ಅಪೂರ್ಣ ಕಾಮಗಾರಿಗೆ ಉದ್ಘಾಟನೆ ಭಾಗ್ಯ!


Team Udayavani, Feb 25, 2018, 3:54 PM IST

vij-7.jpg

ರಾಯಚೂರು: ಚುನಾವಣೆ ಸಮೀಪಿಸುತ್ತಿದ್ದು, ಸರ್ಕಾರದ ಅವಧಿ ಮುಗಿಯುವ ಮುನ್ನೆಲೆಯಲ್ಲಿ ನನೆಗುದಿಗೆ ಬಿದ್ದ ಕಾಮಗಾರಿಗಳಿಗೆ ಎಲ್ಲಿಲ್ಲದ ವೇಗ ಸಿಕ್ಕಿದ್ದು, ಅರೆಬರೆ ಸ್ಥಿತಿಯಲ್ಲೇ ಉದ್ಘಾಟನೆಗೆ ಜಿಲ್ಲಾಡಳಿತ ಮುಂದಾಗಿದೆ.

ಒಂದು ವಾರದಲ್ಲಿ ಎರಡನೇ ಬಾರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಮುಗಿಯದ ಕಾಮಗಾರಿಗಳನ್ನೂ ಉದ್ಘಾಟಿಸುತ್ತಿದ್ದಾರೆ. ಫೆ.27ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ರಾಯಚೂರಿಗೆ ಆಗಮಿಸುತ್ತಿದ್ದು, ಬಾಕಿ ಉಳಿದ ಕಾಮಗಾರಿಗಳಿಗೆ ತರಾತುರಿಯಲ್ಲಿ ಅಂತಿಮ ಸ್ಪರ್ಶ ನೀಡಲಾಗುತ್ತಿದೆ.

ಮುಗಿಯದಿದ್ದರೂ ಉದ್ಘಾಟನೆ..?: ಹಲವು ವರ್ಷಗಳಿಂದ ನಡೆದ ಬಹುಕೋಟಿ ವೆಚ್ಚದ ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇನ್ನೂ ಸಾಕಷ್ಟು ಕೆಲಸ ಬಾಕಿ ಇದೆ. ಅಂತಿಮ ಸ್ಪರ್ಶ ನೀಡಿಲ್ಲ. ನೆಲಹಾಸು ಕೆಲಸ ಶುರುವಾಗಿಲ್ಲ. ಆದರೆ ಸರ್ಕಾರದ ಅವಧಿ ಮುಗಿಯುತ್ತಿದೆ ಎಂಬ ಕಾರಣಕ್ಕೆ ತರಾತುರಿಯಲ್ಲಿ ಕೆಲಸ ಮುಗಿಸಿ ಉದ್ಘಾಟನೆಗೆ ಸಿದ್ಧಗೊಳಿಸುತ್ತಿದ್ದಾರೆ. ಇದರ ಜತೆಗೆ ಜಿಮ್‌ ಕೂಡ ಲೋಕಾರ್ಪಣೆಗೊಳ್ಳಲಿದೆ. ಇನ್ನು ಗುರ್ಜಾಪುರ ಬ್ಯಾರೇಜ್‌ ಕೂಡ ನಿರ್ಮಾಣ ಹಂತದಲ್ಲಿದ್ದು, ಅದನ್ನೂ ಲೋಕಾರ್ಪಣೆಗೊಳಿಸುವ ಸಾಧ್ಯತೆಗಳಿವೆ.

ಇಂದಿರಾ ಕ್ಯಾಂಟೀನ್‌, ವಾಣಿಜ್ಯಿಕ ಉತ್ಪಾದನೆಗೆ ಮುಕ್ತಗೊಂಡ ವೈಟಿಪಿಎಸ್‌ನ್ನು ಅಧಿಕೃತವಾಗಿ ಉದ್ಘಾಟಿಸಲಾಗುವುದು. ಇದಲ್ಲದೇ ಜಿಲ್ಲಾಡಳಿತ ಭವನಕ್ಕೆ ಅಡಿಗಲ್ಲು ನೆರವೇರಿಸುವ ಕಾರ್ಯಕ್ರಮವಿದೆ.

ಈ ನಿಟ್ಟಿನಲ್ಲಿ ಸಂಸದ ಬಿ.ವಿ.ನಾಯಕ್‌, ವಿಧಾನ್‌ ಪರಿಷತ್‌ ಸದಸ್ಯರಾದ ಎನ್‌.ಎಸ್‌.ಬೋಸರಾಜ, ಜಿಲ್ಲಾಧಿಕಾರಿ ಡಾ| ಬಗಾದಿ ಗೌತಮ್‌ ಶನಿವಾರ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣ ಕಾಮಗಾರಿ ಪರಿಶೀಲಿಸಿದರು. ಬಾಕಿ ಉಳಿದ ಕಾಮಗಾರಿಗಳಿಗೆ ತ್ವರಿತಗತಿಯಲ್ಲಿ ಅಂತಿಮರೂಪ ನೀಡುವಂತೆ ಕಾಮಗಾರಿ ನಿರ್ವಹಿಸುತ್ತಿರುವ ಕ್ಯಾಶುಟೆಕ್‌ ಅಧಿಕಾರಿಗಳಿಗೆ ಸೂಚಿಸಿದರು.

ಕ್ರೀಡಾಂಗಣದಲ್ಲಿ ಸಂಗ್ರಹಗೊಂಡ ತ್ಯಾಜ್ಯ ವಿಲೇವಾರಿ ಮಾಡುವುದು ಮರಂ ಹಾಕಿಸಿ ನೆಲ ಸಮತಟ್ಟು ಮಾಡುವುದು ಸೇರಿ ವಿವಿಧ ಕೆಲಸ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು ತರಾತುರಿಯಲ್ಲಿ ಚಾಲನೆ-ಉದ್ಘಾಟನೆ ಜಿಲ್ಲೆಯಲ್ಲಿ ಎಲ್ಲ ಕ್ಷೇತ್ರಗಳಲ್ಲಿ ಬಾಕಿ ಉಳಿದ ಕಾಮಗಾರಿಗಳನ್ನು ಸಿಎಂ ಸಿದ್ದರಾಮಯ್ಯ ತರಾತುರಿಯಲ್ಲಿ ಉದ್ಘಾಟಿಸುತ್ತಿದ್ದಾರೆ. ವಾರದ ಹಿಂದೆಯಷ್ಟೇ ಮಸ್ಕಿ, ಸಿಂಧನೂರು ಕ್ಷೇತ್ರಕ್ಕೆ
ಆಗಮಿಸಿದ್ದ ಅವರು 1058 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ್ದರು.

ಈಗ ನಗರ ಮತ್ತು ಗ್ರಾಮೀಣ ಕ್ಷೇತ್ರದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡುತ್ತಿದ್ದಾರೆ. ಒಟ್ಟಾರೆ ಚುನಾವಣೆ ಎಫೆಕ್ಟ್ ಶುರುವಾಗಿದ್ದು, ಇನ್ನೂ ಯಾವೆಲ್ಲ ಕಾಮಗಾರಿಗಳಿಗೆ ಮುಕ್ತಿ ಸಿಗುವುದೋ ನೋಡಬೇಕು. 

ಟಾಪ್ ನ್ಯೂಸ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Draupadi Murmu addresses the joint House at the Old Parliament House

Old Parliament House: ಭಾರತದ ಸಂವಿಧಾನವು ಜೀವಂತಿಕೆಯ, ಪ್ರಗತಿಪರ ದಾಖಲೆ: ರಾಷ್ಟ್ರಪತಿ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

16-moodbidri

Moodabidri: ನಿವೃತ್ತ ದೈಹಿಕ ಶಿಕ್ಷಣ ನಿರ್ದೇಶಕ ಪಿ.ನೇಮಿರಾಜ ಹೆಗ್ಡೆ ನಿಧನ

Pakistan: 6 security personnel hit, shoot-at-sight order

Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ರಾಯಚೂರು: ರೈತರ ನಿದ್ದೆಗೆಡಿಸಿದ ಬೆಳೆದು ನಿಂತ “ಬಿಳಿ ಬಂಗಾರ’ ಹತ್ತಿ

3-raichur

Raichur: ರಾತೋ ರಾತ್ರಿ ದೇವಸ್ಥಾನ ತೆರವುಗೊಳಿಸಿದ ಜಿಲ್ಲಾಡಳಿತ ; ಬಿಜೆಪಿಯಿಂದ ಪ್ರತಿಭಟನೆ

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

Raichur: ಪ್ರಶ್ನೆಪತ್ರಿಕೆ ವಿಳಂಬ; ಪಿಡಿಒ ಪರೀಕ್ಷೆ ಬಹಿಷ್ಕಾರ

ಮಂತ್ರಾಲಯ ಶ್ರೀಗಳಿಂದ ತುಂಗಭದ್ರ ನದಿಯಲ್ಲಿ ದಂಡೋದಕ ಸ್ನಾನ

Mantralayam: ತುಂಗಭದ್ರಾ ನದಿಯಲ್ಲಿ ಮಂತ್ರಾಲಯ ಶ್ರೀಗಳಿಂದ ದಂಡೋದಕ ಸ್ನಾನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

2

Malpe: ಬೋಟಿನಲ್ಲಿದ್ದ ಮೀನುಗಾರ ನಾಪತ್ತೆ; ಪ್ರಕರಣ ದಾಖಲು

crime

Padubidri: ಸ್ಕೂಟಿಯಿಂದ ಬಿದ್ದು ಮಹಿಳೆಗೆ ತೀವ್ರ ಗಾಯ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.