ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ವಿರೋಧ
Team Udayavani, Jun 16, 2020, 1:27 PM IST
ರಾಯಚೂರು: ಸುಗ್ರಿವಾಜ್ಞೆ ಮೂಲಕ ಭೂ ಸುಧಾರಣೆ ಕಾಯ್ದೆ ಜಾರಿಗೊಳಿಸಿದ ಸರ್ಕಾರದ ನಡೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ನಗರದ ಡಾ|ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಭೂ ಸುಧಾರಣೆ ಕಾಯ್ದೆ ಕರಡು ಪ್ರತಿ ಸುಟ್ಟು ಹಾಕುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು. ರೈತಪರ ಎಂದು ಪ್ರಮಾಣ ವಚನ ಸ್ವೀಕರಿಸಿದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ರೈತ ವಿರೋಧಿ ಕಾನೂನುಗಳನ್ನೇ ಜಾರಿಗೆ ತರುತ್ತಿರುವುದು ಖಂಡನೀಯ. ರಾಜ್ಯದಲ್ಲಿ ರೈತರಿಗೆ ಮಾರಕವಾಗುವ ಕಾಯ್ದೆಗಳನ್ನೇ ಸರ್ಕಾರ ಜಾರಿಗೆ ತರುವ ಮೂಲಕ ಕೃಷಿ ವಲಯವನ್ನು ಮತ್ತಷ್ಟು ದುರ್ಬಲಗೊಳಿಸಲಾಗುತ್ತಿದೆ. ಜೂ.12ರಂದು ಭೂಸುಧಾರಣೆ ಕಾಯ್ದೆ ತಿದ್ದುಪಡಿಗಾಗಿ ಸುಗ್ರೀವಾಜ್ಞೆ ಹೊರಡಿಸಲು ಸಚಿವ ಸಂಪುಟದಲ್ಲಿ ನಿರ್ಧರಿಸಿರುವುದು ಖಂಡನೀಯ ಎಂದರು.
ಸಣ್ಣ, ಅತೀಸಣ್ಣ ರೈತರನ್ನು ಒಕ್ಕಲೆಬ್ಬಿಸಿ ಬಂಡವಾಳ ಶಾಹಿಗಳಿಗೆ ಅನುಕೂಲ ಮಾಡಿಕೊಟ್ಟಂತಾಗಲಿದೆ. ಭೂ ಮಿತಿ ಹೆಚ್ಚಿಸಿ ಬಹುರಾಷ್ಟ್ರೀಯ ಕಂಪೆನಿಗಳಿಗೆ ರೈತರ ಭೂಮಿಯನ್ನು ಸುಲಭಕ್ಕೆ ವಶಪಡಿಸಿಕೊಳ್ಳಲು ಅನುಕೂಲ ಮಾಡಿದಂತಾಗಿದೆ. ಅದರ ಜತೆಗೆ ಭೂ ಸುಧಾರಣೆ ತಿದ್ದುಪಡಿ ಕಾಯ್ದೆ ಜತೆಗೆ ಎಪಿಎಂಸಿ ತಿದ್ದುಪಡಿ ಕಾಯ್ದೆಗಳನ್ನು ಕೈಬಿಡಬೇಕು. 144 ಸೆಕ್ಷನ್ ಮುಗಿದ ಬಳಿಕ ರಾಜ್ಯಾದ್ಯಂತ ಜನಾಂದೋಲನ ನಡೆಸುವುದಾಗಿ ಎಚ್ಚರಿಸಿದರು.
ಸಂಘದ ರಾಜ್ಯ ಗೌರವಾಧ್ಯಕ್ಷ ಚಾಮರಸ ಮಾಲಿಪಾಟೀಲ, ಜಿಲ್ಲಾಧ್ಯಕ್ಷ ಸೂಗುರಯ್ಯ ಸ್ವಾಮಿ, ಮುಖಂಡರಾದ ಬೂದಯ್ಯಸ್ವಾಮಿ ಗಬ್ಬೂರು, ಮಲ್ಲಣ್ಣ ದಿನ್ನಿ, ಬಸವರಾಜ ಪಾಟೀಲ, ಲಿಂಗಾರೆಡ್ಡಿ ಪಾಟೀಲ, ಸಿದ್ದರಾಮಯ್ಯ ಸ್ವಾಮಿ ಇದ್ದರು. ಬಳಿಕ ಅಪರ ಜಿಲ್ಲಾಧಿಕಾರಿ ಮೂಲಕ ಸಿಎಂಗೆ ಮನವಿ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
Parliament: ಸಂಸದರ ತಳ್ಳಾಟ: ಇಂದು ಸಂಸತ್ ಭವನಕ್ಕೆ ದಿಲ್ಲಿ ಪೊಲೀಸರ ಭೇಟಿ?
Former Supreme Court Judge ವಿ.ಸುಬ್ರಹ್ಮಣಿಯನ್ ಎನ್‌ಎಚ್‌ಆರ್‌ಸಿ ಮುಖ್ಯಸ್ಥ
Shatrughan Sinha ಪುತ್ರಿ ವಿವಾಹ ಬಗ್ಗೆ ವಿಶ್ವಾಸ್ ವಿವಾದಾಸ್ಪದ ಹೇಳಿಕೆ
Maharashtra: ನಿಗದಿತ ಮಾರ್ಗ ಬಿಟ್ಟು ಬೇರೆಡೆ ಸಾಗಿದ ವಂದೇ ಭಾರತ್ ರೈಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.