ಅಧಿಕಾರಿಗಳ ಅಮಾನತಿಗೆ ಆದೇಶ
Team Udayavani, Feb 5, 2018, 4:04 PM IST
ರಾಯಚೂರು: ಕೊಳೆಗೇರಿ ಮಂಡಳಿಯಲ್ಲಿ 38 ಕೋಟಿ ರೂ. ಅನುದಾನವಿದ್ದರೂ ಬಳಸದೇ ನಿರ್ಲಕ್ಷ್ಯ ತೋರಿದ ಮಂಡಳಿಯ ಇಇ, ಎಇಇ ಅವರನ್ನು ಅಮಾನತುಗೊಳಿಸಲು ಆದೇಶ ನೀಡಲಾಗಿದೆ ಎಂದು ಸಾರಿಗೆ ಇಲಾಖೆ ಹಾಗೂ
ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಂ. ರೇವಣ್ಣ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ರವಿವಾರ ಜಿಲ್ಲಾಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿ ದರು. ಕೊಳೆಗೇರಿಗಳ ಪ್ರಗತಿಗೆ ಸರ್ಕಾರ ಕೋಟ್ಯಂತರ ಹಣ ನೀಡಿದೆ. ಆದರೆ, ಅಧಿಕಾರಿಗಳು ಮಾತ್ರ ಹಣವನ್ನು ಯೋಜನೆಗಳಿಗೆ ಬಳಸದೆ ನಿರ್ಲಕ್ಷ್ಯ ವಹಿಸಿದ್ದಾರೆ. ಫಲಾನುಭವಿಗಳನ್ನು ಆಯ್ಕೆ ಮಾಡಿಲ್ಲ. ಹೀಗಾಗಿ ಕ್ರಮಕ್ಕೆ ಸೂಚನೆ ನೀಡಲಾಗಿದೆ.
ಲೋಕೋಪಯೋಗಿ ಇಲಾಖೆಯಲ್ಲೂ 350 ಕೋಟಿ ರೂ. ಅನುದಾನವಿದ್ದು, ಸಮರ್ಪಕವಾಗಿ ಬಳಸಿಕೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಜೆಸ್ಕಾಂ ಇಲಾಖೆ ಅಧಿಕಾರಿಗಳಿಗೂ ನಿರ್ಲಕ್ಷ್ಯ ಧೋರಣೆ ಅನುಸರಿಸದಂತೆ ಸೂಕ್ತ ಎಚ್ಚರಿಕೆ ನೀಡಲಾಗಿದೆ. ನಗರದಲ್ಲಿ ಈ ಹಿಂದೆ ಆಗದಂಥ ಅಭಿವೃದ್ಧಿಯನ್ನು ಕಾಂಗ್ರೆಸ್ ಸರ್ಕಾರ ಮಾಡುತ್ತಿದೆ. ನಗರದಲ್ಲಿ ಮೂರು ಇಂದಿರಾ ಕ್ಯಾಂಟೀನ್‌ಗಳ ಸ್ಥಾಪನೆ ಕಾಮಗಾರಿ ಚುರುಕಾಗಿ ನಡೆಯುತ್ತಿದೆ. ಅಮೃತ ಯೋಜನೆಯಡಿ ವಿವಿಧ ಕಾಮಗಾರಿಗಳು ಉತ್ತಮ ರೀತಿಯಲ್ಲಿ ನಡೆದಿವೆ ಎಂದು ವಿವರಿಸಿದರು.
ನಗರದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಅಧಿಕಾರಿಗಳು ಅಗತ್ಯ ಕ್ರಮ ಕೈಗೊಂಡಿದ್ದಾರೆ. ಕೆರೆಗಳ ನವೀಕರಣಕ್ಕೆ, ಹೂಳೆತ್ತಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಉದ್ಯೋಗ ಖಾತ್ರಿಯಡಿ ಜಿಲ್ಲೆಯಲ್ಲಿ ಮಾನವ ದಿನಗಳ ಸೃಜನೆ ಹೆಚ್ಚಾಗಿದೆ ಎಂದರು.
ಜಿಲ್ಲೆಯ ಶೈಕ್ಷಣಿಕ ಅಭಿವೃದ್ಧಿಗಾಗಿ ಮುಂದಿನ ಶಿಕ್ಷಕರ ನೇಮಕದಲ್ಲಿ ಅತೀ ಹೆಚ್ಚು ಮೆರಿಟ್ ಪಡೆದವರನ್ನು ಈ ಭಾಗದಲ್ಲಿ ನೇಮಿಸಲಾಗುವುದು. ಸರ್ಕಾರಿ ಶಾಲೆಗಳಲ್ಲೂ ಉತ್ತಮ ಶಿಕ್ಷಣ ಸಿಗುತ್ತದೆ ಎಂಬ ಭಾವನೆ ಮೂಡಿಸಲು ಜಿಲ್ಲಾಡಳಿತ ವಿವಿಧ ಕಾರ್ಯಕ್ರಮ ಹಮ್ಮಿಕೊಳ್ಳುತ್ತಿದೆ ಎಂದು ತಿಳಿಸಿದರು.
ಜಿಲ್ಲಾ ಉತ್ಸವ ನಡೆಸಬೇಕು ಎಂಬ ಬೇಡಿಕೆ ಬಹು ದಿನಗಳಿಂದ ಇದೆ. ಹೈ-ಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಅನುದಾನ ಪಡೆದು ಉತ್ಸವ ನಡೆಸುವ ಚಿಂತನೆ ನಡೆದಿದೆ ಎಂದು ತಿಳಿಸಿದರು. ಸಂಸದ ಬಿ.ವಿ. ನಾಯಕ, ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜ, ಜಿಲ್ಲಾಧಿಕಾರಿ ಬಗಾದಿ ಗೌತಮ್, ಜಿಪಂ ಸಿಇಒ ಅಭಿರಾಂ ಜಿ.ಶಂಕರ, ಎಡಿಸಿ ಗೋವಿಂದರೆಡ್ಡಿ ಸೇರಿ ಇತರರಿದ್ದರು.
ಜಿಲ್ಲಾ ಉತ್ಸವ ಆಚರಣೆಗೆ ಕರವೇ ಒತ್ತಾಯ
ರಾಯಚೂರು: ರಾಯಚೂರು ಜಿಲ್ಲಾ ಉತ್ಸವ ಆಚರಣೆಗೆ ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಂ ರೇವಣ್ಣ ಅವರಿಗೆ ಮನವಿ ಸಲ್ಲಿಸಿದರು.
12 ವರ್ಷಗಳ ಹಿಂದೆ ಜಿಲ್ಲಾಧಿಕಾರಿ ತುಷಾರ ಗಿರಿನಾಥ ಹಾಗೂ ಶಾಸಕ ಎ.ಪಾಪಾರೆಡ್ಡಿ ಅಧ್ಯಕ್ಷತೆಯಲ್ಲಿ ಉತ್ಸವ ನಡೆಸಲಾಗಿತ್ತು. ಅದಾದ ನಂತರ ಈವೆರೆಗೆ ಉತ್ಸವ ಆಚರಿಸಿಲ್ಲ. ಈ ಕುರಿತು ಸಂಘಟನೆ ಹೋರಾಟಗಳ ಮೂಲಕ
ಜಿಲ್ಲಾಡಳಿತದ ಗಮನಕ್ಕೂ ತರಲಾಗಿದೆ. ಆದರೂ ಆಚರಿಸಿಲ್ಲ. ಹಿಂದಿನ ಜಿಲ್ಲಾ ಉಸ್ತುವಾರಿ ಸಚಿವ ತನ್ವೀರ್ ಸೇಠ್ಠ… ಅವರಿಗೂ ಮನವಿ ಮಾಡಿದಾಗ ಜಿಲ್ಲಾ ಉತ್ಸವಕ್ಕಾಗಿ ಐದು ಕೋಟಿ ಅನುದಾನ ಮೀಸಲಿಡಲಾಗಿದೆ ಎಂದಿದ್ದರು. ಹೀಗಾಗಿ ಕೂಡಲೇ ಜಿಲ್ಲಾ ಉತ್ಸವ ಆಚರಿಸುವಂತೆ ಒತ್ತಾಯಿಸಿದರು.
ಸಂಘಟನೆ ಜಿಲ್ಲಾಧ್ಯಕ್ಷ ವಿನೋದ ರೆಡ್ಡಿ, ಕಾರ್ಯಕರ್ತರಾದ ಕೊಂಡಪ್ಪ, ಚಾಂದ ಪಾಷಾ, ಹೊನ್ನಪ್ಪ, ಸಾದಿಕ್, ಫಿರೋಜ್, ಮಂಜು ಕಳಸ, ಟಿ.ವಿರೂಪಾಕ್ಷಿ, ಮೌಲಪ್ಪ, ರಾಜು, ಅಂಜಿ, ನರಸಿಂಹಲು, ಸತ್ಯಪ್ಪ, ಈಶಪ್ಪ, ಅಬೂಬ್‌ಕರ್ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Raichur: ರಾಜ್ಯದಿಂದ ತೆಲಂಗಾಣಕ್ಕೆ ಭತ್ತ ಸಾಗಣೆ ನಿರ್ಬಂಧ ತೆರವಿಗೆ ಆಗ್ರಹ
ಸಿಂಧನೂರು: ಲಾರಿ ಪಲ್ಟಿಯಾಗಿ ರಸ್ತೆ ಬದಿ ನಿಂತಿದ್ದ ಇಬ್ಬರು ಇಂಜಿನಿಯರ್ ಸೇರಿ ಮೂವರ ದುರ್ಮರಣ
Raichur: ಪಿಡಿಒ ಪ್ರಶ್ನೆಪತ್ರಿಕೆ ವಿಳಂಬ ಗಲಾಟೆ; ಈಗ ವಿಡಿಯೋ ವೈರಲ್
Raichur; ಬೇಡಿಕೆ ಕುಸಿತ: ಆರ್‌ಟಿಪಿಎಸ್ 5 ವಿದ್ಯುತ್ ಘಟಕ ಸ್ಥಗಿತ
Sirwar: ಹಳೆ ದ್ವೇಷ-ಯುವಕನ ಕೊಲೆ; ಮೂವರ ಬಂಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.