೂ ಅವರ ಕೆಲಸಗಳಿಂದ ಇನ್ನೂ ಜೀವಂತವಾಗಿದ್ದಾರೆ. ಹೀಗಾಗಿ ಅವರ ಹೆಸರಿನಲ್ಲಿ ಈ ಪ್ರಶಸ್ತಿ ನೀಡಲಾಗುವುದು. ಈ ಪ್ರಶಸ್ತಿ ಜಿಲ್ಲೆಯಿಂದಲೇ ಆರಂಭಿಸಿದರೂ ರಾಜ್ಯಮಟ್ಟದಲ್ಲಿ ನೀಡುವಂತೆ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.
ಕರವೇ (ಶಿವರಾಮೆಗೌಡ ಬಣ) ಜಿಲ್ಲಾಧ್ಯಕ್ಷ ಅಶೋಕ ಕುಮಾರ್ ಜೈನ್, ಆರ್‌ಡಿಎ ಅಧ್ಯಕ್ಷ ಗೋಪಾಲರೆಡ್ಡಿ, ರವಿಂದ್ರ ಜಲ್ದಾರ್, ಕಡಗೋಲು ಆಂಜನೇಯ ಸೇರಿದಂತೆ ಅನೇಕರಿದ್ದರು.
You seem to have an Ad Blocker on.
To continue reading, please turn it off or whitelist Udayavani.